ಕೋವಿಡ್ ಆರ್ಭಟ ಮುಂದುವರಿಕೆ
Team Udayavani, Jul 19, 2020, 1:18 PM IST
ರಾಯಚೂರು: ಜಿಲ್ಲೆಯಲ್ಲಿ ಶನಿವಾರ 16 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ. ಆ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 964ಕ್ಕೆ ತಲುಪಿದೆ.
ರಾಯಚೂರು ಮತ್ತು ಸಿಂಧನೂರಿನಲ್ಲಿ ವೈರಸ್ ಹರಡುವಿಕೆ ಮುಂದುವರಿದಿದ್ದು, 15 ಪ್ರಕರಣಗಳು ಅಲ್ಲಿಂದಲೇ ದೃಢಪಟ್ಟಿವೆ. ನಗರದಲ್ಲಿ 9 ಪಾಸಿಟಿವ್ ಪ್ರಕರಣದೃಢಪಟ್ಟರೆ, ಆರು ಪ್ರಕರಣ ಸಿಂಧನೂರಿನಲ್ಲಿ ದೃಢಪಟ್ಟಿವೆ. ಒಂದು ಸಿರವಾರ ಪಟ್ಟಣದಲ್ಲಿ ದೃಢಪಟ್ಟಿದೆ. ಅದರಲ್ಲೂ 15 ಪುರುಷರಿಗೆ ಸೋಂಕು ತಗುಲಿದರೆ, ಒಬ್ಬ ಮಹಿಳೆಗೆ ಸೋಂಕು ವಕ್ಕರಿಸಿದೆ. 9 ಪ್ರಕರಣಗಳ ಸಂಪರ್ಕ ಪತ್ತೆ ಹಚ್ಚಲಾಗುತ್ತಿದ್ದರೆ, ಆರು ಪ್ರಕರಣಗಳು ಪ್ರಾಥಮಿಕ ಸಂಪರ್ಕದಿಂದ ಹರಡಿವೆ. ಇನ್ನೊಂದು ಐಎಲ್‌ಐ ಪ್ರಕರಣವಾಗಿದೆ. ಎಲ್ಲರನ್ನು ಒಪೆಕ್‌ನ ಐಸೊಲೇಶನ್ ವಾರ್ಡ್‌ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಮಾದರಿ ಸಂಗ್ರಹಿಸದ ಆರೋಪ: ಮಾಣಿಕ್ ನಗರದ ಮಾಜಿ ಸೈನಿಕರೊಬ್ಬರು ಮೃತಪಟ್ಟಿದ್ದು, ಅವರಿಗೆ ಕೋವಿಡ್ ಪಾಸಿಟಿವ್ ಇದೆ ಎಂಬ ಕಾರಣಕ್ಕಾಗಿ ಶವವನ್ನು ಮನೆಯವರಿಗೆ ಕೊಡದೆ ಶವಸಂಸ್ಕಾರ ಮಾಡಲಾಗಿತ್ತು. ಆದರೆ, ಇವರ ಮನೆಯವರು ಈ ವಿಷಯ ತಿಳಿಯುತ್ತಿದ್ದಂತೆ ಸ್ವ ಇಚ್ಛೆಯಿಂದ ಕ್ವಾರೆಂಟೈನ್‌ಗೆ ಒಳಗಾಗಿದ್ದಾರೆ. ಆದರೂ ಆರೊಗ್ಯ ಇಲಾಖೆ ಸಿಬ್ಬಂದಿ ಈ ಮನೆಯವರ ಮಾದರಿ ಸಂಗ್ರಹಿಸಿಲ್ಲ. ಮನೆಯವರೇ ತಪಾಸಣೆ ಮಾಡುವಂತೆ ಕೇಳುತ್ತಿದ್ದರೂ ಸ್ಪಂದಿಸಿಲ್ಲ ಎಂದು ಕುಟುಂಬ ಸದಸ್ಯರು ದೂರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ
Raichuru: ಆರ್‌ಟಿಪಿಎಸ್ ಬೂದಿ ಹೊಂಡದ ನೀರು ಕೃಷ್ಣಾ ನದಿಗೆ; ಜನರಲ್ಲಿ ಆತಂಕ
Dhananjay: ಸಿಕ್ಕ ಸಿಕ್ಕಲೆಲ್ಲ ಕೇಳ್ತಿದ್ರಲ್ಲ; ಅದಕ್ಕೆ ಅನೌನ್ಸ್ ಮಾಡಿದೆ: ಡಾಲಿ
MUST WATCH
ಹೊಸ ಸೇರ್ಪಡೆ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Re Release: ದರ್ಶನ್ ಮತ್ತೊಂದು ಚಿತ್ರ ಮರು ಬಿಡುಗಡೆ: ರೀರಿಲೀಸ್‌ನತ್ತ ಸಂಗೊಳ್ಳಿ ರಾಯಣ್ಣ
BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್: ಆಸೀಸ್ ಸರಣಿಗೆ ತಂಡ ಸೇರಲಿದ್ದಾರೆ ಶಮಿ
Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.