ಹಳ್ಳಿಗಳಲ್ಲೂ ಸಾಂಸ್ಕೃತಿಕ ಕಲೆ ಪಸರಿಸಲಿ: ಶ್ರೀ

ಕೃಷಿ ನಿಂತರೆ ಯಾರಿಗೂ ಊಟ ಸಿಗುವುದಿಲ್ಲ ಎಂಬ ಸತ್ಯ ಎಲ್ಲರೂ ಅರಿಯಬೇಕು

Team Udayavani, Mar 3, 2021, 6:30 PM IST

ಹಳ್ಳಿಗಳಲ್ಲೂ ಸಾಂಸ್ಕೃತಿಕ ಕಲೆ ಪಸರಿಸಲಿ: ಶ್ರೀ

ರಾಯಚೂರು: ಸಾಂಸ್ಕೃತಿಕ ಕಾರ್ಯಕ್ರಮಗಳು ಕೇವಲ ನಗರಗಳಿಗೆ ಸೀಮಿತಗೊಳ್ಳದೆ ಹಳ್ಳಿಗಳಿಗೂ ಪಸರಿಸಬೇಕು ಎಂದು ಕಿಲ್ಲೆ ಬೃಹನ್ಮಠದ ಶ್ರೀ ಶಾಂತಮಲ್ಲ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ಮಿಟ್ಟಿಮಲ್ಕಾಪುರದ ಆರೂಢ ಜ್ಯೋತಿ ಶಾಂತಾಶ್ರಮದಲ್ಲಿ ರಾಯಚೂರಿನ ನಾದಲೋಕ ಕಲಾ ಬಳಗದಿಂದ ಮಂಗಳವಾರ ಆಯೋಜಿಸಿದ್ದ ಗಾನಸಿಂಚನ ಕಾರ್ಯಕ್ರಮದಲ್ಲಿ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿ, ಪಂ.ಪುಟ್ಟರಾಜ ಗವಾಯಿಗಳ ಆಶ್ರಮದಲ್ಲಿ ಸಂಗೀತಾಭ್ಯಾಸ ಮಾಡಿರುವ ರಾಘವೇಂದ್ರ ಆಶಾಪೂರ, ಈಗ ನೂರಾರು ಜನರಿಗೆ ಸಂಗೀತ ತರಬೇತಿ ನೀಡುತ್ತಿರುವುದು ಒಳ್ಳೆಯ ಕೆಲಸ ಎಂದರು.

ಶಾಂತಾಶ್ರಮದ ಶ್ರೀ ನಿಜಾನಂದ ಸ್ವಾಮೀಜಿ ಮಾತನಾಡಿ, ಗುರುವಿಗೆ ಶರಣಾಗದೇ ಜ್ಞಾನಾರ್ಜನೆ ಆಗುವುದಿಲ್ಲ. ರಾಯಚೂರಿನಲ್ಲಿ ಸಾಕಷ್ಟು ಸಂಗೀತ ವಿದ್ವಾಂಸರಿದ್ದಾರೆ. ಹಿಂದೆಯೂ ಇದ್ದರು. ದೇಶ, ವಿದೇಶಗಳಲ್ಲಿ ರಾಯಚೂರಿಗೆ ಒಳ್ಳೆಯ ಹೆಸರು ತಂದಿದ್ದಾರೆ. ಆದರೆ, ಜಿಲ್ಲೆಯಲ್ಲಿ ಸಂಗೀತ ಕೊಡುಗೆ ನೀಡಲಾಗಿಲ್ಲ. ರಾಘವೇಂದ್ರ ಆಶಾಪೂರ ಹೊರ ಜಿಲ್ಲೆಗಳಿಗೆ ಹೋಗಬಹುದಾದರೂ ಇಲ್ಲೇ ಇದ್ದುಕೊಂಡು ಮಕ್ಕಳಿಗೆ ಸಂಗೀತ ಕಲಿಸುತ್ತಿರುವುದು
ಒಳ್ಳೆಯ ಕಾರ್ಯ ಎಂದರು.

