ಶೌಚಗೃಹ ಸಿಬ್ಬಂದಿಯಿಂದ ಹಗಲು ದರೋಡೆ
Team Udayavani, Dec 9, 2021, 2:12 PM IST
ರಾಯಚೂರು: ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಇರುವ ಸಾರ್ವಜನಿಕ ಶೌಚಾಲಯದ ಸಿಬ್ಬಂದಿ ಜನರಿಂದ ಹಗಲು ದರೋಡೆ ಮಾಡುತ್ತಿದ್ದು, ಅದಕ್ಕೆ ಕಡಿವಾಣ ಹಾಕುವಂತೆ ಒತ್ತಾಯಿಸಿ ಕರ್ನಾಟಕ ರಾಷ್ಟ್ರ ಪಕ್ಷ ಸಮಿತಿ ಪಕ್ಷ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿತು.
ಸರ್ಕಾರದ ಆದೇಶದ ಪ್ರಕಾರ ನಗರ ಶೌಚಾಲಯದಲ್ಲಿ ಕೇವಲ 3 ರೂ. ಮಾತ್ರ ಪಡೆಯಬೇಕು. ಆದರೆ, ಇಲ್ಲಿ ಅಕ್ರಮವಾಗಿ 10 ರೂ. ಪಡೆಯುತ್ತಿದ್ದು, ಜನರಿಂದ ಸುಲಿಗೆ ಮಾಡಲಾಗುತ್ತಿದೆ. ಗ್ರಾಮೀಣ ಭಾಗದಿಂದ, ಬೇರೆ ಜಿಲ್ಲೆಗಳಿಗೆ ಹೋಗುವ ನೂರಾರು ಜನ ನಿತ್ಯ ನಿಲ್ದಾಣಕ್ಕೆ ಬಂದು ಹೋಗುತ್ತಾರೆ. ಅದರಲ್ಲೂ ಬಡವರಿಗೆ ಅನುಕೂಲವಾಗಲಿ ಎಂಬ ಕಾರಣಕ್ಕೆ ಇಲ್ಲಿ ಶೌಚಗೃಹ ವ್ಯವಸ್ಥೆ ಕಲ್ಪಿಸಿದರೆ ಅನುಕೂಲವಾಗಲಿದೆ ಎಂದರು.
ಎಲ್ಲಿಯೂ ದರ ಪಟ್ಟಿಯನ್ನು ಕೂಡ ಅಳವಡಿಸಿಲ್ಲ. ಸಿಬ್ಬಂದಿ ಮಾಸ್ಕ್ ಧರಿಸದೆ, ನಿತ್ಯದ ವ್ಯವಹಾರಗಳಲ್ಲಿ ಕನ್ನಡವನ್ನು ಕಲಿಯದೆ ಸಾರ್ವಜನಿಕರಿಗೆ ತೊಂದರೆ ಉಂಟು ಮಾಡುವ ಕೆಲಸ ಮಾಡುತ್ತಿದ್ದಾರೆ. ಇದರ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು. ಶೌಚಗೃಹ ನಿರ್ವಹಣೆ ಹೊತ್ತ ಸಂಸ್ಥೆ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ನಿರೂಪ್ ಕೆ. ಗೋಮರ್ಸಿ, ಗ್ರಾಮೀಣ ಯುವ ಘಟಕದ ಅಧ್ಯಕ್ಷ ಹನುಮಂತ, ಪರಸಪ್ಪ ಸೇರಿ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ
Mandya: ಬಹುಮಾನ ಗೆದ್ದ ಹಳ್ಳಿಕಾರ್ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!
Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ
Udupi; ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಡಿ.1 ರಂದು ದೀಪೋತ್ಸವ
ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.