ರಂಗಮಂದಿರದಲ್ಲಿ ದನಕರುಗಳ ಡ್ರಾಮಾ!

•ಸಾಹಿತ್ಯಿಕ-ಸಾಂಸ್ಕೃತಿಕ ಚಟುವಟಿಕೆ ತಾಣವಾಗಬೇಕಿದ್ದ ಸ್ಥಳದಲ್ಲಿ ಕಸದ ರಾಶಿ •2015ರಲ್ಲೇ ಕಾಮಗಾರಿ ಆರಂಭ

Team Udayavani, May 27, 2019, 9:53 AM IST

rc-tdy-1..

ಸಿಂಧನೂರು: ನಗರದ ಕೋಟೆ ಬಡಾವಣೆ ರಸ್ತೆಯಲ್ಲಿ ನನೆಗುದಿಗೆ ಬಿದ್ದ ರಂಗಮಂದಿರ ಕಟ್ಟಡದ ಸುತ್ತ ಎಸೆದಿರುವ ತ್ಯಾಜ್ಯ ಮತ್ತು ದನಕರುಗಳು.

ಸಿಂಧನೂರು: ನಗರದ ಕೋಟೆ ಬಡಾವಣೆ ರಸ್ತೆಯಲ್ಲಿ ಕೈಗೊಂಡ ರಂಗಮಂದಿರ ನಿರ್ಮಾಣ ಕಾಮಗಾರಿ ನನೆಗುದಿಗೆ ಬಿದ್ದಿದ್ದು,ಸಾಹಿತ್ಯಿಕ, ಸಾಂಸ್ಕೃತಿಕ ಚಟುವಟಿಕೆಯ ತಾಣವಾಗಬೇಕಿದ್ದ ಕಟ್ಟಡ ಇದೀಗ ತಾಜ್ಯ, ದನಕರುಗಳು, ಹಂದಿಗಳ ತಾಣವಾಗಿ ಮಾರ್ಪಟ್ಟಿದೆ.

2011ರಲ್ಲಿ ಆಗ ಶಾಸಕರಾಗಿದ್ದ ನಾಡಗೌಡರ ಅವಧಿಯಲ್ಲೇ ರಂಗಮಂದಿರ ನಿರ್ಮಾಣ ಕಾಮಗಾರಿ ಆರಂಭವಾಗಿದ್ದು, ಬುನಾದಿ ಹಾಕಿ ಕೈಬಿಡಲಾಗಿತ್ತು. ಕಲಾಸಕ್ತರು ಜಿಲ್ಲಾ ಮತ್ತು ತಾಲೂಕು ಆಡಳಿತ ಗಮನ ಸೆಳೆದಾಗ ಪಿಲ್ಲರ್‌ ಹಾಕಲಾಯಿತು. ಪ್ರತಿ ಬಾರಿ ಸಾರ್ವಜನಿಕರು, ಸಂಘಟನೆಗಳಿಂದ ಒತ್ತಡ ಬಂದಾಗ ಮಾತ್ರ ಕಾಮಗಾರಿ ಕೈಗೊಳ್ಳುವ ಸಂಬಂಧಿಸಿದ ಅಧಿಕಾರಿಗಳು, ಜಿಲ್ಲಾಡಳಿತ ನಂತರ ಇತ್ತ ತಲೆ ಹಾಕಿಲ್ಲ. ಹೀಗಾಗಿ ರಂಗಮಂದಿರ ಕಾಮಗಾರಿ ಅರ್ಧಕ್ಕೆ ನಿಂತಿದೆ. ರಂಗಮಂದಿರ ಶೀಘ್ರ ಪೂರ್ಣಗೊಂಡು ಸಾಂಸ್ಕೃತಿಕ ಚಟುವಟಿಕೆಗೆ ವೇದಿಕೆ ಆಗಬಹುದೆಂಬ ನಗರದ ಜನತೆ, ಕಲಾಸಕ್ತರ ನಿರೀಕ್ಷೆ ಹುಸಿಯಾಗಿದೆ. ಜಿಲ್ಲಾಡಳಿತ ಮತ್ತು ನಗರಸಭೆ ಕುಂಭಕರ್ಣ ನಿದ್ರೆಗೆ ಜಾರಿದೆ.