ನಿವೃತ್ತ ಸೈನಿಕ ವಿಜಯಾನಂದ ರಾಗಲಪರ್ವಿ ಮಾತನಾಡಿ, ರೈತರು ದೇಶದ ಬೆನ್ನೆಲುಬು ಎಂದು ಹೊಗಳುತ್ತಾರೆ. ವಾಸ್ತವದಲ್ಲಿ ರೈತರಿಗೆ ವಧು ಕೊಡಲು ಹಿಂದೇಟು ಹಾಕುವಂತಾಗಿದೆ. ಕೃಷಿ ನಿಂತರೆ ಯಾರಿಗೂ ಊಟ ಸಿಗುವುದಿಲ್ಲ ಎಂಬ ಸತ್ಯ ಎಲ್ಲರೂ ಅರಿಯಬೇಕು ಎಂದರು. ಖಾರಾಬದಿನ್ನಿಯ ದೊಡ್ಡಬಸಯ್ಯ ಶಾಸ್ತ್ರಿ ವಿಶೇಷ ಉಪನ್ಯಾಸ ನೀಡಿದರು.

ಪತ್ರಕರ್ತ ನಾಗರಾಜ ಚಿನಗುಂಡಿ ಮಾತನಾಡಿದರು. ಮಿಟ್ಟಿ ಮಲ್ಕಾಪುರ ಗ್ರಾಪಂ ಅಧ್ಯಕ್ಷೆ ಲಕ್ಷಮ್ಮ ಹೊಸ ಮಲಿಯಾಬಾದ್‌ ಕಾರ್ಯಕ್ರಮ ಉದ್ಘಾಟಿಸಿದರು. ನಾದಲೋಕ ಕಲಾಬಳಗದ ಅಧ್ಯಕ್ಷ ರಾಘವೇಂದ್ರ ಆಶಾಪೂರ ನಿರೂಪಿಸಿದರು. ಕಾರ್ಯಕ್ರಮದ ಬಳಿಕ ವಿವಿಧ ಸಂಗೀತ ಗಾಯನ ನಡೆದವು. ವಿ. ತನುಶ್ರೀ ಗೌಡರ್‌ ನೃತ್ಯ ಪ್ರದರ್ಶಿಸಿದರು. ವೆಂಕಟೇಶ ಕುರ್ಡಿ ಮಂಗಳವಾದ್ಯ ನುಡಿಸಿದರು.

ಅನಿಲಕುಮಾರ್‌ ಜೆ. ಮರ್ಚೆಡ್‌ ಹಿಂದೂಸ್ತಾನಿ ಸಂಗೀತ ಗಾಯನ ಮಾಡಿದರು. ರೇಖಾ ಗೌಡರ ವಚನ ಗಾಯನ, ಪಾರ್ವತಿ ಹಿರೇಮಠ ಚೇಗುಂಟಾ ಸುಗಮ ಸಂಗೀತ, ಅನ್ನಪೂರ್ಣೇಶ್ವರಿ ಮಂಜರ್ಲಾ, ಪವಿತ್ರ ಹಿರೇಮಠ ಅವರು ಭಕ್ತಿಗೀತೆ, ಸರ್ವಮಂಗಳಾ ಎಚ್‌., ರೇಣುಕಾ ಚೇಗುಂಟಾ ಜಾನಪದ ಗಾಯನ ಮಾಡಿದರು. ಎಂ. ತಿಮ್ಮಪ್ಪ ಅರೋಲಿ ಅವರಿಂದ ತತ್ವಪದ, ಭುವನ ಸಿ. ಹೊಸಪೇಟೆ ಅವರಿಂದ ದಾಸವಾಣಿ ನಡೆಯಿತು. ಬಸವಕೇಂದ್ರ ಸಂಗೀತ
ಬಳಗದಿಂದ ಸಮೂಹ ಗಾಯನ ನಡೆಯಿತು.

ಟಾಪ್ ನ್ಯೂಸ್

Bangladeshದಲ್ಲಿ ಇಸ್ಕಾನ್‌ ನಿಷೇಧಿಸಬೇಕು: ಹೈಕೋರ್ಟ್‌ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!

Bangladeshದಲ್ಲಿ ಇಸ್ಕಾನ್‌ ನಿಷೇಧಿಸಬೇಕು: ಹೈಕೋರ್ಟ್‌ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!

