ರಾಯಚೂರಲ್ಲಿ ಸೇನಾ ನೇಮಕಾತಿ ರ್ಯಾಲಿ


Team Udayavani, Dec 11, 2018, 10:42 AM IST

ray-1.jpg

ರಾಯಚೂರು: ನಗರದ ಕೃಷಿ ವಿಶ್ವವಿದ್ಯಾಲಯದಲ್ಲಿ ಡಿ.11ರಿಂದ 20ರವರೆಗೆ ನಡೆಯಲಿರುವ ಸೇನಾ ನೇಮಕಾತಿ ರ್ಯಾಲಿಗೆ ಭರದ ಸಿದ್ಧತೆ ನಡೆದಿದೆ. ಈವರೆಗೆ ಆರು ಜಿಲ್ಲೆಗಳಿಂದ 37 ಸಾವಿರ ಅಭ್ಯರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದಾರೆ. ಕರ್ನಲ್‌ ಗ್ರೇಡ್‌ ಮಟ್ಟದ ಅಧಿಕಾರಿಗಳಿಂದ ಹಿಡಿದು ಸೈನಿಕ ಸಿಬ್ಬಂದಿವರೆಗೆ 100 ಜನರ ತಂಡ ಈಗಾಗಲೇ ಕೃಷಿ ವಿವಿಗೆ ಬಂದಿಳಿದಿದೆ. ಅವರ ಮಾರ್ಗದರ್ಶನದ ಮೇರೆಗೆ ಜಿಲ್ಲಾಡಳಿತ ಪರೀಕ್ಷೆಗಳಿಗೆ ಬೇಕಾದ ಸಿದ್ಧತೆ ಮಾಡಿಕೊಟ್ಟಿದೆ. ಮುಖ್ಯವಾಗಿ 1,600 ಮೀಟರ್‌ ಓಟಕ್ಕೆ ಕ್ರೀಡಾಂಗಣ ಸಿದ್ಧಗೊಳಿಸಲಾಗಿದೆ. ಅದರಲ್ಲಿ 5 ನಿಮಿಷ 30 ಸೆಕೆಂಡ್‌ನ‌ಲ್ಲಿ ಓಡುವವರನ್ನು ಕೆಟಗರಿ-1 ಮತ್ತು 5 ನಿಮಿಷ 45 ಸೆಕೆಂಡ್‌ನ‌ಲ್ಲಿ ಓಡುವವರನ್ನು ಕೆಟಗರಿ-2 ಎಂದು ವಿಂಗಡಿಸಲಾಗಿದೆ. ಒಂದು ವೇಳೆ ಈ ಪರೀಕ್ಷೆಯಲ್ಲಿ ಪಾಸಾಗದಿದ್ದರೆ ಮುಂದೆ ಯಾವುದೇ ಪರೀಕ್ಷೆಗೂ ಅಭ್ಯರ್ಥಿಗಳು ಅರ್ಹರಾಗುವುದಿಲ್ಲ. ವೈದ್ಯಕೀಯ ಪರೀಕ್ಷೆಗೂ ಪ್ರತ್ಯೇಕ ಕೋಣೆಗಳ ವ್ಯವಸ್ಥೆ ಮಾಡಲಾಗಿದೆ. ಬೆಳಗ್ಗೆ 6:00ರಿಂದಲೇ ಪರೀಕ್ಷೆ ಶುರುವಾಗಲಿದೆ.

ಮೂರು ಪಟ್ಟು ಜಾಸ್ತಿ: 2017ರ ಅಕ್ಟೋಬರ್‌ನಲ್ಲಿ ಕಲಬುರಗಿಯಲ್ಲಿ ಸೇನಾ ನೇಮಕಾತಿ ರ್ಯಾಲಿ ನಡೆಸಿದಾಗ ಜಿಲ್ಲೆಯಿಂದ ಕೇವಲ 600 ಜನ ಅಭ್ಯರ್ಥಿಗಳು ನೋಂದಣಿ ಮಾಡಿದ್ದರು. ಆದರೆ, ಈ ಬಾರಿ 1700 ಅಭ್ಯರ್ಥಿಗಳು ಜಿಲ್ಲೆಯವರೇ ನೋಂದಣಿ ಮಾಡಿದ್ದಾರೆ. ಈ ದೈಹಿಕ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ ಜನವರಿ, ಫೆಬ್ರವರಿಯಲ್ಲಿ ಲಿಖೀತ ಪರೀಕ್ಷೆ ನಡೆಯಲಿದೆ.

