ಕಾಂಗ್ರೆಸ್ ಕಚೇರಿಗೆ ಬಿಜೆಪಿ ಮುಖಂಡರ ಮುತ್ತಿಗೆ ಯತ್ನ
Team Udayavani, Jan 13, 2018, 2:57 PM IST
ರಾಯಚೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ, ಆರೆಸ್ಸೆಸ್, ಭಜರಂಗದಳವನ್ನು ಉಗ್ರಗಾಮಿ ಸಂಘಟನೆಗಳು ಎಂದು ನೀಡಿದ ಹೇಳಿಕೆ ಖಂಡಿಸಿ ಶುಕ್ರವಾರ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ತಡೆದ ಪೊಲೀಸರು, ಬಂಧಿಸಿ ನಂತರ ಬಿಡುಗಡೆ ಮಾಡಿದರು.
ನಗರದ ರಂಗಮಂದಿರದಲ್ಲಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು ಮೆರವಣಿಗೆ ಮೂಲಕ ಕಾಂಗ್ರೆಸ್ ಕಚೇರಿಯತ್ತ ತೆರಳಿದರು. ಬಿಗಿ ಬಂದೋಬಸ್ತ್ ಕಲ್ಪಿಸಿದ್ದ ಪೊಲೀಸರು ಮಾರ್ಗ ಮಧ್ಯದಲ್ಲಿಯೇ ಅವರನ್ನು ತಡೆದರು. ಈ ವೇಳೆ ಪೊಲೀಸರೊಂದಿಗೆ ಪ್ರತಿಭಟನಾನಿರತರು ಮಾತಿನ ಚಕಮಕಿ ನಡೆಸಿದರು. ಈ ವೇಳೆ 200ಕ್ಕೂ ಹೆಚ್ಚು ಕಾರ್ಯಕರ್ತರನ್ನು ಬಂಧಿಸಿದ ಪೊಲೀಸರು, ಬಸ್‌ನಲ್ಲಿ ಕರೆದೊಯ್ದು ನಂತರ ಬಿಡುಗಡೆ ಮಾಡಿದರು.
ಈ ವೇಳೆ ಮಾತನಾಡಿದ ಮುಖಂಡರು, ಸಿಎಂ ಸಿದ್ದರಾಮಯ್ಯ ಬಿಜೆಪಿ, ಹಿಂದುಪರ ಹೋರಾಟ ಮಾಡುವ ಸಂಘಟನೆಗಳ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ದೇಶದ 19 ರಾಜ್ಯಗಳಲ್ಲಿ ಬಿಜೆಪಿ ಜನರಿಂದ ಚುನಾಯಿತಗೊಂಡು ಆಡಳಿತ ನಡೆಸುತ್ತಿದೆ. ಕೇಂದ್ರದಲ್ಲೂ ಅಧಿಕಾರದಲ್ಲಿದೆ. ಆದರೆ, ಅಂಥ ಪಕ್ಷದ ಬಗ್ಗೆ
ಜವಾಬ್ದಾರಿಯುತ ಸ್ಥಾನದಲ್ಲಿರುವ ಮುಖ್ಯಮಂತ್ರಿ ಹಗುರವಾಗಿ ಮಾತನಾಡುವುದು ಖಂಡನಾರ್ಹ. ಸಿದ್ದರಾಮಯ್ಯ ಹಿಂದೂ ವಿರೋಧಿ ಎಂಬುದನ್ನು ಆ ಮೂಲಕ ಸಾಬೀತು ಮಾಡಿದ್ದಾರೆ ಎಂದು ಹೇಳಿದರು.
ಬಿಜೆಪಿ, ಆರ್‌ಎಸ್‌ಎಸ್, ಭಜರಂಗದಳ ಬಗ್ಗೆ ಯಾವುದೇ ಅರಿವಿಲ್ಲದೆ ಮಾತನಾಡಿದ್ದಾರೆ. ಉಗ್ರಗಾಮಿಗಳು ಎಂಬ ಪಟ್ಟ ಕಟ್ಟುವ ಮೂಲಕ ಸಿಎಂ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಕೋಮು ವಿರೋಧಿ ಎನ್ನುವುದನ್ನು ಸಾಬೀತು ಪಡಿಸಿದೆ. ಇಂಥ ಹೇಳಿಕೆಗಳನ್ನು ಎಂದಿಗೂ ಸಹಿಸಲಾಗದು ಎಂದು ಹೇಳಿದರು. ಬಿಜೆಪಿ ಜಿಲ್ಲಾಧ್ಯಕ್ಷ ಶರಣಪ್ಪಗೌಡ ಜಾಡಲದಿನ್ನಿ, ಶಾಸಕ ತಿಪ್ಪರಾಜು ಹವಾಲ್ದಾರ, ಮಾಜಿ ಶಾಸಕರಾದ ಎ. ಪಾಪಾರೆಡ್ಡಿ, ಬಸನಗೌಡ ಬ್ಯಾಗವಾಟ, ಮುಖಂಡರಾದ ಎನ್. ಶಂಕ್ರಪ್ಪ, ಗಂಗಾಧರ ನಾಯಕ, ಅಶೋಕ ಗಸ್ತಿ, ಕೆ.ಎಂ. ಪಾಟೀಲ, ಎ. ಚಂದ್ರಶೇಖರ, ಯು. ದೊಡ್ಡ ಮಲ್ಲೇಶ ಸೇರಿದಂತೆ ವಿವಿಧ ಮೋರ್ಚಾಗಳ ಮುಖಂಡರು, ಕಾರ್ಯಕರ್ತರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ಹೊಸ ಸೇರ್ಪಡೆ
Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ
BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ
Udupi: ಉದ್ಘಾಟನೆ ಕಾಣದ ಸರಕಾರಿ ಕಟ್ಟಡಗಳು
Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ
BGT: ಆಸೀಸ್ ಮಾಧ್ಯಮದ ವಿರುದ್ದ ವಿರಾಟ್ ಗರಂ: ಏರ್‌ಪೋರ್ಟ್ ನಲ್ಲಿ ವರದಿಗಾರ್ತಿ ಜತೆ ಜಗಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.