ಕೊಪ್ಪಳ ಲೋಕಸಭೆ ಕ್ಷೇತ್ರದಲ್ಲಿ ಕೈ ಟಿಕೆಟ್‌ಗೆ ಪೈಪೋಟಿ


Team Udayavani, Feb 7, 2019, 11:45 AM IST

rai.jpg

ಗೊರೇಬಾಳ: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಕಾಂಗ್ರೆಸ್‌ನಲ್ಲಿ ಟಿಕೆಟ್ ಆಕಾಂಕ್ಷಿಗಳ ಪಟ್ಟಿ ಹೆಚ್ಚುತ್ತಲಿದೆ. ಕೊಪ್ಪಳ ಲೋಕಸಭೆ ಕ್ಷೇತ್ರದ ಟಿಕೆಟ್ಗಾಗಿ ಸಿಂಧನೂರು ಬ್ಲಾಕ್‌ ಕಾಂಗ್ರೆಸ್‌ನಿಂದ ನಾಲ್ವರು ಆಕಾಂಕ್ಷಿಗಳ ಹೆಸರುಗಳನ್ನು ವೀಕ್ಷಕರಿಗೆ ಸಲ್ಲಿಸಿದ್ದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಇತ್ತೀಚೆಗೆ ಹೊಸಪೇಟೆಯಲ್ಲಿ ಎಐಸಿಸಿ ಕಾರ್ಯದರ್ಶಿ, ಹೈ-ಕ ಭಾಗದ ಕಾಂಗ್ರೆಸ್‌ ಉಸ್ತುವಾರಿ ಶೈಲಜನಾಥ ಶಾಖೆ ಅಭ್ಯರ್ಥಿ ಆಯ್ಕೆ ಸಂಬಂಧಿಸಿದಂತೆ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರು, ಪ್ರಮುಖ ಚುನಾಯಿತ ಪ್ರತಿನಿಧಿಗಳ ಸಭೆ ಕರೆದಿದ್ದರು. ಸಭೆಯಲ್ಲಿ ಸಿಂಧನೂರು ವಿಧಾನಸಭಾ ಕ್ಷೇತ್ರದಿಂದ ಯುವ ಕಾಂಗ್ರೆಸ್‌ ರಾಜ್ಯಾಧ್ಯಕ್ಷ ಬಸನಗೌಡ ಬಾದರ್ಲಿ, ಮಾಜಿ ಶಾಸಕ ಹಂಪನಗೌಡ ಬಾದರ್ಲಿ, ಮಾಜಿ ಸಂಸದ ಕೆ. ವಿರೂಪಾಕ್ಷಪ್ಪ ಹಾಗೂ ಕೆಪಿಸಿಸಿ ಕಾರ್ಯದರ್ಶಿ ಕೆ. ಕರಿಯಪ್ಪ ಅವರ ಹೆಸರನ್ನು ಶಿಫಾರಸು ಮಾಡಲಾಗಿದೆ.

ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರಮುಖ 12 ಜನ ಆಕಾಂಕ್ಷಿಗಳ ಹೆಸರು ಸಲ್ಲಿಕೆಯಾಗಿದ್ದು, ಟಿಕೆಟ್ಗಾಗಿ ಭಾರೀ ಪೈಪೋಟಿ ಕಂಡುಬರುತ್ತಿದೆ. ಸಿಂಧನೂರಿನ ನಾಲ್ವರು ಸೇರಿದಂತೆ ಪ್ರಮುಖವಾಗಿ ಮಾಜಿ ಸಚಿವರಾದ ಬಸವರಾಜ ರಾಯರೆಡ್ಡಿ, ಶಿವರಾಜ ತಂಗಡಗಿ, ಬಳ್ಳಾರಿಯ ಸೂರ್ಯ ನಾರಾಯಣ ರೆಡ್ಡಿ, ಕೊಪ್ಪಳದ ರಾಜಶೇಖರ ಹಿಟ್ನಾಳ, ಕುಷ್ಟಗಿಯ ಶರಣೇಗೌಡ ಬಯ್ನಾಪುರ, ಗಂಗಾವತಿಯ ಶಿವರಾಮೇಗೌಡ ಹಾಗೂ ಮಳಿಮಠ ಹೆಸರುಗಳನ್ನು ಶಿಫಾರಸು ಮಾಡಲಾಗಿದೆ ಎಂದು ತಿಳಿದುಬಂದಿದೆ.