Viduthalai Part 2 Trailer: ದಟ್ಟ ಕಾಡಿನಲ್ಲಿ ಸದ್ದು ಮಾಡುವ ಬಂದೂಕು – ದಮನಿತರ ಬದುಕು..

Viduthalai Part 2 Trailer: ದಟ್ಟ ಕಾಡಿನಲ್ಲಿ ಸದ್ದು ಮಾಡುವ ಬಂದೂಕು – ದಮನಿತರ ಬದುಕು..

1-lH

Panchamasali;ಈಗಲೂ ಮೀಸಲಾತಿ ಹೋರಾಟ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್

Ola Gig Electric Scooter: ಕೇವಲ 40 ಸಾವಿರ ರೂಪಾಯಿಗೆ ನೂತನ ಶ್ರೇಣಿಯ ಓಲಾ ಸ್ಕೂಟರ್!

Ola Gig Electric Scooter: ಕೇವಲ 40 ಸಾವಿರ ರೂಪಾಯಿಗೆ ನೂತನ ಶ್ರೇಣಿಯ ಓಲಾ ಸ್ಕೂಟರ್!

4-uv-fusion

Childhood Times: ಕಳೆದು ಹೋದ ಸಮಯ

Ekanath Shindhe

Maharashtra;ಏಕನಾಥ್ ಶಿಂಧೆ ಡಿಸಿಎಂ ಹುದ್ದೆ ಸ್ವೀಕರಿಸುವುದಿಲ್ಲ ಎಂದ ಶಿವಸೇನೆ!

Israel ಮತ್ತು ಲೆಬನಾನ್ ನಡುವೆ ಕದನ ವಿರಾಮ ಒಪ್ಪಂದ:‌ ಅಮೆರಿಕ ಮಧ್ಯಸ್ಥಿಕೆಗೆ ಹಸಿರು ನಿಶಾನೆ

Israel ಮತ್ತು ಲೆಬನಾನ್ ನಡುವೆ ಕದನ ವಿರಾಮ ಒಪ್ಪಂದ:‌ ಅಮೆರಿಕ ಮಧ್ಯಸ್ಥಿಕೆಗೆ ಹಸಿರು ನಿಶಾನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಯಚೂರು: ರೈತರ ನಿದ್ದೆಗೆಡಿಸಿದ ಬೆಳೆದು ನಿಂತ “ಬಿಳಿ ಬಂಗಾರ’ ಹತ್ತಿ

3-raichur

Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ

1-wewqewq

Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

ಮಂತ್ರಾಲಯ ಶ್ರೀಗಳಿಂದ ತುಂಗಭದ್ರ ನದಿಯಲ್ಲಿ ದಂಡೋದಕ ಸ್ನಾನ

Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Bangladeshದಲ್ಲಿ ಇಸ್ಕಾನ್‌ ನಿಷೇಧಿಸಬೇಕು: ಹೈಕೋರ್ಟ್‌ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!

Bangladeshದಲ್ಲಿ ಇಸ್ಕಾನ್‌ ನಿಷೇಧಿಸಬೇಕು: ಹೈಕೋರ್ಟ್‌ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!

7-sirsi

Monkey disease: ಶೀಘ್ರ ಶಿರಸಿಗೆ‌ ಮಂಗನ ಕಾಯಿಲೆ ತಪಾಸಣಾ ಲ್ಯಾಬ್: ಭೀಮಣ್ಣ

Viduthalai Part 2 Trailer: ದಟ್ಟ ಕಾಡಿನಲ್ಲಿ ಸದ್ದು ಮಾಡುವ ಬಂದೂಕು – ದಮನಿತರ ಬದುಕು..

Viduthalai Part 2 Trailer: ದಟ್ಟ ಕಾಡಿನಲ್ಲಿ ಸದ್ದು ಮಾಡುವ ಬಂದೂಕು – ದಮನಿತರ ಬದುಕು..

5

Ullal: ಬಾವಿ, ಬೋರ್‌ವೆಲ್‌ನಲ್ಲಿ ತೈಲಮಿಶ್ರಿತ ನೀರು; ಸಮಸ್ಯೆ ಇರುವ ಮನೆಗಳಿಗೆ ಪೈಪ್‌ಲೈನ್‌

1-lH

Panchamasali;ಈಗಲೂ ಮೀಸಲಾತಿ ಹೋರಾಟ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.