ಸ್ಪರ್ಧಾ ಜಗತ್ತಿನಲ್ಲಿ ನಿರಂತರ ಅಧ್ಯಯನ ಅಗತ್ಯ
Team Udayavani, Dec 18, 2021, 5:25 PM IST
ಹುಮನಾಬಾದ: ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ನಿರಂತರ ಅಧ್ಯಯನ ನಡೆಸಿದಲ್ಲಿ ಮಾತ್ರ ಇತರರೊಡನೆ ಪೈಪೋಟಿ ನೀಡುವ ಜೊತೆಗೆ ಜೀವನದಲ್ಲಿ ಯಶಸ್ಸು ಗಳಿಸಲು ಸಾಧ್ಯವಾಗುತ್ತದೆ ಎಂದು ಪಟ್ಟಣದ ಹಿರೇಮಠ ಸಂಸ್ಥಾನದ ವೀರ ರೇಣುಕ ಗಂಗಾಧರ ಶಿವಾಚಾರ್ಯರು ಹೇಳಿದರು.
ಪಟ್ಟಣದ ಸರಕಾರಿ ಬಾಲಕರ ಪ್ರೌಢಶಾಲೆಯಲ್ಲಿ ಶುಕ್ರವಾರ ಇನ್ಪೋಸಿಸ್ ಸಹಯೋಗದೊಂದಿಗೆ ಸ್ಥಳೀಯ ಯುವ ಬ್ರಿಗೇಡ್ ಸಂಘಟನೆಯು “ಕೈ ಹಿಡಿದು ನಡೆಸೆನ್ನನು’ ಶೀರ್ಷಿಕೆ ಅಡಿಯಲ್ಲಿ ಏರ್ಪಡಿಸಿದ್ದ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಎಲ್ಲ ವರ್ಗದಲ್ಲಿಯೂ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿದ್ದಾರೆ. ಸಮಾಜದ ಪ್ರತಿಯೊಬ್ಬರು ಅವರನ್ನು ಪ್ರೋತ್ಸಾಹ ನೀಡುವ ಕಾರ್ಯ ಆಗಬೇಕಿದೆ. ಒಳ್ಳೆಯದನ್ನು ಸಾಧಿಸುವ ಛಲ, ಅದಕ್ಕೊಂದು ಗುರಿ ಇಟ್ಟಿಕೊಂಡು ವಿದ್ಯಾರ್ಥಿಗಳು ಗುರುವಿನ ಮಾರ್ಗದರ್ಶನದಲ್ಲಿ ಮುಂದೆ ನಡೆಯಬೇಕು. ಜೀವನದಲ್ಲಿ ನಿರಾಶಾವಾದಿಗಳಾಗದೆ, ಆಶಾವಾದಿಗಳಾಗಿ ನಡೆದರೆ ಅನೇಕ ಅವಕಾಶಗಳು ನಮ್ಮ ಮುಂದೆ ಬರುತ್ತವೆ. ಶೈಕ್ಷಣಿಕ ಕ್ಷೇತ್ರದ ಸಮಗ್ರ ಅಭಿವೃದ್ಧಿಯೇ ದೇಶದ ಎಲ್ಲ ಕ್ಷೇತ್ರದ ಬೆಳವಣಿಗೆಗೆ ಸಹಕಾರಿಯಾಗಿದೆ. ಶಿಕ್ಷಕ ವೃಂದದವರು ಮಕ್ಕಳಿಗೆ ಗುಣಮಟ್ಟ ಶಿಕ್ಷಣದ ಜತೆಯಲ್ಲಿ ಮೌಲ್ಯಭರಿತ ಶಿಕ್ಷಣ ನೀಡುವ ಮೂಲಕ ಪರಿಪೂರ್ಣ ಪ್ರಜೆಗಳನ್ನು ತಯಾರು ಮಾಡಬೇಕು ಎಂದು ಸಲಹೆ ನೀಡಿದರು.
