ಶಿಕ್ಷಣ ಇಲಾಖೆಗೆ ಶಾಲೆ ಬಿಟ್ಟ ಮಕ್ಕಳ ಸವಾಲು
Team Udayavani, Feb 7, 2022, 3:28 PM IST
ರಾಯಚೂರು: ಕಳೆದ ಎರಡು ವರ್ಷದಿಂದ ಇಡೀ ವ್ಯವಸ್ಥೆಯನ್ನೇ ಏರುಪೇರು ಮಾಡಿರುವ ಕೊರೊನಾ ಶಿಕ್ಷಣ ಇಲಾಖೆಯನ್ನು ಬಿಟ್ಟಿಲ್ಲ. ಕಳೆದ ವರ್ಷಕ್ಕೆ ಹೋಲಿಸಿದರೆ ದಾಖಲಾತಿ ಹೆಚ್ಚಾಗುವುದರ ಜತೆಗೆ ಶಾಲೆ ಬಿಟ್ಟ ಮಕ್ಕಳ ಸಂಖ್ಯೆ ಕೂಡ ಮೂರು ಪಟ್ಟು ಹೆಚ್ಚಾಗಿರುವುದು ವಿಪರ್ಯಾಸ.
ಕೊರೊನಾ ಕಾರಣಕ್ಕೆ ಬಹುತೇಕ ಶಾಲೆಗಳು ಒಂದು ವರ್ಷ ಸಂಪೂರ್ಣ ಸ್ಥಗಿತಗೊಂಡಿದ್ದವು. ಆದರೂ ದಾಖಲಾತಿ ಪ್ರಕ್ರಿಯೆ ಮಾತ್ರ ನಿಂತಿರಲಿಲ್ಲ. ಆದರೆ, ಈ ವರ್ಷ ಶಾಲೆಗಳು ಬಹುತೇಕ ಆರಂಭಗೊಂಡಿದ್ದು, ದಾಖಲಾತಿಯಲ್ಲಿ ಹೆಸರಿದ್ದರೂ ಮಕ್ಕಳು ಶಾಲೆಗೆ ಬರುತ್ತಿಲ್ಲ. ಶಿಕ್ಷಣ ಇಲಾಖೆ ಮಾಹಿತಿ ಪ್ರಕಾರ 2020-2021ರಲ್ಲಿ 456 ಮಕ್ಕಳು ಶಾಲೆಯಿಂದ ಹೊರಗುಳಿದಿದ್ದರೆ, 2021-2022ನೇ ಸಾಲಿನಲ್ಲಿ 1,966 ಮಕ್ಕಳು ಹೊರಗುಳಿದಿರುವ ಮಾಹಿತಿ ಇದೆ. ಅದರಲ್ಲಿ ಬಹುತೇಕ ಮಕ್ಕಳು ಕೆಲಸಗಳಿಗೆ ಹೋಗುತ್ತಿದ್ದಾರೆ ಎನ್ನುವುದು ಇತ್ತ ಬಾಲ ಕಾರ್ಮಿಕ ಇಲಾಖೆಗೂ ಹೆಚ್ಚುವರಿ ಕೆಲಸ ತಂದಿಟ್ಟಿದೆ.
ಕೊರೊನಾದಿಂದ ಬಡ ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ಜೀವನ ನಿರ್ವಹಣೆ ಸವಾಲು ಎದುರಿಸುತ್ತಿವೆ. ಹೀಗಾಗಿ ಮಕ್ಕಳನ್ನು ಶಾಲೆ ಬಿಡಿಸಿ ಕೂಲಿಗೆ ಕಳುಹಿಸುವ ಪ್ರಕ್ರಿಯೆ ಹೆಚ್ಚಾಗುತ್ತಿದೆ. ಅದರಲ್ಲೂ ಈ ಬಾರಿ ಜಿಲ್ಲೆಯಲ್ಲಿ ಹತ್ತಿ ಬಿಡಿಸಲು ಮಕ್ಕಳು ಹೆಚ್ಚಾಗಿ ಬಳಕೆಯಾಗಿದ್ದಾರೆ.
