ನ್ಯಾಯವಾದಿಗಳಿಗೆ ಎಲ್ಲ ವಿಷಯಗಳ ಪರಿಣತಿ ಅಗತ್ಯ
Team Udayavani, Dec 9, 2018, 12:44 PM IST
ಮಾನ್ವಿ: ವಕೀಲರಿಗೆ ಕೇವಲ ತಮ್ಮ ವೃತ್ತಿ ಪುಸ್ತಕದ ಹೊರತಾಗಿಯು ಕೃಷಿ, ವೈದ್ಯಕೀಯ, ಸೇರಿ ಎಲ್ಲ ವಿಷಯಗಳ ಪರಿಣತಿ ಹೊಂದಿದ್ದರೆ ಮಾತ್ರ ಉತ್ತಮ ವಕೀಲರಾಗಿ ರೂಪುಗೊಳ್ಳಲು ಸಾಧ್ಯ ಎಂದು ಹೈಕೋರ್ಟ್ ನ್ಯಾಯಮೂರ್ತಿ ಹಾಗೂ ರಾಯಚೂರು ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿ
ಬಿ.ಎ.ಪಾಟೀಲ ಹೇಳಿದರು.
ರಾಯಚೂರು ಜಿಲ್ಲಾ ನ್ಯಾಯಾಂಗ ಇಲಾಖೆ, ವಕೀಲರ ಸಂಘ ಮಾನ್ವಿ ಹಾಗೂ ಲೋಕೋಪಯೋಗಿ ಇಲಾಖೆ ರಾಯಚೂರು ಇವರ ಸಂಯುಕ್ತಾಶ್ರಯದಲ್ಲಿ ಶನಿವಾರ ಪಟ್ಟಣದ ಸಿವಿಲ್ ನ್ಯಾಯಾಲಯ ಆವರಣದಲ್ಲಿ ಹಮ್ಮಿಕೊಂಡಿದ್ದ ತಾಲೂಕಿನ ನೂತನ ಸಿವಿಲ್ ನ್ಯಾಯಾಲಯ ಕಟ್ಟಡ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.
ವಕೀಲರು ಕೇವಲ ಒಂದು ವಿಷಯದಲ್ಲಿ ಪರಿಣತಿ ಸಾಧಿಸಿದರೆ ಸಾಲದು, ಆತನಿಗೆ ಎಲ್ಲ ಕ್ಷೇತ್ರಗಳ ಜ್ಞಾನ ಇರಬೇಕು ಅಂದಾಗ ಮಾತ್ರ ತನ್ನ ಕಕ್ಷಿದಾರರಿಗೆ ನ್ಯಾಯ ಒದಗಿಸಲು ಸಾಧ್ಯ ಎಂದರು. ಹಿರಿಯ ವಕೀಲರ ಮಾರ್ಗದರ್ಶನದಲ್ಲಿ ಕಿರಿಯ ವಕೀಲರು ಸಾಗಬೇಕು. ಅವಕಾಶ ಬಂದಾಗ ಮುನ್ನುಗ್ಗಬೇಕು. ಪ್ರಸ್ತುತ ತಂತ್ರಜ್ಞಾನ ಬೆಳೆದಿದ್ದು ಅದರ ಸದುಪಯೋಗ ಪಡೆದುಕೊಳ್ಳುವಂತೆ ಸಲಹೆ ನೀಡಿದರು.
ಶಾಸಕ ರಾಜಾವೆಂಕಟಪ್ಪ ನಾಯಕ ಮಾತನಾಡಿ, ವಕೀಲರ ವೃತ್ತಿ ತುಂಬಾ ಗೌರವಯುತವಾದದ್ದು, ವೃತ್ತಿಗೆ ಧಕ್ಕೆ ಬರದಂತೆ ಸರಿಯಾದ ಮಾರ್ಗದಲ್ಲಿ ಸಾಗಬೇಕು. ಸಿವಿಲ್ ನ್ಯಾಯಾಲಯದಲ್ಲಿ ಹಲವು ವರ್ಷಗಳ ಪ್ರಕರಣಗಳು ವಿಲೇವಾರಿಯಾಗದೆ ಬಾಕಿ ಉಳಿದುಕೊಂಡಿವೆ. ಬಾಕಿ ಇರುವ ಪ್ರಕರಣಗಳನ್ನು ಅದಷ್ಟು ಬೇಗ ಇತ್ಯರ್ಥಗೊಳಿಸಬೇಕು. ಇದಕ್ಕೆ ಸಾರ್ವಜನಿಕರು ಕೂಡ ಸಹಕರಿಸಬೇಕು ಎಂದರು.
ವಿಧಾನ ಪರಿಷತ್ ಸದಸ್ಯ ಎನ್.ಎಸ್. ಬೋಸರಾಜು ಮಾತನಾಡಿ, ಇಲ್ಲಿನ ಸಿವಿಲ್ ಕೋರ್ಟ್‌ಗೆ 70 ವರ್ಷಗಳ ಇತಿಹಾಸವಿದೆ. ಸಿವಿಲ್ ನ್ಯಾಯಾಲಯ ಹೊಸ ಕಟ್ಟಡ ಕಾಮಗಾರಿ ಕಳೆದ ವರ್ಷವೇ ಪ್ರಾರಂಭಗೊಳ್ಳಬೇಕಿತ್ತು. ಆದರೆ ಕಾರಣಾಂತರದಿಂದ ಸಾಧ್ಯವಾಗಿರಲಿಲ್ಲ. ಇಂದು ಶಂಕುಸ್ಥಾಪನೆ ನೆರವೇರಿರುವುದು ಖುಷಿಯ ವಿಚಾರ ಎಂದರು.
ಅಧ್ಯಕ್ಷತೆ ವಹಿಸಿದ್ದ ರಾಯಚೂರು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧಿಧೀಶ ಬೈಲೂರು ಶಂಕರರಾಮ ಮಾತನಾಡಿದರು. ರಾಯಚೂರು ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಅಧಿಕಾರಿ ಬಿ.ಬಿ.ಪಾಟೀಲ, ವಕೀಲರ ಸಂಘದ ಅಧ್ಯಕ್ಷ ಬಿ.ಕೆ.ಅಮರೇಶಪ್ಪ, ಪ್ರ.ಕಾರ್ಯದರ್ಶಿ ಸೈಯ್ಯದ್ ತಾಹೇರ್ ಹುಸೇನಿ ಮತವಾಲೆ ಇದ್ದರು.
ಶಾಸಕಾಂಗ, ಕಾರ್ಯಾಂಗಕ್ಕಿಂತ ನ್ಯಾಯಾಂಗದ ಪಾತ್ರ ಅಗಾಧ. ಅದನ್ನು ಜವಾಬ್ದಾರಿಯಿಂದ ನಿಬಾಯಿಸಬೇಕು. ಇದಕ್ಕಾಗಿ ಕಠಿಣ ಪರಿಶ್ರಮ ಪಡಬೇಕು. ಎಲ್ಲವನ್ನೂ ಓದಬೇಕು. ಹೊಸ, ಹೊಸ ಅಲೋಚನೆಗಳ ಮೂಲಕ ಕಕ್ಷಿದಾರರಿಗೆ ನ್ಯಾ ದೊರಕಿಸಿಕೊಡಬೇಕು.
ನ್ಯಾ| ಎ.ಬಿ. ಪಾಟೀಲ, ರಾಜ್ಯ ಉತ್ಛ ನ್ಯಾಯಾಲಯದ ನ್ಯಾಯಮೂರ್ತಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.