ಸೋಂಕಿರುವೆಡೆ ಕಂಟೇನ್ಮೆಂಟ್‌-ಬಫರ್‌ ಝೋನ್‌

Team Udayavani, May 19, 2020, 6:35 AM IST

ಸೋಂಕಿರುವೆಡೆ ಕಂಟೇನ್ಮೆಂಟ್‌-ಬಫರ್‌ ಝೋನ್‌

ರಾಯಚೂರು: ಜಿಲ್ಲೆಯ ಆರು ಜನರಲ್ಲಿ ಕೋವಿಡ್ ಪಾಸಿಟಿವ್‌ ಪ್ರಕರಣ ದೃಢಪಟ್ಟ ಬೆನ್ನಲ್ಲೇ ಅಧಿಕಾರಿಗಳ ತುರ್ತು ಸಭೆ ನಡೆಸಿದ ಜಿಲ್ಲಾಧಿಕಾರಿ ಆರ್‌. ವೆಂಕಟೇಶಕುಮಾರ, ಸೋಂಕಿರುವ ಪ್ರದೇಶಗಳನ್ನು ಕಂಟೇನ್ಮೆಂಟ್‌ ಹಾಗೂ ಬಫರ್‌ ಝೋನ್‌ ಎಂದು ಘೋಷಿಸಿ ಕ್ರಮಕ್ಕೆ ಸೂಚಿಸಿದರು.

ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಸಭೆ ನಡೆಸಿದ ಅವರು, ಕಂಟೇನ್ಮೆಂಟ್‌ ಝೋನ್‌ಗಳಲ್ಲಿ ಜನ ಮನೆಯಿಂದ ಹೊರ ಬಾರದಂತೆ ಕಟ್ಟೆಚ್ಚರ ವಹಿಸಬೇಕು. ಕೋವಿಡ್ ಸೋಂಕು ಹರಡಿರುವುದು ದೃಢಪಟ್ಟ ನಂತರ ಆಯಾ ವಾರ್ಡ್‌ಗಳಲ್ಲಿ ಸೀಲ್‌ಡೌನ್‌ ಮಾಡಬೇಕು. ಸೋಂಕು ಇರುವವರ ಮನೆಯಿಂದ 100 ಮೀಟರ್‌ ದೂರದಲ್ಲಿ ಅವರೊಂದಿಗೆ ಯಾವುದೇ ರೀತಿಯ ಸಂಪರ್ಕ ಹೊಂದದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.

ಸೀಲ್‌ಡೌನ್‌ ಪ್ರದೇಶಗಳ ಜನರ ಮನೆ ಬಾಗಿಲಿಗೆ ಅಗತ್ಯ ವಸ್ತು ಪೂರೈಸಲು ಕ್ರಮ ಕೈಗೊಳ್ಳಬೇಕು. ಅನವಶ್ಯಕ ಓಡಾಟಕ್ಕೆ ಬ್ರೇಕ್‌ ಹಾಕಬೇಕು. ಇನ್ನೂ ಬಫರ್‌ ಝೋನ್‌ ಗಳಲ್ಲಿ ನಗರ ಪ್ರದೇಶದಲ್ಲಿ 5 ಕಿಮೀ ಮತ್ತು ಗ್ರಾಮೀಣ ಪ್ರದೇಶದಲ್ಲಿ 7 ಕಿಮೀ ವ್ಯಾಪ್ತಿಯಲ್ಲಿ ಸಾಮಾಜಿಕ ಅಂತರ ಕಾಪಾಡಬೇಕು. ರಾಯಚೂರು ಮತ್ತು ದೇವದುರ್ಗ ತಾಲೂಕಿಗೆ ಮಹಾರಾಷ್ಟ್ರ ರಾಜ್ಯದಿಂದ ಆಗಮಿಸಿರುವ ವಲಸೆ ಕಾರ್ಮಿಕರನ್ನು ಪತ್ತೆಗೆ ತಂಡ ರಚಿಸಲಾಗುತ್ತದೆ. ಈ ತಂಡದಲ್ಲಿ ಸಹಾಯಕ ಆಯುಕ್ತರು, ತಹಶೀಲ್ದಾರರು ಮತ್ತು ಪಿಎಸ್‌ಐ ಇರಲಿದ್ದಾರೆ ಎಂದು ಹೇಳಿದರು.

