Bus late: ತಡವಾಗಿ ಬಂದ ಬಸ್: ರಸ್ತೆ ಸಂಚಾರ ತಡೆದು ವಿದ್ಯಾರ್ಥಿಗಳ ಆಕ್ರೋಶ
Team Udayavani, Jul 4, 2023, 11:40 AM IST
ಮಸ್ಕಿ: ತಾಲೂಕಿನ ಸಾನಬಾಳ ಗ್ರಾಮದಲ್ಲಿ ಸಮಯಕ್ಕೆ ಸರಿಯಾಗಿ ಬಸ್ ಬರುತ್ತಿಲ್ಲ. ದಿನ-ನಿತ್ಯ 10 ಗಂಟೆಯ ನಂತರ ಬಸ್ ಬರುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ವಿದ್ಯಾರ್ಥಿಗಳು ಬಸ್ ಅಡ್ಡಗಟ್ಟಿ ದಿಢೀರ್ ಪ್ರತಿಭಟನೆ ನಡೆಸಿದ ಘಟನೆ ಜು.4 ರ ಮಂಗಳವಾರ ನಡೆದಿದೆ.
ಕಳೆದ ಒಂದು ವಾರದಿಂದ ಮಸ್ಕಿ ತಾಲೂಕು ಕೇಂದ್ರದಿಂದ ಸಾನಬಾಳ ಗ್ರಾಮಕ್ಕೆ ಬರುವ ಬಸ್ ತಡವಾಗಿ ಬರುತ್ತಿದೆ. ಶಾಲೆ ಕಾಲೇಜಿನ ವಿದ್ಯಾರ್ಥಿಗಳು ಸಮಯಕ್ಕೆ ಸರಿಯಾಗಿ ಹೋಗಲು ಆಗುತ್ತಿಲ್ಲ.
ನಿತ್ಯ 9 ಗಂಟೆಗೆ ಸಾನಬಾಳ ಗ್ರಾಮಕ್ಕೆ ಬರಬೇಕಾದ ಬಸ್ 10 ಅಥವಾ 10.30 ಗಂಟೆಗೆ ಬರುತ್ತಿದೆ. ಇದರಿಂದ ಶಾಲಾ-ಕಾಲೇಜುಗಳಿಗೆ ತೆರಳಲು ತೊಂದರೆಯಾಗುತ್ತಿದ್ದು, ಶಾಲೆ ಆರಂಭವಾಗಿ ಒಂದು ಗಂಟೆ ಬಳಿಕ ವಿದ್ಯಾರ್ಥಿಗಳು ಶಾಲೆಗೆ ಹೋಗಬೇಕಾದ ಸ್ಥಿತಿ ಇದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ವಿದ್ಯಾರ್ಥಿಗಳು ಒಂದು ಗಂಟೆಗೂ ಅಧಿಕ ಕಾಲ ಬಸ್ ತಡೆಗಟ್ಟಿ ಸಂಚಾರ ತಡೆ ನಡೆಸಿದರು. ಬಳಿಕ ಸಾರಿಗೆ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಮನವೊಲಿಸಿ ಇನ್ನು ಮುಂದೆ ಸಮಯಕ್ಕೆ ಸರಿಯಾಗಿ ಬಸ್ ಬರಲಿದೆ ಎಂದು ಭರವಸೆ ನೀಡಿದ ಬಳಿಕ ವಿದ್ಯಾರ್ಥಿಗಳು ಪ್ರತಿಭಟನೆ ಬಿಟ್ಟು ಬಸ್ ಹತ್ತಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf ವಿಷಯ ಮುಗಿದು ಹೋಗಿದೆ.. ಬಿಜೆಪಿಯವರಿಂದ ಗೊಂದಲ: ಲಕ್ಷ್ಮಣ ಸವದಿ
Dandeli: ಅಪರಿಚಿತ ವಾಹನ ಡಿಕ್ಕಿ; ಕರು ಸಾವು
Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ
Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!
BBK11: ಬಿಗ್‌ಬಾಸ್ ಆಟ ನಿಲ್ಲಿಸಿದ ಖ್ಯಾತ ಸ್ಪರ್ಧಿ.. ಈ ವಾರ ಆಚೆ ಬರುವುದು ಇವರೇ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.