ಶಾಲೆ ಬಿಟ್ಟವರೆಲ್ಲ ಬಾಲ ಕಾರ್ಮಿಕರಲ್ಲ
ಜಿಲ್ಲೆಯಲ್ಲಿ ಬಾಲ ಕಾರ್ಮಿಕರ ಸಂಖ್ಯೆ ಕಡಿಮೆಯಾಗಿದೆ. ಶಾಲೆ ಬಿಟ್ಟ ಮಕ್ಕಳೆಲ್ಲ ಬಾಲ ಕಾರ್ಮಿಕರು ಎನ್ನಲಾಗದು ಎನ್ನುತ್ತಾರೆ ಬಾಲ ಕಾರ್ಮಿಕ ಯೋಜನೆ ಅಧಿಕಾರಿಗಳು. ಕಳೆದ ವರ್ಷ ಜಿಲ್ಲೆಯಲ್ಲಿ 1100ರ ಆಸುಪಾಸು ಬಾಲ ಕಾರ್ಮಿಕರನ್ನು ಗುರುತಿಸಲಾಗಿತ್ತು. ಈ ಬಾರಿ ಆ ಸಂಖ್ಯೆ ಹೆಚ್ಚು ಕಡಿಮೆ 700-800 ಆಗಿರುವ ಸಾಧ್ಯತೆ ಇದೆ. ಕೆಲವೊಮ್ಮೆ ಗ್ರಾಮೀಣ ಭಾಗದಲ್ಲಿ ತಮ್ಮ ಮನೆ ಕೆಲಸಗಳಿಗೆ ಹೋಗುತ್ತಾರೆ ಎನ್ನುತ್ತಾರೆ ಅಧಿಕಾರಿಗಳು.
ಹತ್ತಿ ಬೆಳೆಯೇ ಕಂಟಕ
ಜಿಲ್ಲೆಯಲ್ಲಿ ಬಾಲ ಕಾರ್ಮಿಕ ಪದ್ಧತಿಗೆ ಕಂಟಕವಾಗಿರುವುದೇ ಹತ್ತಿ ಬೆಳೆ. ಪ್ರತಿ ವರ್ಷ ಹತ್ತಿ ಸೀಜನ್ ಶುರುವಾಗುತ್ತಿದ್ದಂತೆ ಮಕ್ಕಳು ಶಾಲೆಯಿಂದ ದೂರವಾಗುತ್ತಾರೆ. ಅಲ್ಲದೇ, ಹತ್ತಿ ಬಿಡಿಸಲು ದೊಡ್ಡವರಿಗಿಂತ ಮಕ್ಕಳೇ ಸೂಕ್ತ ಎನ್ನುವ ಕಾರಣಕ್ಕೆ ಕೆಲ ಮಧ್ಯವರ್ತಿಗಳು ಮಕ್ಕಳನ್ನು ಕರೆದುಕೊಂಡು ಹೋಗುತ್ತಾರೆ. ಆಟೋಗಳಲ್ಲಿ ಟಾಪ್ ಮೇಲೆ ಮಕ್ಕಳನ್ನು ಕೂಡಿಸಿಕೊಂಡು ಜಿಲ್ಲೆ ಮಾತ್ರವಲ್ಲದೇ ನೆರೆಯ ತೆಲಂಗಾಣ, ಆಂಧ್ರದ ಗಡಿ ಗ್ರಾಮಗಳಿಗೆ ಕರೆದುಕೊಂಡು ಹೋಗುತ್ತಾರೆ. ಇದನ್ನು ಗಮನಿಸಿ ಕ್ರಮ ಕೈಗೊಳ್ಳಬೇಕಾದ ಅಧಿಕಾರಿಗಳು ಪರಿಣಾಮಕಾರಿಯಾಗಿ ಕ್ರಮ ಕೈಗೊಳ್ಳುವುದಿಲ್ಲ ಎನ್ನುವುದು ಪ್ರಜ್ಞಾವಂತರ ಆರೋಪ. ಅಲ್ಲದೇ, ಈ ಬಾರಿ ಕೆಜಿ ಹತ್ತಿ ಬಿಡಿಸಿದರೆ 10-12 ರೂ. ಸಿಗುತ್ತಿದ್ದ ಕಾರಣ ಪಾಲಕ, ಪೋಷಕರೇ ಮಕ್ಕಳನ್ನು ಶಾಲೆ ಬಿಡಿಸಿ ಹತ್ತಿ ಬಿಡಿಸಲು ಕಳುಹಿಸುತ್ತಿರುವ ಪ್ರಸಂಗಗಳು ಹೆಚ್ಚಾಗಿ ನಡೆದಿವೆ.
