20ರಂದು ಮಾನ್ವಿ ಬಂದ್‌ಗೆ ಕರೆ
Team Udayavani, May 16, 2022, 2:38 PM IST
ಮಾನ್ವಿ: ರಾಜ್ಯದಲ್ಲಿನ ಸಮಿಶ್ರ ಸರಕಾರದ ಅವಧಿಯಲ್ಲಿ ರಚಿಸಿದ ನಿವೃತ್ತ ನ್ಯಾಯಾಮೂರ್ತಿ ಎಚ್.ಎನ್. ನಾಗಮೋಹನದಾಸ್ ಅಧ್ಯಕ್ಷತೆಯ ಆಯೋಗವು ನೀಡಿದ ವರದಿಯನ್ನು ಜಾರಿ ಮಾಡಲು ಆಗ್ರಹಿಸಿ ವಿವಿಧ ಸಂಘಟನೆಗಳು ರಾಜ್ಯಾದ್ಯಂತ ಬಂದ್ ಗೆ ಕರೆ ನೀಡಿದ್ದರ ಅಂಗವಾಗಿ ಹೋರಾಟ ಕ್ರಿಯಾ ಸಮಿತಿ ವತಿಯಿಂದ ಮೇ 20ರಂದು ಮಾನ್ವಿ ಬಂದ್‌ಗೆ ಕರೆ ನೀಡಲಾಗಿದೆ ಎಂದು ತಿಪ್ಪಣ್ಣ ಬಗಲವಾಡ ವಕೀಲರು ತಿಳಿಸಿದರು.
ಪಟ್ಟಣದಲ್ಲಿ ರಾಜ್ಯ ಸ್ವಾಭಿಮಾನಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳ ಹೋರಾಟ ಕ್ರಿಯಾ ಸಮಿತಿ ತಾ.ಘಟಕ ವತಿಯಿಂದ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಕಳೆದ ಹಲವು ದಿನಗಳಿಂದ ವಾಲ್ಮೀಕಿ ಪೀಠದ ಪ್ರಸನ್ನಾನಂದಪುರಿ ಸ್ವಾಮಿಗಳು ಮೀಸಲಾತಿ ಹೆಚ್ಚಿಸುವಂತೆ ಧರಣಿ ನಡೆಸುತ್ತಿದ್ದರು ಕೂಡ ರಾಜ್ಯ ಸರಕಾರ ಸ್ಪಂದನೆ ತೋರದೆ ಇರುವುದನ್ನು ಪ್ರತಿಭಟಿಸಿ ಮೇ 20ರಂದು ಬೆಳಗ್ಗೆ ಪಟ್ಟಣದ ವಾಲ್ಮೀಕಿ ವೃತ್ತ ಹಾಗೂ ಡಾ| ಅಂಬೇಡ್ಕರ್ ವೃತ್ತಗಳಲ್ಲಿನ ಮೂರ್ತಿಗಳಿಗೆ ಪೂಜೆ ಸಲ್ಲಿಸಿ ಬಸವ ವೃತ್ತದಲ್ಲಿ ಶಾಂತಿಯುತ ಪ್ರತಿಭಟನೆ ನಡೆಸಲಾಗುವುದು. ಆದ್ದರಿಂದ ಸಾರ್ವಜನಿಕರು ತಮ್ಮ ಅಂಗಡಿಗಳನ್ನು ಸ್ವಯಂ ಪ್ರೇರಣೆಯಿಂದ ಬಂದ್ ಮಾಡಿ ಮಾನ್ವಿ ಬಂದ್‌ಗೆ ಸಹಕಾರ ನೀಡುವಂತೆ ಕೋರಿದರು.
ವಾಲ್ಮೀಕಿ ಸಮಾಜದ ವಿಭಾಗೀಯ ಸಂಘಟನಾ ಕಾರ್ಯದರ್ಶಿ ಬುಡ್ಡಪ್ಪ ನಾಯಕ, ಮಾದಿಗ ಮಹಾಸಭಾದ ರಾಜ್ಯ ಕಾರ್ಯದರ್ಶಿ ಪ್ರಭುರಾಜ್ ಕೊಡ್ಲಿ ಮಾತನಾಡಿದರು. ಶಿವರಾಜ ಉಮಳಿ ಹೊಸೂರು, ಪಿ.ರವಿಕುಮಾರ, ಶರಣಯ್ಯ ನಾಯಕ, ಕೆ.ವೈ. ಬಸವರಾಜ, ರಾಮಣ್ಣ ನಾಯಕ, ಶರಣಬಸವ ನಾಯಕ ಜಾನೆಕಲ್, ಹನುಮೇಶ ನಾಯಕ, ಮೌನೇಶ ನಾಯಕ ಸೇರಿದಂತೆ ಇನ್ನಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.