ರಾಯಚೂರು: ಕೋವಿಡ್‌ ಕೇಂದ್ರ ಸೋಂಕಿತರ ಸಂಜೀವಿನಿ

ಕೋವಿಡ್‌ ಕೇಂದ್ರಗಳಿಗೆ ಸ್ಥಳಾಂತರಿಸುವ ಕೆಲಸ ಶುರುವಾಗಲಿದೆ ಎನ್ನುತ್ತಾರೆ ಅಧಿಕಾರಿಗಳು

Team Udayavani, May 21, 2021, 8:15 PM IST

covid-New

ರಾಯಚೂರು: ಕೊರೊನಾ ಸೋಂಕಿತರ ಚಿಕಿತ್ಸೆಗಾಗಿ ಕಳೆದ ಬಾರಿ ಕೋವಿಡ್‌ ಕೇರ್‌ ಸೆಂಟರ್‌ಗಳಲ್ಲಿ ಸಾವಿರಕ್ಕಿಂತ ಅ ಧಿಕ ಬೆಡ್‌ಗಳ ವ್ಯವಸ್ಥೆಯಾಗಿದ್ದರೆ; ಈ ಬಾರಿ ಜಿಲ್ಲಾಡಳಿತ ಮೂರು ಸಾವಿರಕ್ಕೂ ಅಧಿಕ ಬೆಡ್‌ ಗಳ ವ್ಯವಸ್ಥೆ ಮಾಡಿಕೊಂಡಿದೆ. ಆ ಮೂಲಕ ಬೆಡ್‌ಗಳ ಸಾಮರ್ಥ್ಯವನ್ನು ಮೂರು ಪಟ್ಟು ಹೆಚ್ಚಿಸಿಕೊಂಡಿದೆ.

ಸೋಂಕಿನ ತೀವ್ರತೆ ಕಳೆದ ಬಾರಿಗಿಂತ ಭಾರೀ ಪ್ರಮಾಣದಲ್ಲಿ ಹೆಚ್ಚಾಗಿದೆ. ಜಿಲ್ಲೆಯಲ್ಲಿ 2ನೇ ಅಲೆ ಶುರುವಾಗುತ್ತಿದ್ದಂತೆ ಜಿಲ್ಲಾಡಳಿತ ಕೂಡ ಯುದ್ಧೋಪಾದಿಯಲ್ಲಿ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಒತ್ತು ನೀಡಿದೆ. ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಸಾವು ನೋವಿನ ಸಂಖ್ಯೆ ಕೂಡ ಹೆಚ್ಚಾಗಿದೆ. ಕಳೆದ ವಾರ ಒಂದೇ ದಿನ ಒಂದು ಸಾವಿರಕ್ಕೂ ಅಧಿ ಕ ಪಾಸಿಟಿವ್‌ ಪ್ರಕರಣಗಳು ದಾಖಲಾಗುವ ಮೂಲಕ ಜಿಲ್ಲೆಯನ್ನು ಬೆಚ್ಚಿ ಬೀಳಿಸಿತ್ತು. ಇದರಿಂದ 2ನೇ ಅಲೆಯನ್ನು ಸಮರ್ಥವಾಗಿ ಹಿಮ್ಮೆಟ್ಟಲು ಎಲ್ಲೆಡೆ ಕೋವಿಡ್‌ ಕೇರ್‌ ಸೆಂಟರ್‌ಗಳನ್ನು ಪುನಾರಂಭಿಸಿದ್ದಲ್ಲದೇ, ಬೆಡ್‌ಗಳ ಸಂಖ್ಯೆಯನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ.