ಅನುದಾನ ಎಷ್ಟು: ವೆಂಕಟರಾವ್‌ ನಾಡಗೌಡ ಅವರು ಶಾಸಕರಾಗಿದ್ದಾಗ 83 ಕೋಟಿ ರೂ. ವೆಚ್ಚದ ರಂಗಮಂದಿರ ನಿರ್ಮಾಣಕ್ಕೆ ಮಂಜೂರಾತಿ ದೊರೆತಿದೆ. ಅದರಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದ 10 ಲಕ್ಷ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ 20 ಲಕ್ಷ, ರಾಜ್ಯಸಭಾ ಸದಸ್ಯರಾದ ರಾಜೀವ್‌ ಚಂದ್ರಶೇಖರ ಮತ್ತು ವಿಜಯ್‌ ಮಲ್ಯ ಅವರ ಅನುದಾನದಿಂದ ತಲಾ 10 ಲಕ್ಷ, ವಿಧಾನ ಪರಿಷತ್‌ ಸದಸ್ಯ ಕೃಷ್ಣಪ್ಪ ಅವರ ಅನುದಾನದಿಂದ 6 ಲಕ್ಷ ಹಾಗೂ ನಗರಸಭೆಯ ಅನುದಾನದಿಂದ 30 ಲಕ್ಷ ಸೇರಿದಂತೆ ಒಟ್ಟು 83 ಲಕ್ಷ ರೂ. ಬಿಡುಗಡೆಯಾಗಿದೆ. ಇದರಲ್ಲಿ 50 ಲಕ್ಷದಷ್ಟು ಮಾತ್ರ ಕೆಲಸ ಆಗಿದೆ. ಕಾಮಗಾರಿ ಹೊಣೆಯನ್ನು ನಿರ್ಮಿತಿ ಕೇಂದ್ರಕ್ಕೆ ವಹಿಸಲಾಗಿತ್ತು. ಹಣ ದುರ್ಬಳಕೆ ಪ್ರಕರಣಗಳ ಸುಳಿಗೆ ಸಿಲುಕಿದ ನಿರ್ಮಿತಿ ಕೇಂದ್ರದ ಅಧಿಕಾರಿಗಳು ಸಿಬಿಐ ತನಿಖೆಗೆ ಎದುರಿಸಬೇಕಾಗಿ ಬಂದ ಹಿನ್ನೆಲೆಯಲ್ಲಿ ರಂಗಮಂದಿರ ಕಾಮಗಾರಿಗೆ ಅರ್ಧಕ್ಕೆ ನಿಂತಿದ್ದು ಮೇಲೇಳುತ್ತಲೇ ಇಲ್ಲ. ಈ ಕುರಿತು 3 ಬಾರಿ ಜಿಲ್ಲಾಧಿಕಾರಿಗಳಿಗೆ ಹಾಗೂ ತಾಲೂಕು ಆಡಳಿತದ ಗಮನಕ್ಕೆ ತಂದರೂ ಚೂರುಪಾರು ಕೆಲಸ ಮಾಡಿದ್ದು ಬಿಟ್ಟರೆ ನಂತರ ಹೇಳಿಕೊಳ್ಳುವಂತಹ ಕೆಲಸ ಆಗಿಲ್ಲ. ಇದು ಸಾರ್ವಜನಿಕರು, ಕಲಾಸಕ್ತರ ಆಕ್ರೋಶಕ್ಕೆ ಕಾರಣವಾಗಿದೆ.

