ಶಿಕ್ಷಣದಿಂದ ಸಮುದಾಯದ ಅಭಿವೃದ್ಧಿ
Team Udayavani, Feb 16, 2019, 9:27 AM IST
ಮಾನ್ವಿ: ಬಂಜಾರ ಸಮುದಾಯ ಸರ್ವತೋಮುಖವಾಗಿ ಅಭಿವೃದ್ಧಿ ಹೊಂದಬೇಕಾದರೆ ಶಿಕ್ಷಣದಿಂದ ಮಾತ್ರ ಸಾಧ್ಯ ಎಂದು ವಿಧಾನಸಭಾ ಸದಸ್ಯ ರಾಜಾವೆಂಕಟಪ್ಪ ನಾಯಕ ಹೇಳಿದರು. ಪಟ್ಟಣದ ಟಿಎಪಿಸಿಎಂಎಸ್ ಆವರಣದಲ್ಲಿ ತಾಲೂಕು ಆಡಳಿತದಿಂದ ಹಮ್ಮಿಕೊಂಡಿದ್ದ ಸಂತ ಶ್ರೀ ಸೇವಾಲಾಲ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಬಂಜಾರ ಸಮುದಾಯದ ಸಂಸ್ಕೃತಿ, ಸಂಪ್ರದಾಯ, ಆಚರಣೆಗಳು ಬೆಳಕಿಗೆ ಬರುತ್ತಿಲ್ಲ. ಬಂಜಾರ ಸಮುದಾಯ ರಾಜಕೀಯ, ಶೈಕ್ಷಣಿಕ, ಆರ್ಥಿಕ, ಸಾಮಾಜಿಕವಾಗಿ ಮುಂದೆ ಬರಬೇಕಿದೆ ಎಂದು ಹೇಳಿದರು.
ಸಿಂಧೂ ನಾಗರಿಕತೆಯಷ್ಟೆ ಬಂಜಾರ ಸಮುದಾಯ ಇತಿಹಾಸ ಹೊಂದಿದೆ ಎಂದು ಹೇಳಲಾಗುತ್ತಿದೆ. ಆದರೆ ಲಮಾಣಿ ಭಾಷೆಗೆ ಲಿಪಿ ಇಲ್ಲದೆ ಇರುವುದು ಕೂಡ ಅಭಿವೃದ್ಧಿಗೆ ಅಡ್ಡಿಯಾಗಿರಬಹುದು. ತಮ್ಮ ತಾತ ರಾಜ ಹನುಮಪ್ಪ ನಾಯಕ ಹಾಗೂ ತಂದೆ ಅಂಬಣ್ಣ ನಾಯಕ ಕಾಲದಿಂದಲೂ ಲಮಾಣಿ ಸಮುದಾಯದೊಂದಿಗೆ ಅವಿನಾಭಾವ ಸಂಬಂಧ ಇದೆ. ತಮ್ಮ ಅಧಿಕಾರಾವಧಿಯಲ್ಲಿ ಬಂಜಾರ ಸಮುದಾಯಕ್ಕೆ ಉನ್ನತ ರಾಜಕೀಯ ಸ್ಥಾನಮಾನ ನೀಡಲಾಗುವುದು. ಪುರಸಭೆಯಿಂದ ಜಾಗ ಮಂಜೂರಾದರೆ ಭವನ ನಿರ್ಮಾಣಕ್ಕೆ ಅನುದಾನ ನೀಡಲಾಗುವುದು ಎಂದು ಹೇಳಿದರು.
ಮದ್ಲಾಪುರ ಸರ್ಕಾರಿ ಶಾಲೆ ಶಿಕ್ಷಕ ತಮ್ಮಣ್ಣ ರಾಥೋಡ ಸಂತ ಶ್ರೀ ಸೇವಾಲಾಲ ಜಯಂತಿ ಕುರಿತು ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಗಣ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು. ಇದಕ್ಕೂ ಮೊದಲು ಪಟ್ಟಣದ ಪ್ರವಾಸಿ ಮಂದಿರ ವೃತ್ತದಿಂದ ಬಸವ
ವೃತ್ತದ ಮೂಲಕ ಟಿಎಪಿಸಿಎಂಎಸ್ ಆವರಣದವರೆಗೆ ಸಂತ ಶ್ರೀ ಸೇವಾಲಾಲ ಭಾವಚಿತ್ರ ಮೆರವಣಿಗೆ ಮಾಡಲಾಯಿತು.
ಜಿಪಂ ಸದಸ್ಯ ಕಿರಿಲಿಂಗಪ್ಪ, ಉಪತಹಶೀಲ್ದಾರ್ ಸಿದ್ದನಗೌಡ, ಪುರಸಭೆ ಹಿರಿಯ ಸದಸ್ಯ ರಾಜಾಮಹೇಂದ್ರ ನಾಯಕ, ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ ಗುಡಿಹಾಳ, ಮುಖಂಡರಾದ ಮಲ್ಲಿಕಾರ್ಜುನ ಪಾಟೀಲ ಬಲ್ಲಟಗಿ, ತನ್ವಿರ್ ವಕೀಲ, ಗೋವಿಂದರಾಜ ವಕೀಲ, ವೀರೇಶ ಅರೋಲಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾತ್ರೋರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ
Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು
Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
MUST WATCH
ಹೊಸ ಸೇರ್ಪಡೆ
Doctor; ಖ್ಯಾತ ಹೃದ್ರೋಗ ತಜ್ಞ ಡಾ.ಎಸ್.ಜಿ.ಸರ್ವೋತ್ತಮ ಪ್ರಭು ವಿಧಿವಶ
Divorce: ಗಂಡನಿಂದ ವಿಚ್ಚೇದನ ಪಡೆದ ಎ.ಆರ್.ರೆಹಮಾನ್ ತಂಡದ ಸದಸ್ಯೆ ಮೋಹಿನಿ
Panaji: 55ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನಾ ಸಮಾರಂಭಕ್ಕೆ ಕ್ಷಣಗಣನೆ ಆರಂಭ
Viral: ಮದುವೆ ಸಂಭ್ರಮದಲ್ಲಿ 20 ಲಕ್ಷ ರೂಪಾಯಿಯನ್ನು ಗಾಳಿಯಲ್ಲಿ ಎಸೆದ ಅತಿಥಿಗಳು.!
Raichur: ರಾತ್ರೋರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.