ವಸತಿ ನಿಲಯಗಳೇ ಬಳಕೆ: ಕಳೆದ ವರ್ಷ ರಾಯಚೂರು ಸೇರಿದಂತೆ ಎಲ್ಲ ತಾಲೂಕುಗಳಲ್ಲಿ 200 ಬೆಡ್‌ಗಳ ಕೋವಿಡ್‌ ಕೇರ್‌ ಸೆಂಟರ್‌ಗಳನ್ನು ಸಿದ್ಧ ಮಾಡಿಕೊಳ್ಳಲಾಗಿತ್ತು. ತಾಲೂಕು ಕೇಂದ್ರಗಳಲ್ಲಿ 200 ಬೆಡ್‌ಗಳಿದ್ದರೂ ಹೆಚ್ಚಿನ ಜನ ಆಗಮಿಸರಲಿಲ್ಲ. ಕೊರೊನಾ ತೀವ್ರತೆ ಕಡಿಮೆಯಾದಂತೆಲ್ಲ ಅವುಗಳನ್ನು ಕ್ರಮೇಣ ಮುಚ್ಚಲಾಯಿತು. ಜಿಲ್ಲೆಯಲ್ಲಿ ಬಹುತೇಕ ವಸತಿ ನಿಲಯಗಳನ್ನೇ ಕೋವಿಡ್‌ ಕೇರ್‌ ಸೆಂಟರ್‌ ಗಳಿಗೆ ಬಳಿಸಿಕೊಳ್ಳಲಾಗುತ್ತಿದೆ. ಮೊರಾರ್ಜಿ ದೇಸಾಯಿ, ಅಲ್ಪಸಂಖ್ಯಾತರ ವಸತಿ ನಿಲಯಗಳು, ಬಿಸಿಎಂ ಹಾಸ್ಟೆಲ್‌ಗ‌ಳು ಸೇರಿದಂತೆ ವಿವಿಧ ವಸತಿ ನಿಲಯಗಳನ್ನು ಬಳಸಿಕೊಳ್ಳಲಾಗಿದೆ. ಮೊದಲನೇ ಅಲೆ ಸಂಪೂರ್ಣ ಕಡಿಮೆಯಾದಾಗ ಬಹುತೇಕ ವಸತಿ ನಿಲಯಗಳನ್ನು ಮತ್ತೆ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಬಿಟ್ಟು ಕೊಡಲಾಗಿತ್ತು. ಆದರೆ, 2ನೇ ಅಲೆ ಶುರುವಾಗುತ್ತಿದ್ದಂತೆ ಮತ್ತೆ ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸಿ ಕೋವಿಡ್‌ ಕೇರ್‌ ಸೆಂಟರ್‌ಗಳನ್ನಾಗಿ ಪರಿವರ್ತಿಸಲಾಗಿದೆ.

ಎಲ್ಲೆಲ್ಲಿ ಎಷ್ಟೆಷ್ಟು ಬೆಡ್‌?: ರಾಯಚೂರು ಸೇರಿದಂತೆ ಜಿಲ್ಲೆಯಲ್ಲಿ 7 ತಾಲೂಕುಗಳಿದ್ದು, ಈ ಬಾರಿ ಎಲ್ಲ ಕಡೆ ಕೋವಿಡ್‌ ಕೇಂದ್ರ ಆರಂಭಿಸಲಾಗಿದೆ. ರಾಯಚೂರು, ಮಾನ್ವಿ, ಸಿಂಧನೂರು, ಲಿಂಗಸುಗೂರು, ದೇವದುರ್ಗ ಕೇಂದ್ರ ಸ್ಥಾನಗಳಲ್ಲಿ 500 ಬೆಡ್‌ಗಳ ಕೇರ್‌ ಸೆಂಟರ್‌ ತೆರೆಯಲಾಗಿದೆ. ಕಳೆದ ಬಾರಿ ಮಸ್ಕಿ, ಸಿರವಾರದಲ್ಲಿ ಕೋವಿಡ್‌ ಕೇಂದ್ರಗಳನ್ನು ತೆರೆದಿರಲಿಲ್ಲ. ಈ ಬಾರಿ ತಲಾ 100 ಬೆಡ್‌ಗಳ ಕೇಂದ್ರಗಳನ್ನು ಆರಂಭಿಸಲಾಗಿದೆ. ಕೃಷಿ ವಿಶ್ವವಿದ್ಯಾಲಯದ ಮೂರು ವಸತಿ ನಿಲಯಗಳನ್ನು ಯರಮರಸ್‌ ಬಳಿ ಕಳೆದ ಬಾರಿಯಂತೆ ಮತ್ತೆ ಕೋವಿಡ್‌ ಕೇರ್‌ ಸೆಂಟರ್‌ ಆರಂಭಿಸಲಾಗಿದೆ. ಚಂದ್ರಬಂಡಾ ಬಳಿ 250 ಬೆಡ್‌ಗಳ ಕೇಂದ್ರ ಸಿದ್ಧಗೊಂಡಿದ್ದು, ಅಗತ್ಯ ಬಿದ್ದರೆ ಬಳಸಿಕೊಳ್ಳುವುದಾಗಿ ಅಧಿಕಾರಿಗಳು ತಿಳಿಸುತ್ತಾರೆ.