ಜಿಲ್ಲಾಡಳಿತದಿಂದ ಸಿದ್ಧತೆ: ಸೇನಾ ನೇಮಕಾತಿ ರ್ಯಾಲಿಗೆ ಬೇಕಾದ ಕ್ರೀಡಾಂಗಣ ಸಿದ್ಧತೆ, ಸಿಬ್ಬಂದಿಗೆ ವಸತಿ, ಊಟೋಪಚಾರಕ್ಕೆ ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಂಡಿದೆ. ಆನ್‌ಲೈನ್‌ನಲ್ಲಿ ಅರ್ಜಿ ಭರ್ತಿ ಮಾಡಿರುವ ಹಿನ್ನೆಲೆಯಲ್ಲಿ ಆದ್ಯತಾಧಾರದ ಮೇಲೆ ಪರೀಕ್ಷೆಗೆ ಅಭ್ಯರ್ಥಿಗಳನ್ನು ಕರೆಯಲಾಗುತ್ತಿದೆ. ಹೀಗಾಗಿ ನಿತ್ಯ ಮೂರರಿಂದ ಮೂರುವರೆ ಸಾವಿರ ಅಭ್ಯರ್ಥಿಗಳು ಪರೀಕ್ಷೆ ಎದುರಿಸುವ ಸಾಧ್ಯತೆಗಳಿವೆ. ಆದರೆ, ಅಭ್ಯರ್ಥಿಗಳು ಒಂದೇ ದಿನ ಬಂದು ಹೋಗುವ ಕಾರಣ ಅವರಿಗೆ ವಸತಿಗೆ ಸೌಲಭ್ಯ ಕಲ್ಪಿಸಿಲ್ಲ. ಕೇವಲ ತಾತ್ಕಾಲಿಕ ಶೌಚಗೃಹಗಳನ್ನು ಮಾತ್ರ ನಿರ್ಮಿಸಲಾಗಿದೆ.

ಜಿಲ್ಲಾಡಳಿತ ನಮ್ಮ ನಿರೀಕ್ಷೆಗೆ ತಕ್ಕಂತೆ ಕ್ರೀಡಾಂಗಣ ನಿರ್ಮಿಸಿಕೊಟ್ಟಿದೆ. ಎಲ್ಲ ವ್ಯವಸ್ಥೆಗಳು ಸುಸಜ್ಜಿತ ರೀತಿಯಲ್ಲಿ ಮಾಡಲಾಗಿದೆ. ನೇಮಕಾತಿಯನ್ನು ಪಾರದರ್ಶಕವಾಗಿ ಮಾಡಬೇಕು ಎಂಬ ಕಾರಣಕ್ಕೆ ಆನ್‌ಲೈನ್‌ ವ್ಯವಸ್ಥೆ ಜಾರಿ ಮಾಡಲಾಗಿದೆ. ಕೆಲ ಮಧ್ಯವರ್ತಿಗಳು ಹಣ ಪಡೆದು ಕೆಲಸ ಮಾಡಿಕೊಡುವ ಆಮಿಷ ತೋರಿಸುತ್ತಾರೆ. ಅಭ್ಯರ್ಥಿಗಳು ಯಾವುದೇ ಕಾರಣಕ್ಕೂ ಅಂಥ ವಂಚನೆಗೆ ಬಲಿಯಾಗಬಾರದು. ಅರ್ಹತೆ ಇದ್ದವರು ಖಂಡಿತ ಆಯ್ಕೆಯಾಗುತ್ತಾರೆ.
 ಪಿ.ದಂಗವಲ್‌, ಸೇನಾ ನೇಮಕಾತಿ ರ್ಯಾಲಿ ನಿರ್ದೇಶಕ