ತಾಜ್ಯ ಎಸೆಯುವ ತಾಣ: ರಂಗಮಂದಿರ ನಿರ್ಮಾಣ ಕಾಮಗಾರಿ ಅರ್ಧಕ್ಕೆ ನಿಂತಿದ್ದರಿಂದ ಸುತ್ತಲಿನ ಅಂಗಡಿಕಾರರು, ನಿವಾಸಿಗಳು ಈ ಜಾಗದಲ್ಲಿ ತ್ಯಾಜ್ಯ ಎಸೆಯುತ್ತಿದ್ದಾರೆ. ದನಕರುಗಳು, ಹಂದಿ-ನಾಯಿಗಳು ಇಲ್ಲಿಯೇ ಹೊರಳಾಡುತ್ತಿವೆ. ಮಳೆ ಬಂದರೆ ಈ ಜಾಗೆ ಕೊಳಚೆ ಪ್ರದೇಶದಂತಾಗುತ್ತದೆ. ದುರ್ನಾತ ಹರಡುತ್ತಿದೆ. ಕೆಲವರು ಇಲ್ಲಿಯೇ ಮೂತ್ರ ವಿಸರ್ಜಿಸುತ್ತಾರೆ. ನಗರದ ಸಾಂಸ್ಕೃತಿಕ ಚಟುವಟಿಕೆಗೆ ವೇದಿಕೆ ಆಗಬೇಕಿದ್ದ ಕಟ್ಟಡವಿಂದು ಅನಾಥವಾಗಿ ನಿಂತಿದೆ.

ಹೋರಾಟ ಸ್ತಬ್ದ: ತಾಲೂಕು, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಕೆಲ ಪದಾಧಿಕಾರಿಗಳು ಸೇರಿ ಸಮಾನ ಮನಸ್ಕರು ಈ ಹಿಂದೆ ರಂಗಮಂದಿರ ಕಾಮಗಾರಿ ವಿಳಂಬ ಖಂಡಿಸಿ ಧ್ವನಿ ಎತ್ತಿದ್ದರು. ತುರುಸಿನ ಹೋರಾಟ ಕೂಡ ನಡೆಸಿದ್ದರು. ಕೆಲ ದಿನಗಳಿಂದ ಅವರೂ ಸಹ ಮೌನಕ್ಕೆ ಶರಣಾಗಿದ್ದು, ಹೀಗಾಗಿ ಪರ್ಮೆನೆಂಟಾಗಿ ರಂಗಮಂದಿರ ಈಗ ಜಾನುವಾರುಗಳ ಡ್ರಾಮಾ ಮಂದಿರವಾಗಿ ಮಾರ್ಪಟ್ಟಿದೆ ಎನ್ನುವುದು ಕೆಲವರ ಅಭಿಪ್ರಾಯ.

•ಚಂದ್ರಶೇಖರ ಯರದಿಹಾಳ

ಟಾಪ್ ನ್ಯೂಸ್

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾವು: ಪ್ರಾಣಿಗಳಿಗೆ ಕ್ವಾರಂಟೈನ್‌

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್‌

1

540 ಅಡಿ ಆಳದ ಬೋರ್​ವೆಲ್​ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ಮಧ್ಯಾಹ್ನ ದಿನಾಂಕ ನಿಗದಿ

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

Bangla-immigrtnst

ಆಪರೇಷನ್‌ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichuru-Rims

Raichuru: ರಿಮ್ಸ್‌ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವು; 3 ತಿಂಗಳಿನಲ್ಲಿ 12 ಮಂದಿ ಬಲಿ

ಮುಂದಿನ ಅವಧಿಗೆ ನಾನೇ ಸಿಎಂ ಅಭ್ಯರ್ಥಿ: ಸತೀಶ್ ಜಾರಕಿಹೊಳಿ

Karnataka Politics: ಮುಂದಿನ ಅವಧಿಗೆ ‘ನಾನೇ ಸಿಎಂ ಅಭ್ಯರ್ಥಿ’: ಸತೀಶ್ ಜಾರಕಿಹೊಳಿ

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

Raichur: ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಬರಿಮಲೆಗೆ ಹೊರಟ ಮುಸ್ಲಿಂ ವ್ಯಕ್ತಿ

Raichur: ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಬರಿಮಲೆಗೆ ಹೊರಟ ಮುಸ್ಲಿಂ ವ್ಯಕ್ತಿ

Raichuru-hospi

ರಾಯಚೂರಲ್ಲಿ ಮತ್ತೋರ್ವ ಬಾಣಂತಿ, ಹಸುಗೂಸು ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾವು: ಪ್ರಾಣಿಗಳಿಗೆ ಕ್ವಾರಂಟೈನ್‌

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್‌

1

540 ಅಡಿ ಆಳದ ಬೋರ್​ವೆಲ್​ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ಮಧ್ಯಾಹ್ನ ದಿನಾಂಕ ನಿಗದಿ

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.