ಗುಣಮುಖರ ಸಂಖ್ಯೆಯಲ್ಲೂ ಹೆಚ್ಚಳ: ಕೊರೊನಾ ಪಾಸಿಟಿವ್‌ ಬಂದ ಮಾತ್ರಕ್ಕೆ ಕಡ್ಡಾಯವಾಗಿ ಆಸ್ಪತ್ರೆಗೆ ದಾಖಲಾಗಬೇಕು ಎಂದೇನಿಲ್ಲ. ಅನುಕೂಲಕರ ವಾತಾವರಣ ಇದ್ದರೆ ಮನೆಯಲ್ಲಿಯೇ ಚಿಕಿತ್ಸೆ ಪಡೆಯಬಹುದು. ಇಲ್ಲವೇ ಕೋವಿಡ್‌ ಕೇರ್‌ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆಯಬಹುದು ಎಂದು ಜಿಲ್ಲಾಡಳಿತ ತಿಳಿಸಿತ್ತು.

ಮೊದಲ ಅಲೆಯಲ್ಲಿ ಜಿಲ್ಲೆಯಲ್ಲಿ 16,565 ಪಾಸಿಟಿವ್‌ ಪ್ರಕರಣಗಳು ದಾಖಲಾಗಿದ್ದರೆ ಅದರಲ್ಲಿ 14,711ಕ್ಕೂ ಅಧಿಕ ಸೋಂಕಿತರು ವಿವಿಧ ಕೋವಿಡ್‌ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆದಿದ್ದರು. ಸಂಪೂರ್ಣ ಗುಣಮುಖರಾಗಿ ಮನೆಗೆ ಹೋಗಿದ್ದರು. ಮೊದಲ ಅಲೆಯಲ್ಲಿ ಜಿಲ್ಲೆಯಲ್ಲಿ ಸೋಂಕಿನಿಂದ 159 ಜನ ಮೃತಪಟ್ಟಿದ್ದರು. 2ನೇ ಅಲೆಯಲ್ಲಿ ಕೇವಲ ಎರಡೇ ತಿಂಗಳಲ್ಲಿ ಪಾಸಿಟಿವ್‌ ಪ್ರಕರಣಗಳ ಸಂಖ್ಯೆ ದುಪ್ಪಟ್ಟಾಗಿದೆ. ಜಿಲ್ಲೆಯಲ್ಲಿ ಈವರೆಗೆ 32,668 ಪಾಸಿಟಿವ್‌ ಪ್ರಕರಣಗಳು ದೃಢಪಟ್ಟಿದ್ದು, 25,519 ಜನ ಸಂಪೂರ್ಣ ಗುಣಮುಖರಾಗಿದ್ದಾರೆ. ಈವರೆಗೆ ಸೋಂಕಿನಿಂದ 227 ಜನ ಸಾವಿಗೀಡಾಗಿದ್ದಾರೆ.

ಸೋಂಕಿತರ ಸಂಪರ್ಕ ಕಡಿತಗೊಳಿಸಲು ಹೋಮ್‌ ಐಸೊಲೇಶನ್‌ಗೆ ಒಳಗಾದವರನ್ನು ಕಡ್ಡಾಯವಾಗಿ ಕೋವಿಡ್‌ ಕೇರ್‌ ಸೆಂಟರ್‌ಗಳಿಗೆ ಸ್ಥಳಾಂತರಿಸಬೇಕು ಎಂದು ಉಸ್ತುವಾರಿ ಸಚಿವರು ಕಟ್ಟುನಿಟ್ಟಾಗಿ ತಿಳಿಸಿದ್ದಾರೆ. ಜಿಲ್ಲೆಯಲ್ಲಿ 6900ಕ್ಕೂ ಅಧಿ ಕ ಸಕ್ರಿಯ ಪ್ರಕರಗಣಳಿದ್ದು, ಅವರಲ್ಲಿ ತೀವ್ರತರ ಸೋಂಕಿನಿಂದ ಬಳಲುವವರನ್ನು ಆಸ್ಪತ್ರೆಗೆ, ರೋಗದ ಲಕ್ಷಣಗಳಿರುವವರನ್ನು ಕೋವಿಡ್‌ ಕೇಂದ್ರಗಳಿಗೆ ಸ್ಥಳಾಂತರಿಸುವ ಕೆಲಸ ಶುರುವಾಗಲಿದೆ ಎನ್ನುತ್ತಾರೆ ಅಧಿಕಾರಿಗಳು

