ವಿವಿಧ ಸೌಲಭ್ಯಕ್ಕೆ ವೈದ್ಯ ಸಿಬ್ಬಂದಿ ಒತ್ತಾಯ
Team Udayavani, May 18, 2020, 5:10 PM IST
ಬಳಗಾನೂರು: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ಸಿಬ್ಬಂದಿ ಕಪ್ಪು ಪಟ್ಟಿ ಧರಿಸಿ ವೈದ್ಯಕೀಯ ಸೇವೆ ಸಲ್ಲಿಸಿದರು
ಬಳಗಾನೂರು: ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದ ಗುತ್ತಿಗೆ ಹಾಗೂ ಹೊರಗುತ್ತಿಗೆ ಸಿಬ್ಬಂದಿ ಕಪ್ಪು ಪಟ್ಟಿ ಧರಿಸಿ ಸೇವೆ ಸಲ್ಲಿಸಿದರು.
2016ರ ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನ ಆದೇಶದಂತೆ ಗುತ್ತಿಗೆ ಆಧಾರದ ಮೇರೆಗೆ ಕಾರ್ಯ ನಿರ್ವಹಿಸುತ್ತಿರುವ ವೈದ್ಯಕೀಯ ಸಿಬ್ಬಂದಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು. ಜತೆಗೆ ವೇತನ ಪರಿಷ್ಕರಣೆ, ಸೇವಾ ಭದ್ರತೆ ಒದಗಿಸಬೇಕು. ವೈದ್ಯಕೀಯ ರಜೆಗಳು, ಪದೋನ್ನತಿ ನೇಮಕಾತಿಯಲ್ಲಿ ಕೃಪಾಂಕ, ವಿಮಾ ಸೌಲಭ್ಯ, ಡೆತ್ ಬೆನ್‌ಪಿಟ್ ಜತೆಗೆ ಕೋವಿಡ್ ಸಂದರ್ಭದಲ್ಲಿ ಕಾರ್ಯನಿರ್ವಹಿಸಿದ ಸಿಬ್ಬಂದಿಗೆ ಕಿಟ್ ನೀಡಬೇಕು ಎಂದು ಆಗ್ರಹಿಸಿದರು.
ಮೇ 12ರಿಂದ21ರ ವರೆಗೆ ಕಪ್ಪು ಪಟ್ಟಿ ಧರಿಸಿಕೊಂಡು ಸೇವೆ ಸಲ್ಲಿಸಲು ಮುಂದಾಗಿದ್ದು, ಒಂದು ವೇಳೆ ಸರ್ಕಾರ ಮೇ 21ರೊಳಗಾಗಿ ಸ್ಪಂದಿಸದಿದ್ದರೆ ಸಂಘದ ನಿರ್ದೇಶನದಂತೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ವೈದ್ಯರು, ಸಿಬ್ಬಂದಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.