ಮಹಾರಾಷ್ಟ್ರದಿಂದ ಬಂದವರನ್ನು ಇರಿಸಿದ ಕ್ವಾರಂಟೈನ್‌ಗಳ ಮೇಲೆ ಹೆಚ್ಚಿನ ನಿಗಾವಹಿಸಬೇಕು. ಆ ಕ್ವಾರಂಟೈನ್‌ ಕೇಂದ್ರಕ್ಕೆ ಔಷಧ ಸಿಂಪಡಿಸಬೇಕು. ಅದರ ಜತೆಗೆ ಎಲ್ಲ ಕ್ವಾರಂಟೈನ್‌ ಕೇಂದ್ರಗಳಿಗೂ ನಿತ್ಯ ಅಗ್ನಿ ಶಾಮಕ ದಳದಿಂದ ಔಷಧ ಸಿಂಪಡಿಸಬೇಕು. ಶೌಚಗೃಹಗಳನ್ನು ಸ್ವಚ್ಛಗೊಳಿಸಬೇಕು. ಜಿಲ್ಲೆಯ ಅಂತರ ರಾಜ್ಯಗಳ ಗಡಿಭಾಗದ ಚೆಕ್‌ಪೋಸ್ಟ್‌ಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಬೇಕು. ಭದ್ರತೆಗೆ ನಿಯೋಜಿಸಿರುವ ಪೊಲೀಸರಿಗೆ ಎನ್‌-95 ಮಾಸ್ಕ್ ಮತ್ತು ಗ್ಲೌಸ್‌ ವಿತರಿಸಬೇಕು ಎಂದು ಡಿಎಚ್‌ಒಗೆ ಸೂಚಿಸಿದರು.

ಎಸ್‌ಪಿ ಡಾ| ಸಿ.ಬಿ. ವೇದಮೂರ್ತಿ, ಜಿಪಂ ಸಿಇಒ ಲಕ್ಷ್ಮೀ ಕಾಂತರೆಡ್ಡಿ ಜಿ., ಎಡಿಸಿ ದುರುಗೇಶ, ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹರಿಬಾಬು, ಸಹಾಯಕ ಆಯುಕ್ತ ಸಂತೋಷ ಕಾಮಗೌಡ, ತಹಶೀಲ್ದಾರ್‌ ಡಾ| ಹಂಪಣ್ಣ, ಡಾ| ಕೆ. ನಾಗರಾಜ, ಡಾ| ವೈ. ಸುರೇಂದ್ರ ಬಾಬು ಇದ್ದರು.

ಟಾಪ್ ನ್ಯೂಸ್

2-karkala

Karkala: ಶಾಲಾ ವಾಹನಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು

Zebra Movie Review: ಜೀಬ್ರಾ ಕ್ರಾಸ್‌ನಲ್ಲಿ ಕಣ್ಣಾ ಮುಚ್ಚಾಲೆ!

Zebra Movie Review: ಜೀಬ್ರಾ ಕ್ರಾಸ್‌ನಲ್ಲಿ ಕಣ್ಣಾ ಮುಚ್ಚಾಲೆ!

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 37,000 ಮತಗಳಿಂದ ಮುನ್ನಡೆ

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 85,000 ಮತಗಳಿಂದ ಮುನ್ನಡೆ

maharstra

Election Results: ಮಹಾರಾಷ್ಟ್ರ, ಝಾರ್ಖಂಡ್‌ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

BYV-yathnal

BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?

Vikram-Naxal-Mud

Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-raichur

Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ

1-wewqewq

Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

ಮಂತ್ರಾಲಯ ಶ್ರೀಗಳಿಂದ ತುಂಗಭದ್ರ ನದಿಯಲ್ಲಿ ದಂಡೋದಕ ಸ್ನಾನ

Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ

5-raichur

Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

2-karkala

Karkala: ಶಾಲಾ ವಾಹನಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು

Zebra Movie Review: ಜೀಬ್ರಾ ಕ್ರಾಸ್‌ನಲ್ಲಿ ಕಣ್ಣಾ ಮುಚ್ಚಾಲೆ!

Zebra Movie Review: ಜೀಬ್ರಾ ಕ್ರಾಸ್‌ನಲ್ಲಿ ಕಣ್ಣಾ ಮುಚ್ಚಾಲೆ!

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 37,000 ಮತಗಳಿಂದ ಮುನ್ನಡೆ

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 85,000 ಮತಗಳಿಂದ ಮುನ್ನಡೆ

maharstra

Election Results: ಮಹಾರಾಷ್ಟ್ರ, ಝಾರ್ಖಂಡ್‌ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.