ಆರೋಗ್ಯಕರ ಸಮಾಜ ನಿರ್ಮಿಸಿ
Team Udayavani, Mar 3, 2019, 10:11 AM IST
ದೇವದುರ್ಗ: ಸರ್ಕಾರದ ಆರೋಗ್ಯ ಯೋಜನೆಗಳ ಪ್ರಯೋಜನ ಪಡೆದು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಕಂಕಣಬದ್ಧರಾಗಬೇಕು ಎಂದು ಸಂಸದ ಬಿ.ವಿ. ನಾಯಕ ಹೇಳಿದರು.
ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೊಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಯಚೂರು ವಿಜ್ಞಾನ ಸಂಸ್ಥೆ, ನವೋದಯ ವೈದ್ಯಕೀಯ ಮಹಾ ವಿದ್ಯಾಲಯ, ಭಾರತೀಯ ವೈದ್ಯಕೀಯ ಸಂಸ್ಥೆ ಸಹಯೋಗದಲ್ಲಿ ಶನಿವಾರ ಸಮೀಪದ ಅರಕೇರಾ ಗ್ರಾಮದ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಬೃಹತ್ ಆರೋಗ್ಯ ಮೇಳ ಉದ್ಘಾಟಿಸಿ ಅವರು ಮಾತನಾಡಿದರು.
ಗ್ರಾಮೀಣ ಪ್ರದೇಶ ಜನರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸುವ ಉದ್ದೇಶದಿಂದ ಆರೋಗ್ಯ ಮೇಳ ಆಯೋಜಿಸಲಾಗಿದೆ. ಆರೋಗ್ಯ ಮತ್ತು ಶಿಕ್ಷಣ
ಕ್ಷೇತ್ರಗಳಲ್ಲಿ ಇನ್ನೂ ಕ್ರಾಂತಿಯಾಗಬೇಕಿದೆ. ರಾಯಚೂರು ಜಿಲ್ಲೆಯಲ್ಲಿ ಮಹಿಳೆಯರು, ಮಕ್ಕಳಲ್ಲಿ ಅಪೌಷ್ಟಿಕತೆ ಸಮಸ್ಯೆ ಗಂಭೀರವಾಗಿದೆ. ಈ ನಿಟ್ಟಿನಲ್ಲಿ ರಾಜ್ಯ ಸರಕಾರ ರಾಯಚೂರು ಜಿಲ್ಲೆಯಲ್ಲಿ ಪೌಷ್ಟಿಕತೆ ಹೆಚ್ಚಿಸಲು ಅನೇಕ ಕಾರ್ಯಕ್ರಮ ಜಾರಿಗೊಳಿಸಿದೆ. ಇತ್ತೀಚೆಗೆ ಗರ್ಭಿಣಿಯರಿಗೆ, ಬಾಣಂತಿಯರಿಗೆ ಮಾತೃಪೂರ್ಣ ಯೋಜನೆ ಪರಿಣಾಮಕಾರಿಯಾಗಿ ಜಾರಿಗೊಂಡಿದ್ದು, ಉತ್ತಮ ಸ್ಪಂದನೆ ದೊರಕಿದೆ ಎಂದರು.
