ಸಂವಿಧಾನ ದೇಶದ ಪವಿತ್ರ ಗ್ರಂಥ: ನ್ಯಾ| ಪಾಟೀಲ
Team Udayavani, Dec 11, 2018, 12:20 PM IST
ಲಿಂಗಸುಗೂರು: ಸಂವಿಧಾನ ದೇಶದ ಪವಿತ್ರ ಗ್ರಂಥವಾಗಿದೆ ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶ ಸಂದೀಪ ಪಾಟೀಲ ಹೇಳಿದರು. ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ, ಮಾನವ ಹಕ್ಕುಗಳ ರಕ್ಷಣೆ ಮತ್ತು ಭ್ರಷ್ಟಾಚಾರ ವಿರೋಧಿ ಸಂಸ್ಥೆ ತಾಲೂಕು ಘಟಕ ಸಹಯೋಗದಲ್ಲಿ ಸೋಮವಾರ ಪಟ್ಟಣದ ವಿಸಿಬಿ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಮಾನವ ಹಕ್ಕುಗಳ ದಿನಾಚರಣೆ ಕುರಿತ ಕಾನೂನು ಅರಿವು-ನೆರವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸಂವಿಧಾನದಡಿ ಕಾನೂನು ರಚನೆಯಾಗುತ್ತವೆ. ಸಂವಿಧಾನ ವಿರುದ್ಧವಾಗಿ ಕಾನೂನು ರಚನೆ ಮಾಡುವುದು ಅಸಾಧ್ಯದ ಕೆಲಸವಾಗಿದೆ. ಪ್ರತಿಯೊಂದು ಕಾರ್ಯ ಚಟುವಟಿಕೆಗಳು ಸಂವಿಧಾನದಡಿ ನಡೆಯುತ್ತಿವೆ. ದೇಶದ ಗಡಿ ಕಾಯುವ ಸೈನಿಕರು ತಮ್ಮ ಜೀವನವನ್ನು ಮುಡುಪಾಗಿಟ್ಟು ಹೋರಾಡುತ್ತಿರುವುದರಿಂದ ನಾವು ದೇಶದಲ್ಲಿ ಶಾಂತಿಯಿಂದ ಜೀವನ ನಡೆಸಲು ಕಾರಣವಾಗಿದೆ. ಸಮಾಜದ ಸುಧಾರಣೆ ಪ್ರತಿಯೊಬ್ಬರ ಜವಾಬ್ದಾರಿ. ವಿದ್ಯಾರ್ಥಿಗಳು ಒಳ್ಳೆಯ ವಿಚಾರಗಳನ್ನು ಇಟ್ಟುಕೊಳ್ಳಬೇಕು ಎಂದು ಹೇಳಿದರು.
ಸಹಾಯಕ ಆಯುಕ್ತ ಎಂ.ಪಿ.ಮಾರುತಿ ಮಾತನಾಡಿ, ಸಾಧನೆಗೆ ವಿದ್ಯಾರ್ಥಿಗಳು ಪ್ರಯತ್ನ ಪಡಬೇಕು. ಗ್ರಾಮೀಣ ಭಾಗದಲ್ಲಿ ಕಾನೂನು ಅರಿವು ಮೂಡಿಸುವಲ್ಲಿ ವಿದ್ಯಾರ್ಥಿಗಳ ಪಾತ್ರ ಬಹುಮುಖ್ಯ ಎಂದರು.
ವಕೀಲರ ಸಂಘ ಅಧ್ಯಕ್ಷ ಮಹಾಲಿಂಗಪ್ಪ ಪಾಟೀಲ, ಎಪಿಪಿ ವಸಂತ, ತಹಶೀಲ್ದಾರ್ ಚಾಮರಾಜ ಪಾಟೀಲ, ಪ್ರಾಚಾರ್ಯ ಪಿ.ಜಗದೀಶ, ಟಿಎಚ್‌ಒ ರುದ್ರಗೌಡ ಪಾಟೀಲ, ಸಿಡಿಪಿಒ ಪ್ರೇಮಮೂರ್ತಿ, ಎಚ್‌ಆರ್‌ಎಸಿಎಫ್ ಅಧ್ಯಕ್ಷ ಹುಸೇನಬಾಷಾ, ಕಾರ್ಯದರ್ಶಿ ಶೇಖ್ ಅಹ್ಮದ್, ಆಶಿಕ್ ಅಹ್ಮದ್, ಡಾ| ಪದ್ಮರಾಜ ಜೈನ ಸೇರಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ
Raichuru: ಆರ್‌ಟಿಪಿಎಸ್ ಬೂದಿ ಹೊಂಡದ ನೀರು ಕೃಷ್ಣಾ ನದಿಗೆ; ಜನರಲ್ಲಿ ಆತಂಕ
Dhananjay: ಸಿಕ್ಕ ಸಿಕ್ಕಲೆಲ್ಲ ಕೇಳ್ತಿದ್ರಲ್ಲ; ಅದಕ್ಕೆ ಅನೌನ್ಸ್ ಮಾಡಿದೆ: ಡಾಲಿ
MUST WATCH
ಹೊಸ ಸೇರ್ಪಡೆ
Udupi: ಸಿಎನ್‌ಜಿ ಪೂರೈಕೆಯಲ್ಲಿ ಕೊರತೆಯಾಗದಂತೆ ಕ್ರಮ ಕೈಗೊಳ್ಳಿ: ಸಂಸದ ಕೋಟ ಸೂಚನೆ
BGT: ಟೀಂ ಇಂಡಿಯಾಗೆ ಮತ್ತೆ ಆಘಾತ; ವಿರಾಟ್, ರಾಹುಲ್ ಬಳಿಕ ಮತ್ತೊಬ್ಬ ಬ್ಯಾಟರ್ ಗೆ ಗಾಯ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.