ಸೇವಾ ಭಾರತಿ ಸಹಯೋಗದಲ್ಲಿ ಕೇಂದ್ರ
ಇಲ್ಲಿನ ಕೃಷಿ ವಿಶ್ವವಿದ್ಯಾಲಯದಲ್ಲಿ ಸೇವಾ ಭಾರತಿ ಮತ್ತು ಸ್ವಾಮಿ ವಿವೇಕಾನಂದ ಸಮಗ್ರ ಆರೋಗ್ಯ ಕೇಂದ್ರದ ಸಹಯೋಗದಲ್ಲಿ 160 ಬೆಡ್‌ಗಳ ಕೋವಿಡ್‌ ಕೇರ್‌ ಸೆಂಟರ್‌ ಆರಂಭಿಸಲಾಗಿದೆ. ಇಲ್ಲಿನ ಆದರ್ಶ ಹಾಸ್ಟೆಲ್‌ ಬಿಟ್ಟು ಕೊಡಲಾಗಿದೆ. ಅಲ್ಲಿನ ಸೋಂಕಿತರಿಗೆ ಈ ಸಂಸ್ಥೆಗಳಿಂದಲೇ ಊಟೋಪಚಾರದ ವ್ಯವಸ್ಥೆ ಮಾಡಲಾಗುತ್ತಿದೆ. ಚಿಕಿತ್ಸೆಗೆ ಬೇಕಾದ ಮಾತೆ, ಔಷಧಗಳನ್ನು ಜಿಲ್ಲಾಡಳಿತ ಪೂರೈಸುತ್ತಿದೆ.

ಕೊರೊನಾ 2ನೇ ಅಲೆಯನ್ನು ಜಿಲ್ಲಾಡಳಿತ ಸಮರ್ಥವಾಗಿ ಎದುರಿಸುತ್ತಿದೆ. ಜಿಲ್ಲೆಯಲ್ಲಿ ಈ ಬಾರಿ ಕೋವಿಡ್‌ ಕೇಂದ್ರಗಳಲ್ಲಿ ಬೆಡ್‌ಗಳ ಸಂಖ್ಯೆ 3 ಸಾವಿರಕ್ಕೆ ಹೆಚ್ಚಿಸಲಾಗಿದೆ. ಮಸ್ಕಿ, ಸಿರವಾರದಲ್ಲೂ ಆರಂಭಿಸಲಾಗಿದೆ. ಇನ್ನೂ ಎಲ್ಲ ತಾಲೂಕುಗಳಲ್ಲಿ 50 ಬೆಡ್‌ಗಳ ಕೋವಿಡ್‌ ಆಸ್ಪತ್ರೆ ಚಾಲನೆಯಲ್ಲಿವೆ. ಹಟ್ಟಿಯಲ್ಲಿ 100 ಆಕ್ಸಿಜನ್‌ ಬೆಡ್‌ ಗಳ ಆಸ್ಪತ್ರೆ ಆರಂಭಿಸಲಾಗಿದೆ. ರಿಮ್ಸ್‌ನಲ್ಲಿ 20 ಬೆಡ್‌ಗಳ ಟ್ರಯಜ್‌ ಆರಂಭಿಸಲಾಗಿದೆ. ಆರ್‌ಟಿಪಿಎಸ್‌ನಿಂದಲೂ ಆಸ್ಪತ್ರೆ ಆರಂಭಿಸಲು ಸೂಚನೆ ನೀಡಲಾಗಿದೆ. ಕೋವಿಡ್‌ ಕೇರ್‌ ಸೆಂಟರ್‌ಗಳಿಗೆ ಸೋಂಕಿತರನ್ನು ಸ್ಥಳಾಂತರಿಸುವ ಕೆಲಸ ಶುರುವಾಗಿದೆ. ಅಲ್ಲಿ ಅವರಿಗೆ ಊಟ, ಮನರಂಜನೆಗೆ ಬೇಕಾದ ಎಲ್ಲ ವ್ಯವಸ್ಥೆ ಮಾಡಲಾಗಿದೆ.
ಆರ್‌.ವೆಂಕಟೇಶ ಕುಮಾರ್‌, ಜಿಲ್ಲಾಧಿಕಾರಿ

*ಸಿದ್ಧಯ್ಯಸ್ವಾಮಿ ಕುಕುನೂರು

ಟಾಪ್ ನ್ಯೂಸ್

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-raichur

Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ

1-wewqewq

Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

ಮಂತ್ರಾಲಯ ಶ್ರೀಗಳಿಂದ ತುಂಗಭದ್ರ ನದಿಯಲ್ಲಿ ದಂಡೋದಕ ಸ್ನಾನ

Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ

5-raichur

Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

1-wqewe

Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.