ಉಚಿತ ಊಟದ ವ್ಯವಸ್ಥೆ
ರಾಯಚೂರು: ನಗರದ ಕೃಷಿ ವಿವಿ ಆವರಣದಲ್ಲಿ ಡಿ.11ರಿಂದ 20ರವರೆಗೆ ನಡೆಯಲಿರುವ ಸೇನಾ ನೇಮಕಾತಿ ರ್ಯಾಲಿ ವೇಳೆ ಉಚಿತ ಊಟದ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಮುಖಂಡ ಚಂದ್ರಶೇಖರ ಪಾಟೀಲ ಮಿರ್ಜಾಪುರ ತಿಳಿಸಿದರು. ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 10 ದಿನಗಳ ಕಾಲ ನಡೆಯುವ ರ್ಯಾಲಿಯಲ್ಲಿ 37 ಸಾವಿರ ಅಭ್ಯರ್ಥಿಗಳು ಭಾಗವಹಿಸುವ ನಿರೀಕ್ಷೆ ಇದೆ. ಅಲ್ಲದೇ, ನೂರಾರು ಜನ ಸೇನಾ ಸಿಬ್ಬಂದಿ, ಜಿಲ್ಲಾಡಳಿತ ಸಿಬ್ಬಂದಿ ಕೂಡ ಪಾಲ್ಗೊಳ್ಳಲಿದ್ದಾರೆ. ಅವರೆಲ್ಲರಿಗೂ ಉಚಿತ ಊಟದ ವ್ಯವಸ್ಥೆ ಮಾಡಲು ನಿರ್ಧರಿಸಲಾಗಿದೆ. ಗಣೇಶ ಕಾಲೋನಿ ಹಾಗೂ ಡ್ಯಾಡಿ ಕಾಲೋನಿಯ ಈಶ್ವರ ದೇವಸ್ಥಾನ ಸೇವಾ ಸಮಿತಿ ನೇತೃತ್ವದಲ್ಲಿ ವಿವಿಧ ಸಂಘ-ಸಂಸ್ಥೆಗಳು ಈ ಕಾರ್ಯಕ್ಕೆ ಕೈ ಜೋಡಿಸಿವೆ ಎಂದು ತಿಳಿಸಿದರು. ದೇಶ ಕಾಯುವ ಮಹತ್ತರ ಕಾರ್ಯಕ್ಕೆ ಮುಂದಾಗುತ್ತಿರುವ ಅನೇಕ ಯುವಕರಿಗೆ ನಮ್ಮಿಂದ ಚಿಕ್ಕ ನೆರವು ಮಾಡಬೇಕು ಎಂಬ ಸದುದ್ದೇಶದಿಂದ ಉಚಿತ ಊಟದ ಸೇವಾ ಕಾರ್ಯ ಕೈಗೊಂಡಿದ್ದೇವೆ. ಈಗಾಗಲೇ 20 ಕ್ವಿಂಟಲ್‌ ಅಕ್ಕಿ, ತೊಗರಿ, ಬೇಳೆ, ತರಕಾರಿ, ಎಣ್ಣೆ ಸಂಗ್ರಹಿಸಿದ್ದು, ಒಂದು ಲಕ್ಷ ರೂ. ದೇಣಿಗೆ ಕೂಡ ಸಂಗ್ರಹವಾಗಿದೆ.

ದಾನಿಗಳು ಅಡುಗೆಗೆ ಬೇಕಾದ ವಸ್ತುಗಳನ್ನು ದೇಣಿಗೆ ರೂಪದಲ್ಲಿ ನೀಡಬಹುದು ಎಂದು ತಿಳಿಸಿದರು. ನಿತ್ಯ 3000 ಜನರಿಗೆ ಊಟ ನೀಡುವ ಉದ್ದೇಶವಿದ್ದು, 12 ಲಕ್ಷ ರೂ. ಖರ್ಚಾಗಬಹುದು ಎಂದು ಅಂದಾಜಿಸಲಾಗಿದೆ. ಮೊದಲ ದಿನ ಮಂಗಳವಾರ ಸಿರಾ ಮತ್ತು ಪಲಾವ್‌ ಮಾಡುತ್ತಿದ್ದು, ಉಳಿದ ದಿನಗಳಲ್ಲಿ ವಿವಿಧ ಬಗೆಯ ಅಡುಗೆ ಮಾಡಲಾಗುವುದು. ಸಮಾನ ಮನಸ್ಕರೆಲ್ಲ ಸೇರಿ ಹಣ ಸಂಗ್ರಹಿಸುತ್ತಿದ್ದು, ದಾನ ನೀಡಲು ಆಸಕ್ತಿ ಉಳ್ಳವರು ಮೊ: 99862 34887, 9449800765 ಸಂಖ್ಯೆಗಳಿಗೆ ಸಂಪರ್ಕಿಸಬಹುದು ಎಂದು ತಿಳಿಸಿದರು. ಕಲ್ಲೂರು ಬಸನಗೌಡ, ಭೀಮಾರೆಡ್ಡಿ, ಹೊಕ್ರಾಣಿ ನರೇಂದ್ರ, ಆದೋನಿ ಬಸವಂತಪ್ಪ, ಕೇದಾರನಾಥ ಸ್ವಾಮಿ, ಸಂಜೀವ ಕುಮಾರ, ಮಲ್ಲಿಕಾರ್ಜುನ ಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

Sindhanur: ಲಾರಿ ಪಲ್ಟಿ… ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

8-sirwar

Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.