ಕೋವಿಡ್ ಭೀತಿಗಿಂತ ಮುಂಜಾಗ್ರತೆ ಮುಖ್ಯ
Team Udayavani, Oct 12, 2020, 4:57 PM IST
ರಾಯಚೂರು: ಕೋವಿಡ್ ಸೋಂಕಿನ ಬಗ್ಗೆ ಹೆಚ್ಚು ಭಯಭೀತರಾಗದೆ ಮುಂಜಾಗ್ರತೆ ವಹಿಸಿದ್ದಲ್ಲಿ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದು ರಿಮ್ಸ್ ಆಸ್ಪತ್ರೆಯ ಕೋವಿಡ್-19 ನೋಡಲ್ ಅಧಿ ಕಾರಿ ಡಾ| ಅರುಣ್ ಮಸ್ಕಿ ಅಭಿಪ್ರಾಯಪಟ್ಟರು.
ನಗರದ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ರವಿವಾರ ಕಲಾ ಸಂಕುಲ ಸಂಸ್ಥೆಯಿಂದ ಗಾನಗಾರುಡಿಗ ಡಾ| ಎಸ್.ಪಿ. ಬಾಲಸುಬ್ರಹ್ಮಣ್ಯಂ ಸ್ಮರಣಾರ್ಥ ಹಮ್ಮಿಕೊಂಡಿದ್ದ ಸ್ವರ ನಮನ ಹಾಗೂ ಸಾಧಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ವರ್ಷದ ವಿಶೇಷ ವ್ಯಕ್ತಿ ಪ್ರಶಸ್ತಿ ಸ್ವೀಕರಿಸಿ ಅವರು ಮಾತನಾಡಿದರು.
ಕೋವಿಡ್ ಸಂಪೂರ್ಣ ನಿರ್ನಾಮವಾಗ ಬೇಕಾದರೆ ಪ್ರತಿಯೊಬ್ಬರೂ ಕೈಜೋಡಿಸಬೇಕು.ಸೋಂಕು ಹಲವು ಹಂತಗಳಲ್ಲಿ ರೋಗ ಲಕ್ಷಣ ಆಧರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇಂದು ನನಗೆ ನೀಡಿದ ಈ ಗೌರವ ಕೇವಲ ನನಗೆ ಮಾತ್ರ ಸೀಮಿತವಲ್ಲ. ನನ್ನೊಟ್ಟಿಗೆ ಹಗಲಿರುಳು ಶ್ರಮಿಸುತ್ತಿರುವ ಪ್ರತಿಯೊಬ್ಬ ಕೋವಿಡ್ ವಾರಿಯರ್ಸ್‌ಗಳಿಗೆ ಸಲ್ಲುತ್ತದೆ. ಸೋಂಕು ಸದ್ದಿಲ್ಲದೇ ಹರಡುತ್ತಿದೆ. ಜನ ಸೂಕ್ತ ಮುನ್ನೆಚ್ಚರಿಕೆ ವಹಿಸಬೇಕಿದೆ. ಸರ್ಕಾರ ನೀಡುವ ಸೂಚನೆ ತಪ್ಪದೇ ಪಾಲಿಸಿದಲ್ಲಿ ಮಾತ್ರ ರೋಗ ನಿಯಂತ್ರಣಕ್ಕೆ ಬರಲು ಸಾಧ್ಯ. ಈ ಕಾಯಿಲೆ ಇಲ್ಲಿಗೆ ಕೊನೆಗೊಳ್ಳುವುದಿಲ್ಲ. ಹೀಗಾಗಿ ನಮ್ಮ ಆರೋಗ್ಯದ ಬಗ್ಗೆ ನಾವೇ ಎಚ್ಚರಿಕೆ ವಹಿಸಬೇಕು ಎಂದರು.
