ದರ್ವೇಶ್ ಫಕೀರ್ ಅಲೆಮಾರಿ ಸಮುದಾಯಕ್ಕೆ ಸೌಲಭ್ಯ ನೀಡಿ
Team Udayavani, Jun 1, 2022, 5:22 PM IST
ರಾಯಚೂರು: ದರ್ವೇಶ್ ಫಕೀರ್ ಅಲೆಮಾರಿ ಸಮುದಾಯಗಳಿಗೆ ಅಗತ್ಯ ಸೌಲಭ್ಯ ಕಲ್ಪಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ರಾಜ್ಯ ದರ್ವೇಶ್ (ಫಕೀರ್) ಅಲೆಮಾರಿಗಳ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಮಂಗಳವಾರ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.
ನಗರದ ಮುಖ್ಯ ರಸ್ತೆ ಮೂಲಕ ಡಿಸಿ ಕಚೇರಿಗೆ ಆಗಮಿಸಿದ ಸಮಿತಿ ಸದಸ್ಯರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಅನೇಕ ವರ್ಷಗಳಿಂದ ದರ್ವೇಶ ಅಲೆಮಾರಿ ಸಮುದಾಯಗಳು ಯಾವೊಂದು ಸೌಲಭ್ಯಗಳಿಲ್ಲದೇ ಕನಿಷ್ಟ ಜೀವನ ನಡೆಸುತ್ತಿವೆ. ಅನೇಕ ಬಾರಿ ಸಂಬಂಧಿಸಿದ ಇಲಾಖೆಗಳಿಗೆ, ಸರ್ಕಾರಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಈ ನಿಟ್ಟಿನಲ್ಲಿ ಸರ್ಕಾರವು ಸಮಾಜಕ್ಕೆ ಅಗತ್ಯ ಸೌಲಭ್ಯ ಕಲ್ಪಿಸಬೇಕು ಎಂದರು.
ಸಮಾಜಕ್ಕೆ ಸಮುದಾಯ ಭವನ ನಿರ್ಮಿಸಬೇಕು. ಖಾಲಿ ನಿವೇಶನಗಳ ಹಾಗೂ ವಸತಿ ಸೌಕರ್ಯ ಕಲ್ಪಿಸಬೇಕು. ಸಾಲ ಸೌಲಭ್ಯಗಳನ್ನು ನೀಡಬೇಕು. ವಿಶೇಷ ವರ್ಗದ ಯೋಜನೆಯಡಿ ಜಮೀನು ಮಂಜೂರು ಮಾಡಬೇಕು. ಸಭೆ-ಸಮಾರಂಭಗಳಿಗಾಗಿ ಶಾದಿಮಹಲ್‌ಗಳನ್ನು ನಿರ್ಮಿಸಿಕೊಡಬೇಕು. ಸಮುದಾಯದ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡುವುದು ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿದರು.
ಸಮಿತಿ ಜಿಲ್ಲಾಧ್ಯಕ್ಷ ಮಹ್ಮದ್ ಹುಸೇನ್, ಸಮಾಜದ ಮುಖಂಡರಾದ ಮಹ್ಮದ್ ಅಲಿ ಮಟಮಾರಿ, ಅಮಾಲ್ ಸಾಬ್, ಮೌಲಾಸಾಬ್, ಮಹೆಬೂಬ್ ಸಾಬ್, ಫಯಾಜ್ ಅಲಿ, ಶಾಲಂ ಸಾಬ್, ಫಕ್ರುದ್ದೀನ್, ಎಂ.ಡಿ. ಅಲಿ ಸೇರಿ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ
Raichuru: ಆರ್‌ಟಿಪಿಎಸ್ ಬೂದಿ ಹೊಂಡದ ನೀರು ಕೃಷ್ಣಾ ನದಿಗೆ; ಜನರಲ್ಲಿ ಆತಂಕ
Dhananjay: ಸಿಕ್ಕ ಸಿಕ್ಕಲೆಲ್ಲ ಕೇಳ್ತಿದ್ರಲ್ಲ; ಅದಕ್ಕೆ ಅನೌನ್ಸ್ ಮಾಡಿದೆ: ಡಾಲಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.