ಉಪಚುನಾವಣೆ: ಬೆಳಗಾವಿ, ಬಸವಕಲ್ಯಾಣ, ಮಸ್ಕಿಯಲ್ಲಿ ಮತದಾನಕ್ಕೆ ಚಾಲನೆ
Team Udayavani, Apr 17, 2021, 7:49 AM IST
ರಾಯಚೂರು: ಮಸ್ಕಿ ಕ್ಷೇತ್ರದ ಉಪಚುನಾವಣೆ ಪ್ರಕ್ರಿಯೆಗೆ ಚಾಲನೆ ಸಿಕ್ಕಿದ್ದು, ಬೆಳಗ್ಗೆ 7 ಗಂಟೆಗೆ ಮತದಾನ ಪ್ರಕ್ರಿಯೆಗೆ ಚಾಲನೆ ನೀಡಲಾಯಿತು.
ಕ್ಷೇತ್ರದಲ್ಲಿ 305 ಮತಗಟ್ಟೆಗಳನ್ನು ಸ್ಥಾಪಿಸಿದ್ದು, ಕೊರೊನಾ ಸೋಂಕಿತರಿಗಾಗಿ ಸಂಜೆ ಆರು ಗಂಟೆ ಮೇಲೆ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ. ಇನ್ನೂ ಮೊದಲಿಗೆ ಮತ ಚಲಾಯಿಸುತ್ತಿದ್ದ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್ ರಿಗೆ ಕೋವಿಡ್ ಪಾಸಿಟಿವ್ ಇರುವ ಕಾರಣ ಸಂಜೆ 6ರಿಂದ 7 ಗಂಟೆವರೆಗೂ ಹಕ್ಕು ಚಲಾಯಿಸುತ್ತಿದ್ದಾರೆ.
ಮಸ್ಕಿ ಮತ್ತು ತುರವಿಹಾಳನಲ್ಲಿ ಮಹಿಳೆಯರಿಗಾಗಿ ಎರಡು ಪಿಂಕ್ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.
ಇದನ್ನೂ ಓದಿ: ತಮಿಳು ಚಿತ್ರರಂಗದ ಖ್ಯಾತ ಹಾಸ್ಯ ನಟ ವಿವೇಕ್ ಇನ್ನಿಲ್ಲ
ಬೆಳಗಾವಿ ಲೋಕಸಭಾ ಕ್ಷೇತ್ರ ಹಾಗೂ ಮಸ್ಕಿ, ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಕಾಂಗ್ರೆಸ್ ಮತ್ತು ಬಿಜೆಪಿ ಮಧ್ಯೆ ತೀವ್ರ ಪೈಪೋಟಿಗೆ ಕಾರಣವಾಗಿದೆ. ಸುರೇಶ ಅಂಗಡಿ ನಿಧನದಿಂದ ತೆರವಾದ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿಯಿಂದ ಮಂಗಲಾ ಸುರೇಶ ಅಂಗಡಿ, ಕಾಂಗ್ರೆಸ್ ನಿಂದ ಸತೀಶ ಜಾರಕಿಹೊಳಿ ಸೇರಿದಂತೆ 10 ಮಂದಿ ಕಣದಲ್ಲಿದ್ದಾರೆ.
ಬಸವಕಲ್ಯಾಣ ಶಾಸಕರಾಗಿದ್ದ ಬಿ.ನಾರಾಯಣರಾವ್ ಅವರು ಕೋವಿಡ್ನಿಂದ ನಿಧನರಾಗಿದ್ದರಿಂದ ಆ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದ್ದು, ಇಲ್ಲಿ ಕಾಂಗ್ರೆಸ್ ನಿಂದ ಮಾಲಾ, ಬಿಜೆಪಿಯ ಶರಣು ಸಲಗರ, ಜೆಡಿಎಸ್ನ ಸಯ್ಯದ್ ಯಸ್ರಬ್ ಅಲಿ ಖಾದ್ರಿ, ಪಕ್ಷೇತರರಾಗಿರುವ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಸೇರಿ 12 ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ಸಿಂಧನೂರು ತಾಲೂಕಿನ ತುರುವಿಹಾಳ ಪಟ್ಟಣ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆರ್.ಬಸನಗೌಡ ತುರುವಿಹಾಳ ಮತದಾನ ಮಾಡಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
High Court: ಮುಮ್ತಾಜ್ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್ ವಶಕ್ಕೆ ನೀಡಲ್ಲ
Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ
H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.