ರಾಜ್ಯದಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಸಮ್ಮಿಶ್ರ ಸರ್ಕಾರ ಅಸ್ತಿತ್ವದಲ್ಲಿದೆ. ಕೊಪ್ಪಳ ಲೋಕಸಭಾ ಕ್ಷೇತ್ರದಿಂದ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಿದರೆ ಗೆಲುವು ಸುಲಭವಾಗಲಿದೆ ಎನ್ನುವ ಲೆಕ್ಕಾಚಾರ ಆಕಾಂಕ್ಷಿಗಳಲ್ಲಿದೆ. ಹೀಗಾಗಿ ಸಹಜವಾಗಿಯೇ ಕಾಂಗ್ರೆಸ್‌ನಲ್ಲಿ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿದೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೊಪ್ಪಳ ಲೋಕಸಭಾ ಕ್ಷೇತ್ರದಿಂದಲೇ ಸ್ಪರ್ಧಿಸುತ್ತಾರೆ ಎನ್ನುವ ಬಗ್ಗೆ ಸಾಕಷ್ಟು ಚರ್ಚೆಗಳು ನಡೆದಿದ್ದವು. ಆದರೆ ಸೋಮವಾರ ಸಿಂಧನೂರಿಗೆ ಭೇಟಿ ನೀಡಿದ್ದ ಸಿದ್ದರಾಮಯ್ಯ ತಾವು ಸ್ಪರ್ಧಿಸುವುದಿಲ್ಲ. ಬದಲಾಗಿ ಕಾಂಗ್ರೆಸ್‌ ಯಾರಿಗೆ ಟಿಕೆಟ್ ಕೊಡಲಿದೆಯೇ ಅವರನ್ನು ಗೆಲ್ಲಿಸಬೇಕು ಎಂದು ಅಭಿಮಾನಿಗಳಿಗೆ, ಕಾರ್ಯಕರ್ತರಿಗೆ ಹೇಳಿದ್ದಾರೆ. ಜೊತೆಗೆ ಗಂಗಾವತಿಯ ಮಾಜಿ ಸಚಿವ ಇಕ್ಬಾಲ್‌ ಅನ್ಸಾರಿ ಹೆಸರು ಸಹ ಪ್ರಮುಖವಾಗಿ ಕೇಳಿ ಬಂದಿತ್ತು. ಆದರೆ ಅವರೇ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದು, ಬಹುತೇಕ ಸಿಂಧನೂರು ಇಲ್ಲವೇ ಯಲಬುರ್ಗಾದವರಿಗೆ ಟಿಕೆಟ್ ಖಚಿತವಾಗಲಿದೆ ಎಂಬ ಚರ್ಚೆಗಳು ಪಕ್ಷದ ಕಾರ್ಯಕರ್ತರಲ್ಲಿ ನಡೆದಿವೆ.

ಲೋಕಸಭೆ ಚುನಾವಣೆಗೆ ಕಾಂಗ್ರೆಸ್‌ ಈಗಾಗಲೇ ಭರ್ಜರಿ ತಯಾರಿ ನಡೆಸಿದೆ. ಟಿಕೆಟ್ಗಾಗಿ ಆಕಾಂಕ್ಷಿಗಳು ಹೈಕಮಾಂಡ್‌ ಮೇಲೆ ಇನ್ನಿಲ್ಲದ ಒತ್ತಡ ಹಾಕುತ್ತಿದ್ದಾರೆ. ಆದರೆ ಹಾಲಿ ಸಂಸದರಿರುವ ಬಿಜೆಪಿಯಲ್ಲಿ ಮಾತ್ರ ಚುನಾವಣಾ ಉತ್ಸಾಹ ಕಾಣುತ್ತಿಲ್ಲ. ಸಂಸದ ಸಂಗಣ್ಣ ಕರಡಿ ಅವರಿಗೆ ಟಿಕೆಟ್ ಸಿಗಲಿದೆಯೇ? ಅಥವಾ ತಪ್ಪಲಿದೆಯೇ ಎನ್ನುವ ಬಗ್ಗೆಯೇ ಸಿಂಧನೂರಲ್ಲಿ ಹೆಚ್ಚು ಚರ್ಚೆಗಳು ನಡೆಯುತ್ತಿವೆ. ಸ್ಥಳೀಯ ಬಿಜೆಪಿ ಮುಖಂಡರಲ್ಲಿನ ವೈಮನಸ್ಸಿನಿಂದಾಗಿ ಕಾರ್ಯಕರ್ತರು ಪಕ್ಷ ಸಂಘಟನೆಯಿಂದ ಬಹುತೇಕ ದೂರ ಉಳಿದಿದ್ದಾರೆ.

ಟಾಪ್ ನ್ಯೂಸ್

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

Sindhanur: ಲಾರಿ ಪಲ್ಟಿ… ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

8-sirwar

Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

court

Kasaragod; ಯುವಕನ ಕೊಲೆ: 6 ಮಂದಿಗೆ ಜೀವಾವಧಿ

death

Puttur: ಅಪಘಾತದಲ್ಲಿ ಗಾಯಾಳಾಗಿದ್ದ ಬೈಕ್‌ ಸಹ ಸವಾರ ಸಾವು

arrested

BC Road; ಎರಡು ತಂಡಗಳ ಮಧ್ಯೆ ಮಾರಾಮಾರಿ: ಇಬ್ಬರ ಬಂಧನ

1-bhatru

Subrahmanya: ಅರ್ಚಕರ ಮನೆಯಿಂದ ನಗ-ನಗದು ಕಳವು

police crime

Gangolli, Ajekaru; ಮಹಿಳೆಯರಿಗೆ ಜೀವ ಬೆದರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.