ತಹಶೀಲ್ದಾರ್ ನಾಗಯ್ನಾ ಹಿರೇಮಠ ಮಾತನಾಡಿ, ಶಿಕ್ಷಣ ಕ್ಷೇತ್ರ ಹಾಗೂ ವಿದ್ಯಾರ್ಥಿಗಳ ಸಮಗ್ರ ಅಭಿವೃದ್ಧಿಗೆ ಪೂರಕವಾಗಿ ಇನ್ಫೋಸಿಸ್ ಫೌಂಡೇಶನ್ ಹಾಗೂ ಯುವ ಬ್ರಿಗೇಡ್ ಕೈಗೊಂಡಿರುವ ಸಮಾಜಮುಖೀ ಕಾರ್ಯಕ್ರಮ ಶ್ಲಾಘನಿಯವಾಗಿದೆ. ಸರಕಾರಿ ಶಾಲೆಗಳ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸರಕಾರ ಸಾಕಷ್ಟು ಯೋಜನೆ ಜಾರಿಗೆ ತಂದಿದೆ. ವಿದ್ಯಾರ್ಥಿಗಳು ಸರಕಾರದ ಯೋಜನೆ ಸದುಪಯೋಗ ಪಡೆದು ಉತ್ತಮ ನಾಗರಿಕರಾಗಬೇಕು ಎಂದು ತಿಳಿಸಿದರು.
ಯುವ ಬ್ರಿಗೇಡ್ ವಿಭಾಗೀಯ ಸಂಚಾಲಕ ಲಕ್ಷ್ಮೀಕಾಂತ ಹಿಂದೊಡ್ಡಿ ಮಾತನಾಡಿದರು. ಈ ಸಂದರ್ಭದಲ್ಲಿ ಡಾ| ಗೋವಿಂದ, ಕ್ಷೇತ್ರ ಶಿಕ್ಷಣಾ ಧಿಕಾರಿ ಶಿವಗೊಂಡಪ್ಪ ಸಿದ್ದಪ್ಪಗೋಳ, ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಪಂಡರಿನಾಥ ಹುಗ್ಗಿ, ಸರಕಾರಿ ಬಾಲಕರ ಪ್ರೌಢಶಾಲೆ ಮುಖ್ಯಶಿಕ್ಷಕ ಪರಮೇಶ್ವರ ಜಿ, ಯುವ ಬ್ರಿಗೇಡ್ ಜಿಲ್ಲಾ ಸಂಚಾಲಕ ಪ್ರಶಾಂತ ಸೇರಿಕಾರ, ಸಂಜಯದತ್ತ ಒಡೆಯರ್, ಪರಮೇಶ್ವರ ಸೂರ್ಯವಂಶಿ, ನಾಗೇಶ ಎಸ್, ಮನೋಜ ಓಂಕಾರೆ, ಅನಿಲರೆಡ್ಡಿ, ವಸಂತ ಸಜ್ಜನ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
National Education Policy: ಎನ್‌ಇಪಿ ಜಾರಿ ಗೊಂದಲ ಮಧ್ಯೆ ಶಿಕ್ಷಕರಿಗೆ ತರಬೇತಿ
Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Assam; ಚಹಾರ್ ಜಿಲ್ಲೆ 4 ಗ್ರಾಮ ಬಾಲ್ಯ ವಿವಾಹ ಮುಕ್ತ: ಸಿಎಂ ಹಿಮಾಂತ್
Kushtagi: ವಸತಿ ಶಾಲೆ ಆವರಣ ಗೋಡೆ ಜಿಗಿದು ಕಾಲ್ಕಿತ್ತ 4 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು
Mumbai-Nagpur ಹೆದ್ದಾರಿಯಲ್ಲಿ ಏಕಕಾಲದಲ್ಲಿ 50 ವಾಹನಗಳ ಟಯರ್ ಪಂಕ್ಚರ್
Kottigehara:ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ನೆಲಸಮ,ಕೆಲಸಕ್ಕೆ ಹೋಗಿದ್ದರಿಂದ ಮನೆಮಂದಿ ಪಾರು
TestTeam; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್ ತಂಡಕ್ಕೆ ಭಾರತೀಯ ನಾಯಕ; ರೋಹಿತ್ ಅಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.