ಚುನಾವಣೆಯಲ್ಲಿ ಸೋತಾಗ ನನ್ನ ಬೆನ್ನಿಗೆ ನಿಂತಿದ್ದು ಮಾತ್ರ ನನ್ನ ಬಣಜಿಗ ಸಮಾಜ: ಶೆಟ್ಟರ್
ಬಿಜೆಪಿಯಿಂದ ನನ್ನ ಸ್ವಾಭಿಮಾನಕ್ಕೆ ಪೆಟ್ಟು ಬಂತು
Team Udayavani, Jul 26, 2023, 3:28 PM IST
ಮಸ್ಕಿ: ಸಂಘ ಪರಿವಾರ ಕಾಲದಿಂದಲೂ ನಾನು ಬಿಜೆಪಿ ಪಕ್ಷಕ್ಕೆ ದುಡಿದಿದ್ದೆ. ಆದರೆ ಅದೇ ಪಕ್ಷದಿಂದ ನನ್ನ ಸ್ವಾಭಿಮಾನಕ್ಕೆ ಪೆಟ್ಟು ಬಂತು. ಅದಕ್ಕಾಗಿ ಪಕ್ಷದಿಂದ ಹೊರಬಂದೆ. ಅದರ ಪರಿಣಾಮ ಚುನಾವಣೆಯಲ್ಲಿ ಸೋಲಿಸಲಾಯಿತು. ಆದರೆ ಸೋತಾಗ ನನ್ನ ಬೆನ್ನಿಗೆ ನಿಂತಿದ್ದು ಮಾತ್ರ ನನ್ನ ಬಣಜಿಗ ಸಮಾಜ. ಆಸಮಾಜಕ್ಕೆ ನಾನು ಚಿರರುಣಿಯಾಗಿರುವೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದರು.
ಮಸ್ಕಿ ಪಟ್ಟಣದ ಭ್ರಮರಾಂಭ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಹಮ್ಮಿಕೊಂಡಿದ್ದ ವಾರ್ಷಿಕ ಮಹೋತ್ಸವ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು. ಹಲವು ವರ್ಷದಿಂದ ಬಿಜೆಪಿಯಲ್ಲಿ ನಿಷ್ಠಾವಂತ ಕಾರ್ಯಕರ್ತನಾಗಿ ಪಕ್ಷ ಕಟ್ಟಿದ್ದೆ. ಆದರೆ ಕಳೆದ ಸಾರ್ವತ್ರಿಕ ಚುನಾವಣೆಯಲ್ಲಿ ಕೊನೆ ಹೊತ್ತಿನ ವೇಳೆಗೆ ನನಗೆ ಟಿಕೆಟ್ ಕೊಡದೇ ಬಿಜೆಪಿ ಅಪಮಾನ ಮಾಡಿತು. ಸ್ವಾಭಿಮಾನಕ್ಕೆ ಧಕ್ಕೆ ಬರುತ್ತಿದ್ದಂತೆಯೇ ಆ ಪಕ್ಷಕ್ಕೆ ನಾನು ರಾಜೀನಾಮೆ ನೀಡಿ, ಕಾಂಗ್ರೆಸ್ ಸೇರಿದೆ. ಆದರೆ ಎಲ್ಲ ಶಕ್ತಿಗಳು ಕೂಡಿ ನನ್ನನ್ನು ರಾಜಕೀಯವಾಗಿ ಮುಗಿಸಲು ನೋಡಿದವು. ಅದಕ್ಕೆ ನನಗೆ ಸೋಲಾಯಿತು.
ಸೋಲಿನ ಸಂದರ್ಭದಲ್ಲಿ ನನಗೆ ಬೆನ್ನೆಲುಬಾಗಿ ನನ್ನ ಸಮಾಜ ನಿಂತಿತ್ತು. ಆ ಸಮಾಜದ ಋಣ ನನ್ನ ಮೇಲೆ ಸಾಕಷ್ಟಿದೆ. ರಾಜ್ಯಾದ್ಯಂತ ಸಮಾಜದ ಸಂಘಟನೆ ಮಾಡುವ ಮೂಲಕ ಋಣ ತೀರಿಸಿವೆ. ಈಗ ಕಾಂಗ್ರೆಸ್ ಕೂಡ ನನ್ನನ್ನು ಗುರುತಿಸಿ ರಾಜಕೀಯ ಸ್ಥಾನ ಮಾನ ನೀಡಿದೆ. ಆ ಪಕ್ಷಕ್ಕೂ ನನ್ನ ಸಮಾಜದವರ ಬೆಂಬಲವಾಗು ನಿಲ್ಲಬೇಕು ಎಂದು ಶೆಟ್ಟರ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ
Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ
Pegasus spyware ಬಗ್ಗೆ ಸುಪ್ರೀಂಕೋರ್ಟ್ ತನಿಖೆ ನಡೆಸಲಿ: ಸುರ್ಜೇವಾಲಾ
Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.