ಕೊರೊನಾ ಕಾರಣಕ್ಕೆ ಈ ಬಾರಿ ಸರ್ಕಾರಿ ಶಾಲೆಯಲ್ಲಿ ದಾಖಲಾತಿ ಭಾರೀ ಪ್ರಮಾಣದಲ್ಲಿ ಹೆಚ್ಚಾಗಿದೆ. ಆದರೆ, ಗ್ರಾಮೀಣ ಭಾಗದಲ್ಲಿ ಕೆಲವೊಮ್ಮೆ ಮಕ್ಕಳು ಶಾಲೆಗೆ ಬಾರದೆ ಹೊಲ ಮನೆ ಕೆಲಸಗಳಿಗೆ ಹೋಗುತ್ತಾರೆ. ಅಲ್ಲಿನ ಶಿಕ್ಷಕರಿಗೆ ಪಾಲಕರ ಮನವೊಲಿಸುವಂತೆ ತಿಳಿಸಲಾಗಿದೆ. -ವೃಷಭೇಂದ್ರಯ್ಯ, ಡಿಡಿಪಿಐ, ರಾಯಚೂರು
ಜಿಲ್ಲೆಯಲ್ಲಿ ಬಾಲ ಕಾರ್ಮಿಕ ಸಂಖ್ಯೆ ಹೆಚ್ಚಾಗಿಲ್ಲ. ಆದರೆ, ಶಾಲೆ ಬಿಟ್ಟ ಮಕ್ಕಳ ಸಂಖ್ಯೆ ಹೆಚ್ಚಾಗಿರಬಹುದು. ಶಾಲೆ ಬಿಟ್ಟ ಮಕ್ಕಳನ್ನೆಲ್ಲ ನಾವು ಬಾಲ ಕಾರ್ಮಿಕರು ಎನ್ನಲಾಗದು. ಅಲ್ಲದೇ, ನಮ್ಮ ಇಲಾಖೆ ನಿರಂತರ ದಾಳಿ ಮಾಡುವುದು, ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದೆ. ಸಾಕಷ್ಟು ಪ್ರಕರಣಗಳನ್ನು ದಾಖಲಿಸಿ ವಾಹನಗಳನ್ನು ಸೀಜ್ ಮಾಡಲಾಗಿದೆ. -ರವಿಕುಮಾರ್, ಬಾಲ ಕಾರ್ಮಿಕ ಯೋಜನೆ ಕಾರ್ಯಕ್ರಮ ವ್ಯವಸ್ಥಾಪಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ
Raichur; ಜೆಸ್ಕಾಂ ಜೆ.ಇ ಹುಲಿರಾಜ ಮನೆ ಮೇಲೆ ಲೋಕಾಯುಕ್ತ ದಾಳಿ
Raichuru: ರಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವು; 3 ತಿಂಗಳಿನಲ್ಲಿ 12 ಮಂದಿ ಬಲಿ
Karnataka Politics: ಮುಂದಿನ ಅವಧಿಗೆ ‘ನಾನೇ ಸಿಎಂ ಅಭ್ಯರ್ಥಿ’: ಸತೀಶ್ ಜಾರಕಿಹೊಳಿ
Maski ಅಕ್ರಮ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ
MUST WATCH
ಹೊಸ ಸೇರ್ಪಡೆ
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!
Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.