ಶಾಲಾ ಗೋಡೆಗಳಿಗೆ ಬಣ್ಣದ ಚಿತ್ತಾರ
Team Udayavani, Jul 20, 2022, 6:00 PM IST
ಮಾನ್ವಿ: 75ನೇ ಅಜಾದಿ ಕಾ ಅಮೃತ್ ಮಹೋತ್ಸವ ಅಂಗವಾಗಿ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ್ದ ಹಿರಿಯ ಹೋರಾಟಗಾರರ ಸ್ಮರಣೆಗಾಗಿ ಅವರು ವಾಸವಿದ್ದ ಗ್ರಾಮಗಳ ಶಾಲೆಗಳಲ್ಲಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗುವುದು ಎಂದು ಸ್ಕೂಲ್ ಬೆಲ್ 75 ಅಭಿಯಾನದ ಸಂಚಾಲಕ ಗುರುಪ್ರಸಾದ್ ಕಡಗದ ತಿಳಿಸಿದರು.
ತಾಲೂಕಿನ ಆಲ್ದಾಳ ಗ್ರಾಮದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಬೆಳಗಾವಿ ವತಿಯಿಂದ ರಾಷ್ಟ್ರೀಯ ಸೇವಾ ಯೋಜನಾ ಕೋಶ ವತಿಯಿಂದ ಅಮೃತ್ ಮಹೋತ್ಸವದ ಅಂಗವಾಗಿ ರಾಯಚೂರಿನ ಎಸ್‌ಎಲ್‌ಎನ್ ಕಾಲೇಜ್ ಆಫ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ನಡೆದ ಶಾಲಾ ಅಭಿವೃದ್ಧಿ ಚಟುವಟಿಕೆಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ಗ್ರಾಮದ ಸ್ವಾತಂತ್ರ್ಯ ಯೋಧರಾದ ಕಾಶಿರಾವ್ ಪಾಟೀಲ್ ಅವರು ವಾಸವಿದ್ದ ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆಯನ್ನು ಕಳೆದ ಹಲವು ದಿನಗಳಿಂದ ಶ್ರಮದಾನ ಮಾಡುವ ಮೂಲಕ ವಿದ್ಯಾರ್ಥಿಗಳು ಶಾಲೆಗೆ ಹೊಸ ಕಳೆ ತಂದಿದ್ದಾರೆ. ತರಗತಿ ಕೋಣೆ ಹಾಗೂ ಗೋಡೆಗಳಿಗೆ ಬಣ್ಣ ಬಣ್ಣದ ಚಿತ್ತಾರಗಳನ್ನು ಬಿಡಿಸುವ ಮೂಲಕ ಆಕರ್ಷಿಕವಾಗಿಸಿದ್ದಾರೆ. ತರಗತಿ ಕೊಠಡಿಗಳಿಗೆ ವಿವಿಧ ಚಿತ್ರಗಳನ್ನು ಬಿಡಿಸಿ ವಿದ್ಯಾರ್ಥಿಗಳಿಗೆ ಕಲಿಕೆಗೆ ಪೂರಕ ವಾತಾವರಣ ಮೂಡಿಸಲಾಗಿದೆ ಎಂದರು.
ಗ್ರಂಥಾಲಯಗಳಿಗೆ ಪುಸ್ತಕ ಹಾಗೂ ವಿಜ್ಞಾನ ಪ್ರಯೋಗಗಳಿಗೆ ಅಗತ್ಯವಿರುವ ವೈಜ್ಞಾನಿಕ ಪ್ರಯೋಗ ಸಾಧನ ಸಲಕರಣೆ, ಶುದ್ಧ ಕುಡಿಯುವ ನೀರು, ಶೌಚಾಲಯಗಳ ಸ್ವತ್ಛತೆ, ಶಾಲಾ ಆವರಣದಲ್ಲಿ ಸ್ವತ್ಛತೆ ಸೇರಿದಂತೆ ಮೂಲ ಸೌಕರ್ಯ ಅಭಿವೃದ್ಧಿ ಗೊಳಿಸಲಾಗುತ್ತಿದೆ ಎಂದು ತಿಳಿಸಿದರು. ಅಭಿಷೇಕ ಶಾಲೆಯ ಮುಖ್ಯಗುರುಗಳು ಹಾಗೂ ಶಿಕ್ಷಕರು ಸಾಥ್ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sushasana Day: ಕಾಂಗ್ರೆಸ್ ಆಡಳಿತದಲ್ಲಿ ಜಂಗಲ್ ರಾಜ್ ಸೃಷ್ಟಿ: ಬಿ.ಎಲ್.ಸಂತೋಷ್
Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು
Belthangady: ಬೈಕ್ ಸವಾರ ಸಾವು ಪ್ರಕರಣ; ಸರಕಾರಿ ಬಸ್ ಚಾಲಕನಿಗೆ ಶಿಕ್ಷೆ;ದಂಡ
Egg Thrown: ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ: ಬಿಜೆಪಿ ನಾಯಕರು ಗರಂ
New Products KMF: ಮಾರುಕಟ್ಟೆಗೆ ಬಂತು “ನಂದಿನಿ’ ಇಡ್ಲಿ, ದೋಸೆ ಹಿಟ್ಟು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.