2 ತಿಂಗಳು ಮಾತ್ರ ಬೋರ್‌ವೆಲ್‌ ಬಾಡಿಗೆ

Team Udayavani, May 13, 2022, 5:21 PM IST

20borewel

ರಾಯಚೂರು: ಬೇಸಿಗೆಯಲ್ಲಿ ಕುಡಿವ ನೀರು ಪೂರೈಸುವ ನಿಟ್ಟಿನಲ್ಲಿ ಖಾಸಗಿ ಬೋರ್‌ವೆಲ್‌ಗ‌ಳನ್ನು ಬಾಡಿಗೆ ಪಡೆಯುತ್ತಿದ್ದು, ಈ ಅವಧಿ ಕೇವಲ ಎರಡು ತಿಂಗಳಿಗೆ ಮಾತ್ರ ಸೀಮಿತವಾಗಿರುತ್ತದೆ ಎಂದು ಜಿಪಂ ಸಿಇಒ ನೂರ್‌ ಜಹಾರ್‌ ಖಾನಂ ತಿಳಿಸಿದರು.

ನಗರದ ಜಿಪಂ ಸಭಾಂಗಣದಲ್ಲಿ ಗುರುವಾರ ಕುಡಿಯುವ ನೀರು ಪೂರೈಕೆ ವಿಚಾರವಾಗಿ ಪಿಡಿಒಗಳಿಗೆ ಹಮ್ಮಿಕೊಂಡಿದ್ದ ಸಭೆಯಲ್ಲಿ ಮಾತನಾಡಿದ ಅವರು, ಪ್ರತಿ ತಾಲೂಕಿಗೆ 15 ಲಕ್ಷ ರೂ. ಮೀಸಲಿಡಲಾಗಿದೆ. ಆದರೆ, ಹಾಗಂತ ಅನಗತ್ಯ ಖರ್ಚುಗಳಿಗೆ ಅವಕಾಶವಿಲ್ಲ. ಗ್ರಾಮಗಳಿಗೆ ನೀರು ಪೂರೈಸಲು ಪೈಪ್‌ಲೈನ್‌ ಅಳವಡಿಸುವ ಬೇಡಿಕೆ ಅವೈಜ್ಞಾನಿಕವಾಗಿದೆ. ಕೇವಲ ಎರಡ್ಮೂರು ತಿಂಗಳಿಗಾಗಿ ಪೈಪ್‌ಲೈನ್‌ ಮಾಡಲು ಬರುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ತೀರ ಸಮಸ್ಯೆ ಎದುರಿಸುತ್ತಿರುವ ಹಳ್ಳಿಗಳೇ ನಮ್ಮ ಮೊದಲ ಪ್ರಾಶಸ್ತ್ಯವಾಗಲಿದೆ. ಟ್ಯಾಂಕರ್‌ ಮೂಲಕ ಇಲ್ಲವೇ ಬೋರ್‌ವೆಲ್‌ ಮೂಲಕ ನೀರು ಕೊಡಲು ಒತ್ತು ನೀಡಬೇಕು. ಒಂದು ವೇಳೆ ಪೈಪ್‌ಲೈನ್‌ ಮಾಡಿದಲ್ಲಿ ಅದು ಮತ್ತೆ ನಿರುಪಯುಕ್ತವಾಗುತ್ತದೆ. ಹಾಕಿದ ಪೈಪ್‌ಲೈನ್‌ ತೆರವುಗೊಳಿಸಲು ಬರುವುದಿಲ್ಲ. ಅಲ್ಲದೇ, ಬರ ನಿರ್ವಹಣೆಗೆ ಮೀಸಲಿಟ್ಟ ಹಣದಲ್ಲಿ ಅಂಥ ಕೆಲಸಗಳನ್ನು ನಿರ್ವಹಿಸುವುದು ಕಷ್ಟಕರ ಎಂದು ತಿಳಿಸಿದರು.

ವಿವಿಧ ಗ್ರಾಪಂಗಳ ಪಿಡಿಒಗಳು ಮಾತನಾಡಿ, ತಾಲೂಕಿನ ಕಲ್ಮಲಾ, ಕಮಲಾಪುರ, ಗಿಲ್ಲೆಸಗೂರು ಕ್ಯಾಂಪ್‌, ಸಿದ್ರಾಂಪುರ, ಬೋಳಮಾನದೊಡ್ಡಿ ಸೇರಿದಂತೆ ವಿವಿಧ ಹಳ್ಳಿಗಳಲ್ಲಿ ಬೋರ್‌ ವೆಲ್‌ ಸಮಸ್ಯೆಗಳಿದ್ದು, ಕುಡಿವ ನೀರಿನ ಪೂರೈಕೆಗೆ ತೊಂದರೆಯಾಗುತ್ತಿದೆ ಎಂದು ವಿವರಿಸಿದರು.

ಸಮಸ್ಯೆ ಆಲಿಸಿದ ಸಿಇಒ, ಯಾವ ಗ್ರಾಮದಲ್ಲಿ ಯಾವ ರೀತಿಯಲ್ಲಿ ನೀರು ಪೂರೈಸಬೇಕು ಎಂಬ ಕುರಿತು ಮಾಹಿತಿ ಪಡೆದು ಕ್ರಮ ವಹಿಸಿ. ಟ್ಯಾಂಕರ್‌ ಮೂಲಕ ಬೋರ್‌ವೆಲ್‌ ಕೊರೆಸುವುದು ಇಲ್ಲವೇ ಬಾಡಿಗೆ ಪಡೆಯಬೇಕೆ ಎಂದು ನಿರ್ಧರಿಸಬೇಕು. ಸಮಸ್ಯೆಗೆ ಪರಿಹಾರ ಕಲ್ಪಿಸಬೇಕು ಎಂದು ಸೂಚನೆ ನೀಡಿದರು.

ಜಿಪಂ ಉಪಕಾರ್ಯದರ್ಶಿ ಶಶಿಕಾಂತ ಶಿವಪುರೆ, ಯೋಜನಾಧಿಕಾರಿ ಸಿ.ಎಸ್‌. ಮಡೋಳಪ್ಪ ಸೇರಿದಂತೆ ವಿವಿಧ ತಾಪಂ ಇಒಗಳು ಹಾಗೂ ಗ್ರಾಪಂ ಪಿಡಿಒಗಳು ಸಭೆಯಲ್ಲಿದ್ದರು.

ಟಾಪ್ ನ್ಯೂಸ್

400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

1-erqrer

Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ

ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

1-reee

Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್

baby 2

Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ

Nirmala 2 a

Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

ಮಂತ್ರಾಲಯ ಶ್ರೀಗಳಿಂದ ತುಂಗಭದ್ರ ನದಿಯಲ್ಲಿ ದಂಡೋದಕ ಸ್ನಾನ

Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ

5-raichur

Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು

Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ

Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ

Raichruru-RTPS

Raichuru: ಆರ್‌ಟಿಪಿಎಸ್ ಬೂದಿ ಹೊಂಡದ ನೀರು ಕೃಷ್ಣಾ ನದಿಗೆ; ಜನರಲ್ಲಿ ಆತಂಕ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

1-erqrer

Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ

ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

1-reee

Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.