ಗಡ್ಡಿಹಳ್ಳ ಸೇತುವೆಯಲ್ಲಿ ಬೋಂಗಾ; ವಾಹನ ಸಂಚಾರ ಬಂದ್
Team Udayavani, Dec 16, 2018, 2:14 PM IST
ಲಿಂಗಸುಗೂರು: ತಾಲೂಕಿನ ಕಸಬಾಲಿಂಗಸುಗೂರು ಬಳಿಯ ಜೇವರ್ಗಿ-ಚಾಮರಾಜನಗರ ರಾಷ್ಟ್ರೀಯ ಹೆದ್ದಾರಿ 150ಎ ರಸ್ತೆಯ ಗಡ್ಡಿಹಳ್ಳದ ಸೇತುವೆಗೆ ಬೋಂಗಾ ಬಿದ್ದಿದ್ದು ಅದೃಷ್ಟವಶಾತ್ ಅನಾಹುತ ತಪ್ಪಿದೆ. ಮುಂಜಾಗ್ತಾ ಕ್ರಮವಾಗಿ ಸೇತುವೆ ಮೇಲೆ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ.
ಸುಮಾರು 50 ವರ್ಷಗಳ ಹಿಂದೆ ಗಡ್ಡಿಹಳ್ಳ ಸೇತುವೆ ನಿರ್ಮಿಸಲಾಗಿದೆ. ಈ ಸೇತುವೆ ಒಂದೇ ವಾಹನ ಸಂಚರಿಸುವಷ್ಟು ಕಿರಿದಾಗಿದೆ. ರಾಷ್ಟ್ರೀಯ ಹೆದ್ದಾರಿ 150ಎ ಆಗಿದ್ದರಿಂದ ಸೇತುವೆ ಮೇಲೆ ನಿತ್ಯವೂ ಸಾವಿರಾರು ವಾಹನಗಳು ಸಂಚರಿಸುತ್ತವೆ. ಇದರಿಂದ ಗಡ್ಡಿಹಳ್ಳ ಸೇತುವೆಯಲ್ಲಿ ಈ ಹಿಂದೆಯೇ ಸಣ್ಣ ಪ್ರಮಾಣದಲ್ಲಿ ಬೋಂಗಾ ಬಿದ್ದಿತ್ತು. ಆದರೆ ದುರಸ್ತಿಗೆ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ ನಿರ್ಲಕ್ಷ್ಯ ವಹಿಸಿದ್ದರಿಂದ ಕ್ರಮೇಣವಾಗಿ ಬೋಂಗಾ ದೊಡ್ಡದಾಗಿದೆ. ಇದಲ್ಲದೇ ಸೇತುವೆ ಕೆಳಗಡೆ ಅಲ್ಲಲ್ಲಿ ಬಿರುಕು ಕಾಣಿಸಿಕೊಂಡಿದೆ. ಸೇತುವೆ ಮೇಲ್ಭಾಗದಲ್ಲೂ ಇನ್ನೂ ಎರಡು ಸಣ್ಣ ಆಕಾರದ ಬೋಂಗಾಗಳಿವೆ. ತಡೆಗೋಡೆಯಲ್ಲಿ ಸಹ ಬಿರುಕು ಕಾಣಿಸಿಕೊಂಡಿದೆ.
ಸಂಚಾರ ಸ್ಥಗಿತ: ಕಲುಬುರಗಿ, ಜೇವರ್ಗಿ, ಶಹಾಪುರ, ಸುರಪುರ ಲಿಂಗಸುಗೂರು ಮಾರ್ಗವಾಗಿ ಬೆಂಗಳೂರಿಗೆ ಸೇರಿ ಇನ್ನಿತರ ನಗರಗಳಿಗೆ ನಿತ್ಯವೂ ಸಾವಿರಾರು ವಾಹನ ಈ ಸೇತುವೆ ಮಾರ್ಗವಾಗಿ ಸಂಚರಿಸುತ್ತವೆ. ಸೇತುವೆ ಬೋಂಗಾ ಬಿದ್ದಿದ್ದರಿಂಧ ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಸೇತುವೆ ಮೇಲೆ ವಾಹನ ಸಂಚಾರ ನಿಷೇಧಿಸಿದ್ದು, ಪರ್ಯಾಯವಾಗಿ ಮುದಗಲ್ ಮಾರ್ಗವಾಗಿ ವಾಹನಗಳ ಸಂಚಾರಕ್ಕೆ ಕ್ರಮ ಕೈಗೊಂಡಿದ್ದಾರೆ.
ನಿರ್ಲಕ್ಷ್ಯ: ರಾಷ್ಟ್ರೀಯ ಹೆದ್ದಾರಿ 150ಎ ಹಾದು ಹೋಗಿರುವ ಈ ಸೇತುವೆ ಅಲ್ಲದೇ ಈ ಮಾರ್ಗವಾಗಿ ಅನೇಕ ಸೇತುವೆಗಳು ದುಸ್ಥಿತಿಯಲ್ಲಿದ್ದರೂ ದುರಸ್ತಿ ಮಾಡಬೇಕಾದ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ ಮೈಮರೆತು ಕುಳಿದಿದೆ. ಇದರಿಂದ ವಾಹನ ಸವಾರರು ಹಾಗೂ ಚಾಲಕರು ತಮ್ಮ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಸಂಚರಿಸಬೇಕಾಗಿದೆ. ಸೇತುವೆಗಳ ಬಗ್ಗೆ ಪರಿಶೀಲಿಸಲು ಪ್ರಾಧಿಕಾರದ ಯಾವೊಬ್ಬ ಅಧಿಕಾರಿ ಭೇಟಿ ನೀಡಿಲ್ಲ ಹಾಗೂ ಸಂಪರ್ಕ ಸಿಗುತ್ತಿಲ್ಲ. ಇದರ ಕಚೇರಿ ಬಾಗಲಕೋಟೆ ಜಿಲ್ಲೆಯ ಹುನುಗುಂದದಲ್ಲಿದೆ. ಹೀಗಾಗಿ ಇಲ್ಲಿನ ಪರಿಸ್ಥಿತಿ ಅವರ ಅರಿವಿಗೆ ಬಾರದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು
ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.