ಟ್ರಾಫಿಕ್ ಪೇದೆಗೂ ಕೋವಿಡ್ ಪಾಸಿಟಿವ್
Team Udayavani, Jun 28, 2020, 9:20 AM IST
ರಾಯಚೂರು: ಆರೋಗ್ಯ ಇಲಾಖೆ ಸಿಬ್ಬಂದಿಗೆ ಸೋಂಕು ತಗುಲಿದ ಬೆನ್ನಲ್ಲೇ ನಗರದ ಟ್ರಾಫಿಕ್ ಠಾಣೆ ಮುಖ್ಯ ಪೇದೆಗೆ ಕೋವಿಡ್ ಪಾಸಿಟಿವ್ ತಗುಲಿದ್ದು, ಶನಿವಾರ ಠಾಣೆಯನ್ನು ಸೀಲ್‌ಡೌನ್ ಮಾಡಲಾಗಿದೆ.
ಕೃಷಿ ವಿವಿಯಲ್ಲಿನ ಕ್ವಾರಂಟೈನ್ ಕೇಂದ್ರದ ಕರ್ತವ್ಯಕ್ಕೆ ನಿಯೋಜನೆ ಗೊಂಡಿದ್ದು, ಅಲ್ಲಿ ಸೋಂಕು ತಗುಲಿರಬಹುದೇ ಎಂದು ಅಂದಾಜಿಸಲಾಗಿದೆ. ಕಳೆದ ಕೆಲ ದಿನಗಳಿಂದ ಅನಾರೋಗ್ಯ ನಿಮಿತ್ತ ರಜೆ ತೆರಳಿದ್ದ ಮುಖ್ಯ ಪೇದೆ ಕೋವಿಡ್ ಪರೀಕ್ಷೆಗೆ ಒಳಪಟ್ಟಾಗ ಪಾಸಿಟಿವ್ ಇರುವುದು ದೃಢಪಟ್ಟಿದೆ ಎನ್ನಲಾಗುತ್ತಿದೆ. ಸೋಂಕಿತರನ್ನು ಈಗಾಗಲೇ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಠಾಣೆಯನ್ನು ಶನಿವಾರ ಸಂಪೂರ್ಣ ಸ್ಯಾನಿಟೈಸ್ ಮಾಡುವ ಮೂಲಕ 48 ಗಂಟೆ ಮುಚ್ಚಲಾಗಿದೆ.
ಇನ್ನು ಇವರ ಜತೆ ಕೆಲಸ ಮಾಡಿದ ಎಂಟು ಜನ ಸಿಬ್ಬಂದಿಗೂ ಸೋಂಕು ಹರಡಿರುವ ಶಂಕೆ ಇದ್ದು, ಅವರ ಗಂಟಲಿನ ದ್ರವ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸುವ ಸಾಧ್ಯತೆಗಳಿವೆ. ಅಲ್ಲದೇ, ಅವರನ್ನು ಸದ್ಯಕ್ಕೆ ಹೋಮ್ ಕ್ವಾರಂಟೈನ್ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಪೊಲೀಸರ ಜನಸಂಪರ್ಕ: ಕೋವಿಡ್ ಸೋಂಕು ತಗುಲಿದ ಮುಖ್ಯಪೇದೆ ಕಳೆದ ಮೂರು ದಿನದಿಂದ ರಜೆ ಮೇಲಿದ್ದರು ಎನ್ನಲಾಗುತ್ತಿದೆ. ಆದರೆ, ಅದಕ್ಕೂ ಮುನ್ನ ಅವರಿಗೆ ಸೋಂಕು ತಗುಲಿದ್ದು, ಅದು ಉಳಿದ ಸಿಬ್ಬಂದಿಗೂ ಹರಡಿದ್ದರೆ ಸಮುದಾಯಕ್ಕೂ ವಿಸ್ತರಿಸಿದ ಭೀತಿ ಎದುರಾಗಿದೆ. ಕಳೆದೆರಡು ದಿನಗಳಿಂದ ಟ್ರಾಫಿಕ್ ಪೊಲೀಸರು ಸಾಕಷ್ಟು ವಾಹನಗಳನ್ನು ತಡೆದು ಮಾಸ್ಕ್ ಇಲ್ಲದಕ್ಕೆ ದಂಡ ವಿಧಿಸಿದ್ದಾರೆ. ಇದರಿಂದ ಜನರಲ್ಲೂ ಆತಂಕ ಶುರುವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ
Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು
Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.