ಜಿಲ್ಲೆಯಲ್ಲಿ ಅತೀ ಹೆಚ್ಚು ದೊಡ್ಡಿ, ತಾಂಡಾಗಳಲ್ಲಿ ಜನ ತಮ್ಮ ಜಮೀನುಗಳಲ್ಲಿಯೇ ಮನೆ ನಿರ್ಮಿಸಿಕೊಂಡು ವಾಸಿಸುವುದು ಸಾಮಾನ್ಯ.ಇಂಥ ಪ್ರದೇಶದ ಜನತೆಗೆ ಉತ್ತಮ ಆರೋಗ್ಯ ಮತ್ತು ಶಿಕ್ಷಣ ಸೇವೆ ಒದಗಿಸುವುದು ಅತ್ಯಗತ್ಯ ಎಂದರು. ರಾಯಚೂರು ಲೋಕಸಭಾ ಕ್ಷೇತ್ರ ಕೇಂದ್ರ ಸರಕಾರದಿಂದ ಅತಿ ಹಿಂದುಳಿದ ಪ್ರದೇಶ ಎಂದು ಗುರುತಿಸಿ, ನೀತಿ ಅಯೋಗದ ಸರ್ವೆ ಆಧರಿಸಿ ವರದಿ ನೀಡಿದೆ. ಇನ್ನೂ ವಿಶೇಷ ಸೌಲಭ್ಯಗಳು ದೊರಕಲಿವೆ. ಕಲಂ371 ತಿದ್ದುಪಡಿ ಸೌಲಭ್ಯದ ಪ್ರಕಾರ ಈ ಪ್ರದೇಶಕ್ಕೆ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಿಗೆ ಹೆಚ್ಚು ಅನುದಾನ ಲಭ್ಯವಾಗಲಿದೆ. ಸಾರ್ವಜನಿಕರು ಸರಕಾರದ ಸೌಲಭ್ಯಗಳನ್ನು ಪಡೆದುಕೊಂಡು ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದರು.
ಜಿಪಂ ಸದಸ್ಯೆ ಜಯಶ್ರೀ ಶರಣಗೌಡ ಮಾಲಿಪಾಟೀಲ, ತಾಪಂ ಸದಸ್ಯ ಗೋವಿಂದರಾಜ್ ಚಿಕ್ಕಗುಡ್ಡ, ಅಮರೇಗೌಡ ಹಂಚಿನಾಳ, ಗಂಗಪ್ಪಯ್ಯ ಪೂಜಾರಿ, ಆದನಗೌಡ ಪಾಟೀಲ ಬುಂಕಲದೊಡ್ಡಿ, ತಿಮ್ಮಪ್ಪ ನಾಯಕ, ಅಬ್ದುಲ್ ಅಜೀಜ್, ಮೋನಪ್ಪ ನಾಯಕ ಕ್ಯಾದಿಗೇರಾ, ಭೂತಪ್ಪ ಹೇರುಂಡಿ,
ಮಹಾದೇವ ಪಾಟೀಲ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಎಂ.ಕೆ.ನಾಸೀರ್, ತಾಲೂಕು ಆರೋಗ್ಯ ಅಧಿಕಾರಿ ಡಾ| ಬನದೇಶ ಇದ್ದರು. ಡಾ| ಸುರೇಂದ್ರಬಾಬು, ಡಾ| ಲಕ್ಷ್ಮೀಬಾಯಿ, ಡಾ| ಗಣೇಶ, ಎಂ.ಡಿ. ಶಾಕೀರ್, ಡಾ| ಶೋಭಾ ಸಿದ್ದೇಶ, ಡಾ| ಶ್ರೀನಿವಾಸರಾವ್ ಕುಲಕರ್ಣಿ, ಡಾ| ಹುಲಿಮನಿ, ಡಾ| ವಿಶ್ವನಾಥ ಬಣಗಾರ, ಡಾ| ಭಾರತಿ ಇತರರು ರೋಗಿಗಳ ತಪಾಸಣೆ ನಡೆಸಿದರು. 650 ರೋಗಿಗಳನ್ನು ತಪಾಸಣೆ ಮಾಡಿ, 3 ರೋಗಿಗಳನ್ನು ಕಿದ್ವಾಯಿ ಆಸ್ಪತ್ರೆಗೆ, 20 ಜನರನ್ನು ನೇತ್ರ ಶಸ್ತ್ರ ಚಿಕಿತ್ಸೆಗೆ ಕಳುಹಿಸಲಾಯಿತು. ಬಸವರಾಜ ಬ್ಯಾಗವಾಟ, ಸುಗೂರೇಶ್ವರ ಗುಡಿ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.