ಗುಲ್ಬರ್ಗ ವಿಶ್ವವಿದ್ಯಾಲಯದ ಮೌಲ್ಯಮಾಪನಕುಲಸಚಿವ ಡಾ| ಸಂಜೀವ್ ಕುಮಾರ ಕೆ.ಎಂ. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿವಿಧಕ್ಷೇತ್ರಗಳ ಸಾಧಕರನ್ನು ಗುರುತಿಸಿ ಗೌರವಿಸುವುದು ಉತ್ತಮ ಬೆಳವಣಿಗೆ. ಇದರಿಂದ ಅವರಿಗೆ
ಕೆಲಸ ಮಾಡಲು ಮತ್ತಷ್ಟು ಪ್ರೇರಣೆ ಸಿಗಲಿದೆ. ಪ್ರಶಸ್ತಿಯಿಂದ ವಿಶ್ವಾಸ, ಜವಾಬ್ದಾರಿ ಹೆಚ್ಚಾಗಲಿದೆ. ಗಾಯಕ ಬಾಲಸುಬ್ರಹ್ಮಣ್ಯಂ ಅವರು ದೈಹಿಕವಾಗಿ ನಮ್ಮನ್ನು ಬಿಟ್ಟು ಹೋಗಿರಬಹುದು. ಆದರೆ, ಅವರು ತಮ್ಮ ಗಾಯನದಿಂದ ಎಲ್ಲರ ಮನದಲ್ಲೂ ಅಚ್ಚಳಿಯದೇ ಉಳಿದಿದ್ದಾರೆ ಎಂದರು.
ಸಾನ್ನಿಧ್ಯ ವಹಿಸಿದ್ದ ಸುಲ್ತಾನಪುರ ಬೃಹನ್ಮಠದ ಶ್ರೀ ಶಂಭು ಸೋಮನಾಥ ಶಿವಾಚಾರ್ಯರು, ಆಶೀರ್ವಾದ ಪ್ರತಿಷ್ಠಾನದ ಅಧ್ಯಕ್ಷ ಡಾ| ಬಸನಗೌಡ ಪಿ.ಪಾಟೀಲ್, ಭಾಗ್ಯವಂತಿ ಮಹಿಳಾ ಸಹಕಾರಿ ಸಂಘದ ಅಧ್ಯಕ್ಷೆ ಶ್ರೀದೇವಿ ಆರ್.ವಿ. ನಾಯಕ ಮಾತನಾಡಿದರು.
ನಂತರ ವಿವಿಧ ಕ್ಷೇತ್ರದ ಸಾಧಕರನ್ನು ಹಾಗೂ ಸ್ವರ ನಮನ ಕಾರ್ಯಕ್ರಮ ನಡೆಸಿಕೊಟ್ಟ ಕಲಾವಿದರನ್ನು ಸನ್ಮಾನಿಸಲಾಯಿತು. ಕಲಾ ಸಂಕುಲ ಸಂಸ್ಥೆ ಅಧ್ಯಕ್ಷೆರೇಖಾ ಬಡಿಗೇರ ಅಧ್ಯಕ್ಷತೆ ವಹಿಸಿದ್ದರು. ಈ ವೇಳೆಸಂಸ್ಥೆ ಕಾರ್ಯದರ್ಶಿ ಮಾರುತಿ ಬಡಿಗೇರ, ಡಾ| ಪ್ರಣತಿ ಕೆ. ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ
Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು
Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್ – ಮನರಂಜನೆಗೆ ಹೊಸ ಆಯಾಮ
ಮುಂಡಗೋಡ: ಮಂಗನಬಾವು ಉಲ್ಬಣ-ಮೂರು ದಿನ ಶಾಲೆಗೆ ರಜೆ
Maharashtra Polls: ಯಾರಾಗಲಿದ್ದಾರೆ ಮಹಾ ಮುಖ್ಯಮಂತ್ರಿ? ಸುಳಿವು ನೀಡಿದ ಫಡ್ನವೀಸ್
ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!
Dhanashree Verma: ಯಶ್ ಸಿನಿಮಾಕ್ಕೆ ಕ್ರಿಕೆಟಿಗ ಚಹಾಲ್ ಪತ್ನಿ ಹೀರೋಯಿನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.