ಬಿಜೆಪಿ ಕಾರ್ಯಕಾರಿಣಿ ಸದಸ್ಯತ್ವಕ್ಕೆ ಬಂಡಿ ರಾಜೀನಾಮೆ
Team Udayavani, Jan 23, 2018, 4:44 PM IST
ಲಿಂಗಸುಗೂರು: ಬಿಜೆಪಿ ವರಿಷ್ಠರು ತಮ್ಮನ್ನು ಕಡೆಗಣಿಸಿದ್ದಕ್ಕೆ ಮನನೊಂದು ರಾಜ್ಯ ಕಾರ್ಯಕಾರಿಣಿ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸುತ್ತಿರುವುದಾಗಿ ಮುಖಂಡ ಸಿದ್ಧು ವೈ.ಬಂಡಿ ಹೇಳಿದರು. ಸೋಮವಾರ ಪಟ್ಟಣದ ತಮ್ಮ ಕಾರ್ಯಾಲಯದಲ್ಲಿ ಬೆಂಬಲಿಗರ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ಒಂದು ದಶಕದಲ್ಲಿ ರೈತ ಚೈತನ್ಯ ಯಾತ್ರೆ, ಬಿಜೆಪಿ ಸದಸ್ಯತ್ವ ಅಭಿಯಾನದಡಿ 1.04 ಲಕ್ಷ ಸದಸ್ಯರ ನೊಂದಣಿ, ಎಸ್‌ಟಿ ಸಮಾವೇಶ, ಜಿಲ್ಲಾ ಮಹಿಳಾ ಸಮಾವೇಶ, ಪರಿವರ್ತನೆ ಯಾತ್ರೆ ಸೇರಿದಂತೆ ಪಕ್ಷದ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸಿ ಗ್ರಾಮೀಣ ಮಟ್ಟದಲ್ಲಿ ಪಕ್ಷ ಸಂಘಟನೆಯಾಗಲು ಶ್ರಮಿಸಿದ್ದೇನೆ.
ಜೆಡಿಎಸ್‌ನಿಂದ ಶಾಸಕರಾಗಿ ಆಯ್ಕೆಯಾದ್ದ ಮಾನಪ್ಪ ವಜ್ಜಲ್ ಸೋಲುವ ಭೀತಿಯಿಂದ ಈಗ ಬಿಜೆಪಿ ಸೇರಿದ್ದಾರೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕ್ಷೇತ್ರದ ಮತದಾರರು ಮಾನಪ್ಪ ವಜ್ಜಲ್‌ರನ್ನು ಮನೆಗೆ ಕಳುಹಿಸಲು ತೀರ್ಮಾನಿಸಿದ್ದು, ತಾವು ಸ್ಪರ್ಧಿಸಿ ವಜ್ಜಲ್‌ರನ್ನು ಸೋಲಿಸುವುದಾಗಿ ಹೇಳಿದರು.
ಬಿಜೆಪಿ ವರಿಷ್ಠರು ತಮ್ಮನ್ನು ಕಡೆಗಣಿಸಿದ್ದಕ್ಕೆ ಕಾರ್ಯಕರ್ತರ ಒತ್ತಡಕ್ಕೆ ಮಣಿದು ರಾಜ್ಯ ಕಾರ್ಯಕಾರಿಣಿ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಮತ್ತು ನನ್ನ ಜತೆಗೆ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬಸವರಾಜ ಮಾಕಾಪುರ, ಯುವ ಮೋರ್ಚಾ ಸದಸ್ಯ ಸೋಮಲಿಂಗಪ್ಪ ಜೂಲಗುಡ್ಡ, ತಾಲೂಕು ಪ್ರಧಾನ ಕಾರ್ಯದರ್ಶಿ ಬಸನಗೌಡ ಚಿತ್ತಾಪುರ, ಎಸ್ಟಿ
ಮೋರ್ಚಾ ಅಧ್ಯಕ್ಷ ಬಸವರಾಜ ಅಡವಿಬಾವಿ, ಎಸ್ಸಿ ಮೋರ್ಚಾ ಕಾರ್ಯದರ್ಶಿ ಬೋದು ನಾಯ್ಕ, ಎಸ್ಟಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ದುರುಗಣ್ಣ ನಾಯಕ, ಹನುಮಂತ ನಾಯಕ, ಉಪಾಧ್ಯಕ್ಷ ಮೌನೇಶ ನಾಯಕ, ರೈತ ಮೋರ್ಚಾ
ಉಪಾಧ್ಯಕ್ಷ ಶೇಖರಗೌಡ ಪಾಟೀಲ್, ಶಕ್ತಿ ಕೇಂದ್ರದ ಉಪಾಧ್ಯಕ್ಷ ಸೂಗೂರು, ಯುವ ಮೋರ್ಚಾ ಉಪಾಧ್ಯಕ್ಷ ನಂದೀಶ ಪೂಜಾರಿ, ನಗರ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ದ್ರಾಕ್ಷಾಯಿಣಿ, ತಾಲೂಕು ಮಹಿಳಾ ಮೋರ್ಚಾ ಉಪಾಧ್ಯಕ್ಷೆ ನಾಗರತ್ನ ಕುಲಕರ್ಣಿ ಸೇರಿದಂತೆ ವಿವಿಧ ಮೋರ್ಚಾಗಳ ಪದಾಧಿಕಾರಿಗಳು ರಾಜೀನಾಮೆ ಸಲ್ಲಿಸುತ್ತಿದ್ದೇವೆ
ಎಂದು ಹೇಳಿದರು.
ವೆಂಕಟರಾವ್ ಜಹಾಗೀರದಾರ, ಬಸನಗೌಡ ಚಿತ್ತಾಪುರ, ಬಸವರಾಜ ಮಾಕಾಪುರ, ಬಸವರಾಜ ನಾಯಕ
ಅಡವಿಬಾವಿ, ನಾಗರತ್ನ ಕುಲಕರ್ಣಿ, ದ್ರಾಕ್ಷಾಯಿಣಿ ರಾಜಪ್ಪ, ಯಮನೂರು ಸೇರಿದಂತೆ ನೂರಾರು ಜನ ಬೆಂಬಲಿಗರು
ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Surathkal: ಸಿಲಿಂಡರ್ ಸ್ಫೋ*ಟ ಪ್ರಕರಣ; ಮತ್ತೋರ್ವ ಮಹಿಳೆಯ ಸಾವು
Daily Horoscope: ದೀರ್ಘಕಾಲದ ಸಮಸ್ಯೆಗಳಿಂದ ಬಿಡುಗಡೆ, ಅಪರಿಚಿತರೊಡನೆ ವಾದ ಬೇಡ
Vijay Hazare Trophy: ಅರುಣಾಚಲ ಎದುರಾಳಿ; ರಾಜ್ಯಕ್ಕೆ 4ನೇ ಜಯದ ನಿರೀಕ್ಷೆ
Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!
Kasaragod: ಎಟಿಎಂಗೆ ತುಂಬಿಸಲು ತಂದ 50 ಲಕ್ಷ ರೂ. ಕಳವು ಮಾಡಿದ ಸೂತ್ರಧಾರನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.