ಉತ್ಸವ ಮೂರ್ತಿ ಕದ್ದವರ ಬಂಧನಕ್ಕೆ ಆಗ್ರಹ
ಕಟ್ಟೆಯವರೆಗೆ ಪಲ್ಲಕ್ಕಿಯಲ್ಲಿ ಉತ್ಸವ ಮೂರ್ತಿಯನ್ನು ತೆಗೆದುಕೊಂಡು ಹೋಗಲಾಗುತ್ತಿತ್ತು.
Team Udayavani, Feb 18, 2021, 5:56 PM IST
ರಾಯಚೂರು: ಕಲ್ಲೂರು ಗ್ರಾಮದ ಮಾರಟೇಶ್ವರ ದೇವಸ್ಥಾನದ ಉತ್ಸವ ಮೂರ್ತಿ ಕದ್ದ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು
ಎಂದು ಕರ್ನಾಟಕ ರಕ್ಷಣಾ ವೇದಿಕೆಯ (ಪ್ರವೀಣ ಶೆಟ್ಟಿ ಬಣ) ಕಲ್ಲೂರು ಹೋಬಳಿ ಘಟಕದ ಸದಸ್ಯರು ಒತ್ತಾಯಿಸಿದರು. ಈ ಕುರಿತು ಬುಧವಾರ ಡಿಸಿಗೆ ಮನವಿ ಸಲ್ಲಿಸಿದರು.
ಫೆ.13ರಂದು ಈ ಉತ್ಸವ ಮೂರ್ತಿ ಸುಮಾರು ಐದುನೂರು ವರ್ಷಗಳ ಹಳೆಯ ಮೂರ್ತಿಯಾಗಿದೆ. ಪ್ರತಿ ವರ್ಷ ಸಂಕ್ರಾಂತಿ ಹಬ್ಬದಂದು ನಡೆಯುವ ಜಾತ್ರಾ ಮಹೋತ್ಸವ ವೇಳೆ ಉತ್ಸವ ಮೂರ್ತಿ ಮೆರವಣಿಗೆ ನಡೆಸಲಾಗುತ್ತದೆ. ರಥದಲ್ಲಿಟ್ಟು ರಥೋತ್ಸವ ನಡೆಸಲಾಗುತ್ತಿತ್ತು. ದಸರಾ ಹಬ್ಬದ ವೇಳೆ ಬನ್ನಿ ಮರದ
ಕಟ್ಟೆಯವರೆಗೆ ಪಲ್ಲಕ್ಕಿಯಲ್ಲಿ ಉತ್ಸವ ಮೂರ್ತಿಯನ್ನು ತೆಗೆದುಕೊಂಡು ಹೋಗಲಾಗುತ್ತಿತ್ತು. ಇಂಥ ಪೌರಾಣಿಕ ಹಿನ್ನೆಲೆಯುಳ್ಳ ಮೂರ್ತಿ ಕಳವು ಮಾಡಿದ್ದು ಗ್ರಾಮಸ್ಥರ ನೋವುಂಟು ಮಾಡಿದೆ ಎಂದು ವಿವರಿಸಿದರು.
ಈ ಘಟನೆಯಿಂದ ಗ್ರಾಮಸ್ಥರಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ. ಕೂಡಲೇ ಮಾರಟೇಶ್ವರ ದೇವಸ್ಥಾನದಲ್ಲಿನ ಉತ್ಸವ ಮೂರ್ತಿ ಮಾಡಿದ ದುಷ್ಕರ್ಮಿಗಳನ್ನು ಬಂಧಿಸಬೇಕು ಹಾಗೂ ಅವರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಒತ್ತಾಯಿಸಿದರು.
ಸಂಘಟನೆಯ ಕಲ್ಲೂರು ಹೋಬಳಿ ಘಟಕದ ಅಧ್ಯಕ್ಷ ಶಾಂತಮೂರ್ತಿ, ಸದಸ್ಯರಾದ ವಿನೋದ ಕುಮಾರ, ಹರೀಶ್, ಅರ್ಜುನ್, ಮಹೇಂದ್ರ, ದೇವರಾಜ್, ಕುಮಾರ, ತೇಜಶ್ವರ, ಅನಿಲ್ ಕುಮಾರ ಹಾಗೂ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ
Raichur; ಜೆಸ್ಕಾಂ ಜೆ.ಇ ಹುಲಿರಾಜ ಮನೆ ಮೇಲೆ ಲೋಕಾಯುಕ್ತ ದಾಳಿ
Raichuru: ರಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವು; 3 ತಿಂಗಳಿನಲ್ಲಿ 12 ಮಂದಿ ಬಲಿ
Karnataka Politics: ಮುಂದಿನ ಅವಧಿಗೆ ‘ನಾನೇ ಸಿಎಂ ಅಭ್ಯರ್ಥಿ’: ಸತೀಶ್ ಜಾರಕಿಹೊಳಿ
Maski ಅಕ್ರಮ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ
MUST WATCH
ಹೊಸ ಸೇರ್ಪಡೆ
Udyavara: ಟ್ರಕ್ ಗೆ ಢಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು ; ಟ್ರಕ್ ಬೆಂಕಿಗೆ ಆಹುತಿ
Chikkamagaluru: ನಕ್ಸಲರ ಶರಣಾಗತಿ ಬೆನ್ನಲ್ಲೇ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು
Katapady: ಭೀಕರ ಅಪಘಾತ… ಹೊತ್ತಿ ಉರಿದ ಲಾರಿ, ದ್ವಿಚಕ್ರ ವಾಹನ; ಓರ್ವ ಗಂಭೀರ
BJP Politics: ಬಿ.ಎಸ್.ಯಡಿಯೂರಪ್ಪ ಅಖಾಡಕ್ಕೆ!; ಒಳಜಗಳ ಬಿಟ್ಟು ಒಗ್ಗಟ್ಟಿನ ಹೆಜ್ಜೆ ಹಾಕೋಣ
Dinner Politics: ಸಿದ್ದರಾಮಯ್ಯ ಬಣದಿಂದ ಡಿ.ಕೆ.ಶಿವಕುಮಾರ್‌ರತ್ತ “ಗುರಿ’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.