ಮರಳು ದಂಧೆ ವಿರುದ್ಧ ಕ್ರಮಕ್ಕೆ ಆಗ್ರಹ
Team Udayavani, Feb 19, 2022, 4:33 PM IST
ಲಿಂಗಸುಗೂರು: ಅಕ್ರಮ ಮರಳು ದಂಧೆ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿ ಕನ್ನಡ ಸೇನೆ ಕರ್ನಾಟಕ ತಾಲೂಕು ಘಟಕದ ಪದಾ ಧಿಕಾರಿಗಳು ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಿದರು.
ತಾಲೂಕಿನ ಗುರುಗುಂಟಾ ಸುತ್ತಮುತ್ತಲಿನ ಹಳ್ಳ, ನದಿಗಳಿಂದ ಅಕ್ರಮ ಮರಳು ದಂಧೆ ಎಗ್ಗಿಲ್ಲದೆ ಸಾಗಿದೆ. ಒಂದು ರಾಯಲಟಿ ಪಡೆದು ನಾಲ್ಕೈದು ವಾಹನಗಳಲ್ಲಿ ಮರಳು ಸಾಗಾಟ ಮಾಡುತ್ತಿದ್ದಾರೆ. ಮರಳು ತುಂಬಿದ ಲಾರಿಗಳು ಅತಿ ವೇಗದಿಂದ ಚಾಲನೆ ಮಾಡುತ್ತಿದ್ದರಿಂದ ಸಾರ್ವಜನಿಕರು ಭಯಭೀತರಾಗಿದ್ದಾರೆ. ಮರಳು ತುಂಬಿದ ಮೇಲೆ ಮರಳು ಗಾಳಿಗೆ ಹಾರಾಡುತ್ತಿದ್ದರಿಂದ ಸಾರ್ವಜನಿಕರು, ಬೈಕ್ ಸವಾರರ ಕಣ್ಣಲ್ಲಿ ಮರಳು ಬಿದ್ದು ಅಪಘಾತಗಳಿಗೆ ಕಾರಣವಾಗಿದೆ. ಕೂಡಲೇ ಈ ಬಗ್ಗೆ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿದರು.
ಸಂಘಟನೆ ತಾಲೂಕು ಅಧ್ಯಕ್ಷ ಶರಣೋಜಿ ಪವಾರ, ಶಿವು ಕೆಂಪು, ಆದಪ್ಪ ನಾಯಕ, ಮಹಿಬೂಬು ಸಾಬ, ಸೈಯದ್ ಸಾಹೇಬ ಹುಸೇನ್ ಹಾಗೂ ಇನ್ನಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ಕಾಂಗ್ರೆಸ್ ಸರ್ಕಾರ ಬಂದಿರುವುದೇ ಅಲ್ಲಾಹುವಿನ ಕೃಪೆಯಿಂದ… ಚಕ್ರವರ್ತಿ ಸೂಲಿಬೆಲೆ
Raichur: ಹಸುಗಳ ಕೆಚ್ಚಲು ಕೊಚ್ಚಲು ಕಾಂಗ್ರೆಸ್ ಸರ್ಕಾರವೇ ಪ್ರೇರಣೆ: ಕೆಎಸ್ ಈಶ್ವರಪ್ಪ
Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ
Raichur; ಜೆಸ್ಕಾಂ ಜೆ.ಇ ಹುಲಿರಾಜ ಮನೆ ಮೇಲೆ ಲೋಕಾಯುಕ್ತ ದಾಳಿ
Raichuru: ರಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವು; 3 ತಿಂಗಳಿನಲ್ಲಿ 12 ಮಂದಿ ಬಲಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.