ಈಶ್ವರಪ್ಪ ಬಂಧನಕ್ಕೆ ಕಾಂಗ್ರೆಸ್‌ ಬಿಗಿ ಪಟ್ಟು


Team Udayavani, Apr 21, 2022, 12:53 PM IST

12congress

ರಾಯಚೂರು: ಗುತ್ತಿಗೆದಾರನ ಆತ್ಮಹತ್ಯೆ ಕಾರಣವಾದ ಮಾಜಿ ಸಚಿವ ಕೆ.ಎಸ್‌. ಈಶ್ವರಪ್ಪರನ್ನು ಕೂಡಲೇ ಬಂಧಿಸಬೇಕು, ಶೇ.40 ಕಮಿಷನ್‌ ದಂಧೆ ಕುರಿತು ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಬುಧವಾರ ನಗರದ ಡಾ| ಅಂಬೇಡ್ಕರ್‌ ವೃತ್ತದಲ್ಲಿ ಜಿಲ್ಲಾ ಕಾಂಗ್ರೆಸ್‌ ಸಮಿತಿಯ ನೇತೃತ್ವದಲ್ಲಿ ಬೃಹತ್‌ ಪ್ರತಿಭಟನೆ ನಡೆಸಲಾಯಿತು.

ವೃತ್ತದಲ್ಲಿರುವ ಡಾ| ಅಂಬೇಡ್ಕರ್‌ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಹೋರಾಟ ಆರಂಭಿಸಿದ ಮುಖಂಡರು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಬಳಿಕ ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ ಪ್ರತಿಭಟನಾಕಾರರು, ರಾಜ್ಯದಲ್ಲಿ ಸರ್ಕಾರ ನಡೆಯುತ್ತಿರುವುದೇ 40 ಪರ್ಸೆಂಟ್‌ ಆಧಾರದ ಮೇಲೆ. ಸಣ್ಣ ಕೆಲಸವಾಗಬೇಕಾದರೂ ಕಮಿಶನ್‌ ನೀಡಬೇಕಾದ ಸನ್ನಿವೇಶ ಏರ್ಪಟ್ಟಿದೆ. ಬಿಜೆಪಿ ಸರ್ಕಾರದ ಎಲ್ಲ ಇಲಾಖೆಗಳಲ್ಲಿ ಲಂಚ ಮಾಮೂಲಾಗಿದ್ದು, ಹೇಳುವವರು ಕೇಳುವವರಿಲ್ಲದ ಸ್ಥಿತಿ ಇದೆ ಎಂದು ದೂರಿದರು.

ಈ ಪರ್ಸೆಂಟೇಜ್‌ ಪೆಂಡಭೂತಕ್ಕೆ ಒಬ್ಬ ಗುತ್ತಿಗೆದಾರನ ಜೀವ ಬಲಿಯಾಗಿದೆ. ಪಂಚಾಯತ್‌ ರಾಜ್‌ ಸಚಿವ ಕೆ.ಎಸ್‌. ಈಶ್ವರಪ್ಪನವರೇ ಕಾರಣ ಎಂದು ವಾಟ್ಸ್‌ಆ್ಯಪ್‌ ಸಂದೇಶದಲ್ಲಿ ದಾಖಲಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರೂ ಈವರೆಗೆ ಈಶ್ವರಪ್ಪನವರ ಬಂಧನವಾಗಿಲ್ಲ. ಇಲ್ಲಿನ ಅಕ್ರಮವನ್ನು ವರಿಷ್ಠರಿಗೆ ತಿಳಿಸಿದ್ದೇ ಎಂದು ಸಂತೋಷ ಹೇಳಿಕೊಂಡಿದ್ದು, ಬಿಜೆಪಿ ನಾಯಕರು ಎಲ್ಲ ಗೊತ್ತಿದ್ದು ಮೌನವಾಗಿದ್ದರೇ ಎಂಬ ಅನುಮಾನ ಮೂಡಿದೆ ಎಂದು ದೂರಿದರು.

ಕೆ.ಎಸ್‌. ಈಶ್ವರಪ್ಪ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಪ್ರಕರಣ ದಾಖಲಿಸಿ ಸೂಕ್ತ ಕ್ರಮ ಜರುಗಿಸಬೇಕು. ಅವರ ಜತೆಗೆ ಇತರ ಆರೋಪಿಗಳನ್ನು ಬಂಧಿಸಬೇಕು. ಪ್ರಕರಣದ ತನಿಖೆಯನ್ನು ರಾಜ್ಯ ಹೈಕೋರ್ಟ್‌ನ ಹಾಲಿ ನ್ಯಾ| ಉಸ್ತುವಾರಿಯಲ್ಲಿ ನಡೆಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಆತ್ಮಹತ್ಯೆ ಮಾಡಿಕೊಂಡ ಸಂತೋಷ್‌ ಪಾಟೀಲ್‌ ಕುಟುಂಬಕ್ಕೆ ಒಂದು ಕೋಟಿ ರೂ. ಪರಿಹಾರ ಹಾಗೂ ಅವರ ಪತ್ನಿಗೆ ಸರ್ಕಾರಿ ಉದ್ಯೋಗ ನೀಡಬೇಕು. ಮೃತರು ನಿರ್ವಹಿಸಿರುವ 108 ಕಾಮಗಾರಿಗಳ 4 ಕೋಟಿ ರೂ. ಗಳ ಬಿಲ್‌ ಪಾವತಿಸಬೇಕು. ಕಾರ್ಯಾದೇಶ ಸೇರಿದಂತೆ ಇತರ ಪ್ರಕ್ರಿಯೆ ಮುಗಿಸಲು ಸಂಬಂಧಿಸಿದವರಿಗೆ ನಿರ್ದೇಶನ ನೀಡಬೇಕು. ಈ ಪ್ರಕರಣದ ತಪ್ಪಿತಸ್ಥರಿಗೆ ಶಿಕ್ಷೆಯಾಗುವಂತೆ ಮಾಡಬೇಕು. ಕರ್ನಾಟಕವನ್ನು ಭ್ರಷ್ಟಾಚಾರ ರಹಿತ ರಾಜ್ಯವನ್ನಾಗಿ ರೂಪಿಸಬೇಕು ಎಂದು ಒತ್ತಾಯಿಸಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಜಿಲ್ಲಾಧ್ಯಕ್ಷ ಬಿ.ವಿ. ನಾಯಕ, ಎನ್‌.ಎಸ್‌. ಬೋಸರಾಜು, ಎ.ವಸಂತಕುಮಾರ, ಮಲ್ಲಿಕಾರ್ಜುನ ನಾಗಪ್ಪ, ಹಂಪನಗೌಡ ಬಾದರ್ಲಿ, ಹಂಪಯ್ಯ ನಾಯಕ, ರಾಜ್‌ ಶೇಖ್‌, ಶರಣಪ್ಪ ಮಟ್ಟೂರು, ಬಸವರಾಜ ಪಾಟೀಲ್‌ ಇಟಗಿ, ರುದ್ರಪ್ಪ ಅಂಗಡಿ ಹಾಗೂ ನಿರ್ಮಲಾ ಇದ್ದರು.

ಟಾಪ್ ನ್ಯೂಸ್

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

Sindhanur: ಲಾರಿ ಪಲ್ಟಿ… ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

8-sirwar

Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

1-sq

Squash event: ಭಾರತದ ಅನಾಹತ್‌,ಮಲೇಷ್ಯಾದ ಚಂದರನ್‌ ಚಾಂಪಿಯನ್‌

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.