ಎಲ್ಲರ ಸಹಕಾರದಿಂದ ಬದಲಾವಣೆ ಸಾಧ್ಯ

Team Udayavani, May 9, 2022, 3:30 PM IST

15change

ರಾಯಚೂರು: ಕೇವಲ ಸಂಘ-ಸಂಸ್ಥೆಗಳು ಮಾತ್ರ ಸಮಾಜಸೇವೆ ಮಾಡಲಿ ಎನ್ನುವ ಭಾವನೆ ತೊರೆದು ಪ್ರತಿಯೊಬ್ಬರು ತಮ್ಮ ಜವಾಬ್ದಾರಿ ನಿರ್ವಹಿಸಿದಲ್ಲಿ ಬದಲಾವಣೆ ಸಾಧ್ಯ ಎಂದು ಜಿಲ್ಲಾ ಸತ್ರ ನ್ಯಾಯಾಧೀಶರಾದ ಮಹದೇವಪ್ಪ ಗಂಗಪ್ಪ ಕೂಡವಕ್ಕಲಗೇರ್‌ ಹೇಳಿದರು.

ನಗರದ ರೇಸ್‌ ಚಾಣಕ್ಯ ಶಾಲೆಯಲ್ಲಿ ಗ್ರೀನ್‌ ರಾಯಚೂರು ಸಂಸ್ಥೆಗೆ ಶಿಲ್ಪಾ ಮೆಡಿಕೇರ್‌ ರಾಯಚೂರು, ಶಿಲ್ಪಾ ಫೌಂಡೇಶನ್‌ನಿಂದ ದೇಣಿಗೆ ನೀಡಿದ ಟ್ರ್ಯಾಕ್ಟರ್‌ ಮತ್ತು ನೀರಿನ ಟ್ಯಾಂಕರ್‌ ಹಸ್ತಾಂತರಿಸಿ ಅವರು ಮಾತನಾಡಿದರು.

ಸಂಘ-ಸಂಸ್ಥೆಗಳ ಕಾರ್ಯ ಚಟುವಟಿಕೆಗಳು ಯಶಸ್ವಿಯಾಗಬೇಕಾದರೆ ಅದರಲ್ಲಿ ಜನರ ಪಾಲ್ಗೊಳ್ಳುವಿಕೆ ಬಹಳ ಮಹತ್ವದ್ದು. ಬದಲಾವಣೆ ನಿರಂತರ ಚಟುವಟಿಕೆಯಾಗಿದೆ. ಗ್ರೀನ್‌ ರಾಯಚೂರು ಸಂಸ್ಥೆಯು ರಾಯಚೂರನ್ನು ಹಸಿರು ನಗರವಾಗಿಸಲು ಸಾಕಷ್ಟು ಕಾರ್ಯಕ್ರಮ ಹಮ್ಮಿಕೊಂಡಿದ್ದು, ಅದಕ್ಕೆ ಜನರ ಸಹಕಾರ ಬಹಳ ಮುಖ್ಯ ಎಂದರು.

ಶಿಲ್ಪಾ ಮೆಡಿಕೇರ್‌ ವ್ಯವಸ್ಥಾಪಕ ನಿರ್ದೇಶಕ ವಿಷ್ಣುಕಾಂತ ಭುತಡಾ ಮಾತನಾಡಿ, ಜನರ ಮನಸ್ಥಿತಿ ಬದಲಾವಣೆಯಾದರೆ ಏನಾದರೂ ಮಾಡಬಹುದು. ಗ್ರೀನ್‌ ರಾಯಚೂರು ಸಂಸ್ಥೆ ಆ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದು, ನಮ್ಮ ಸಂಸ್ಥೆ ಸಹಕರಿಸಲಿದೆ ಎಂದರು.

ಗ್ರೀನ್‌ ರಾಯಚೂರು ಸಂಸ್ಥೆ ಗೌರವಾಧ್ಯಕ್ಷ ಕೊಂಡಾ ಕೃಷ್ಣಾಮೂರ್ತಿ ಮಾತನಾಡಿ, ನಾಲ್ಕು ಜನರಿಂದ ಶುರುವಾದ ಈ ಸಂಸ್ಥೆ ಇಂದು ಸಾಕಷ್ಟು ಜನರ ಬೆಂಬಲದೊಂದಿಗೆ ಮುನ್ನಡೆಯುತ್ತಿದೆ ಎಂದರು.

ಶಿಲ್ಪಾ ಮೆಡಿಕೇರ್‌ನ ಎಂಡಿ ವಿಷ್ಣುಕಾಂತ ಸಿ ಭುತಡಾ, ನಗರಸಭೆ ಅಧ್ಯಕ್ಷೆ ಲಲಿತಾ ಕಡಕೋಲು, ರಾಯಚೂರು ವಿವಿ ನಾಮನಿರ್ದೇಶಿತ ಸದಸ್ಯ ರಾಜಾ ಶ್ರೀನಿವಾಸ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯದರ್ಶಿ ರಮೇಶ್‌ ಮಹಾಜನ್‌, ನಗರಸಭೆ ಸದಸ್ಯ ನಾಗರಾಜ್‌ ಕಾನಾಪೂರ, ಶಶಿರಾಜ್‌ ಇರಗೇರ್‌, ಡಾ| ಸಿ.ವಿ .ಪಾಟೀಲ್‌, ರಮೇಶ್‌ ಜೈನ್‌, ಗಜಾನನ ಸಾನ್ವಿ, ರಾಮಾಂಜನೇಯ, ವೆಂಕಟೇಶ್‌, ಸಂಧ್ಯಾ ನಾಯಕ, ಗ್ರೀನ್‌ ರಾಯಚೂರು ಅಧ್ಯಕ್ಷೆ ಸರಸ್ವತಿ ಕಿಲಕಿಲೆ, ರಾಜೇಂದ್ರ ಕುಮಾರ್‌ ಶಿವಾಳೆ ಇದ್ದರು.

ಟಾಪ್ ನ್ಯೂಸ್

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-raichur

Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ

1-wewqewq

Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

ಮಂತ್ರಾಲಯ ಶ್ರೀಗಳಿಂದ ತುಂಗಭದ್ರ ನದಿಯಲ್ಲಿ ದಂಡೋದಕ ಸ್ನಾನ

Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ

5-raichur

Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.