ಕಾಂಗ್ರೆಸ್‌ ಬಸ್‌ಯಾತ್ರೆ ಸುಳ್ಳಿನ ಎಕ್ಸ್‌ಪ್ರೆಸ್‌: ಶ್ರೀರಾಮುಲು ಲೇವಡಿ

Team Udayavani, Jan 11, 2023, 9:40 PM IST

ಕಾಂಗ್ರೆಸ್‌ ಬಸ್‌ಯಾತ್ರೆ ಸುಳ್ಳಿನ ಎಕ್ಸ್‌ಪ್ರೆಸ್‌: ಶ್ರೀರಾಮುಲು ಲೇವಡಿ

ರಾಯಚೂರು: ಕಾಂಗ್ರೆಸ್‌ ನಾಯಕರು ಎಂಥ ಯಾತ್ರೆ ಮಾಡಿದರೂ ಪ್ರಯೋಜನವಿಲ್ಲ, ಕಾಂಗ್ರೆಸ್‌ನ ಬಸ್‌ ಯಾತ್ರೆ ಸುಳ್ಳಿನ ಎಕ್ಸ್‌ಪ್ರೆಸ್‌ ಎಂದು ಸಾರಿಗೆ ಸಚಿವ ಶ್ರೀರಾಮುಲು ಲೇವಡಿ ಮಾಡಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ಸಿಗರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಆದರೆ, ಅವರ ಮಾತುಗಳನ್ನು ಜನ ಕೇಳುವುದೇ ಇಲ್ಲ. ಬಸ್‌ ಯಾತ್ರೆ ಮಾತ್ರವಲ್ಲ ಗ್ರಹಗಳನ್ನು ಹಿಡಿದುಕೊಂಡು ಹೋದರೂ ಜನ ಕಾಂಗ್ರೆಸ್‌ ತಿರಸ್ಕರಿಸುತ್ತಾರೆ. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಎಂಎಲ್ಸಿ ಎಚ್‌.ವಿಶ್ವನಾಥ ಕೂಡ ಕಾರಣ. ಅವರು ಚುನಾವಣೆಯಲ್ಲಿ ಸೋತರೂ ಬಿಜೆಪಿ ಎಂಎಲ್ಸಿಯನ್ನಾಗಿ ಮಾಡಿದೆ. ಯಾವುದೋ ಕಾರಣಕ್ಕೆ ಅವರ ಮನಸ್ಸಿಗೆ ನೋವಾಗಿರಬಹುದು. ಮುಖ್ಯಮಂತ್ರಿ ಸೇರಿ ಪಕ್ಷದ ಹಿರಿಯ ನಾಯಕರು ಅವರ ಮನವೊಲಿಸಲು ಯತ್ನಿಸುವುದಾಗಿ ತಿಳಿಸಿದರು.

ಮಾಜಿ ಸಚಿವ ಜನಾರ್ದನ ರೆಡ್ಡಿ ಅವರನ್ನು ನಾನು ಭೇಟಿಯೇ ಮಾಡಿಲ್ಲ. ಅವರ ಜನ್ಮದಿನಕ್ಕೆ ಒಳ್ಳೆಯದಾಗಲಿ. ಬಿಜೆಪಿ ರಾಷ್ಟ್ರೀಯ ಪಕ್ಷವಾಗಿದ್ದು, ಕಲ್ಯಾಣ ರಾಜ್ಯ ಪ್ರಗತಿ ಪಕ್ಷದಿಂದ ಬಿಜೆಪಿಗೆ ಹಿನ್ನಡೆ ಆಗುವುದಿಲ್ಲ. ಆರು ಸಲ ಗೆದ್ದಿರುವ ನನಗೆ ಜಾತಿ ಹೆಸರಲ್ಲಿ ರಾಜಕೀಯ ಮಾಡುವ ಅನಿವಾರ್ಯತೆ ಇಲ್ಲ. ಮುಂದಿನ ಚುನಾವಣೆಯಲ್ಲಿ ಯಾವ ಕ್ಷೇತ್ರದಿಂದ  ಸ್ಪರ್ಧಿಸಬೇಕು ಎಂದು ಇನ್ನೂ ತೀರ್ಮಾನಿಸಿಲ್ಲ.

ಮಾಜಿ ಸಿಎಂ ಸಿದ್ದರಾಮಯ್ಯರಂತೆ ನಾನು ಜನಪ್ರಿಯ ನಾಯಕನಲ್ಲ. ಅವರು ಎಲ್ಲಿ ಬೇಕಾದರೂ ನಿಂತು ಗೆಲ್ಲುತ್ತಾರೆ. ರಾಜ್ಯಕ್ಕೆ ಹೊಸದಾಗಿ 1,800 ಸಾರಿಗೆ ಸಂಸ್ಥೆಯ ಬಸ್‌ಗಳನ್ನು ತರಿಸುತ್ತಿದ್ದು ಈಗಾಗಲೇ ಟೆಂಡರ್‌ ಪ್ರಕ್ರಿಯೆ ಕೂಡ ಮುಗಿದಿದೆ. ಹೊಸ ಬಸ್‌ಗಳನ್ನು ಕಲ್ಯಾಣ ಕರ್ನಾಟಕಕ್ಕೆ 1,200 ಬಸ್‌ಗಳನ್ನು ನೀಡಲಾಗುವುದು ಎಂದರು.

ಟಾಪ್ ನ್ಯೂಸ್

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

Sindhanur: ಲಾರಿ ಪಲ್ಟಿ… ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

8-sirwar

Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

4

Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

3(1

Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ

Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು

Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.