ಮಧ್ಯಾಹ್ನ 2ರ ವರೆಗೆ ವಹಿವಾಟು ನಡೆಸಲು ನಿರ್ಧಾರ
Team Udayavani, Jul 7, 2020, 11:23 AM IST
ಸಾಂದರ್ಭಿಕ ಚಿತ್ರ
ಸಿಂಧನೂರು: ತಾಲೂಕಿನಲ್ಲಿ ಕಳೆದ 10ದಿನಗಳಿಂದ ಕೋವಿಡ್ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನಗರದ ವಿವಿಧ ಅಂಗಡಿಗಳ ವ್ಯಾಪಾರಸ್ಥರು ತಮ್ಮ ಅಂಗಡಿ ಮುಂಗಟ್ಟುಗಳನ್ನು ಮಂಗಳವಾರದಿಂದ ಸ್ವ ಇಚ್ಚೆಯಿಂದ ಬಂದ್ ಮಾಡಲು ನಿರ್ಧಾರಿಸುವುದಾಗಿ ತಿಳಿಸಿದ್ದಾರೆ.
ನಗರದ ಹೊರ ವಲಯದ ಕಮ್ಮವಾರಿ ಭವನದಲ್ಲಿ ಶಾಸಕ ವೆಂಕಟರಾವ್ ನಾಡಗೌಡರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿವಿಧ ವ್ಯಾಪಾರಸ್ಥರು ಹಾಗೂ ವರ್ತಕರ ಸಭೆಯಲ್ಲಿ ಒಮ್ಮತದ ನಿರ್ಣಯ ತೆಗೆದುಕೊಳ್ಳಲಾಯಿತು. ಈ ವೇಳೆ ಮಾತನಾಡಿದ ವರ್ತಕರ ಸಂಘದ ತಾಲೂಕು ಅಧ್ಯಕ್ಷ ಮಲ್ಲನಗೌಡ ಕಾನಿಹಾಳ, ಕೋವಿಡ್ ವೈರಸ್ ತಡೆಗಟ್ಟಬೇಕಾದರೆ ಎಲ್ಲ ವ್ಯಾಪಾರಸ್ಥರ ನಿರ್ಣಯ ಅವಶ್ಯಕವಾಗಿದೆ ಎಂದು ಹೇಳಿದರು.
ಗೊಬ್ಬರ ಅಂಗಡಿಗಳ ಮಾಲೀಕರ ಸಂಘದ ಅಧ್ಯಕ್ಷ ಎನ್. ಭೀಮನಗೌಡ ಗೊರೇಬಾಳ ಮಾತನಾಡಿ, ಎಲ್ಲ ರೈತರ ಸಹಕಾರಕ್ಕಾಗಿ ಮಧ್ಯಾಹ್ನ 2:00ರ ವರೆಗೆ ಎಲ್ಲ ಗೊಬ್ಬರ ಅಂಗಡಿ ತೆಗೆಯಲಾಗಿರುತ್ತದೆ. ಈ ಸಮಯದಲ್ಲಿ ರೈತರು ತಮಗೆ ಅವಶ್ಯಕವಾಗಿರುವ ಗೊಬ್ಬರ ಖರೀದಿಸಿ ವ್ಯಾಪಸ್ಥರೊಂದಿಗೆ ಸಹಕರಿಸಬೇಕು ಎಂದು ಮನವಿ ಮಾಡಿದರು. ಶಾಸಕ ವೆಂಕಟರಾವ್ ನಾಡಗೌಡ ಮಾತನಾಡಿ, ದಿನದಿಂದ ದಿನಕ್ಕೆ ಕೋವಿಡ್ ಪೀಡಿತರ ಸಂಖ್ಯೆ ತಾಲೂಕಿನಲ್ಲಿ ಹೆಚ್ಚುತ್ತಿದೆ. ಆದ್ದರಿಂದ ಎಲ್ಲ ವ್ಯಾಪಾರಸ್ಥರು ತೆಗೆದುಕೊಂಡಿರುವ ನಿರ್ಧಾರ ಉತ್ತಮವಾಗಿದೆ. ತಾಲೂಕು ಮಟ್ಟದ ಅಧಿಕಾರಿಗಳಿಗೆ ಮುಂಜಾಗ್ರತೆ ವಹಿಸಲು ಈಗಾಗಲೇ ತಿಳಿಸಲಾಗಿದೆ. ನಗರ ಪ್ರದೇಶದಲ್ಲಿ ಆರೋಗ್ಯ ಇಲಾಖೆಯಿಂದ ರ್‍ಯಾಂಡಮ್ ಟೆಸ್ಟಿಂಗ್ ಪ್ರಾರಂಭಿಸಲಾಗಿದೆ. ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಪ್ರತಿಯೊಬ್ಬರು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಹಾಗೂ ಕಡ್ಡಾಯವಾಗಿ ಮಾಸ್ಕ್ಧರಿಸಬೇಕು ಇಲ್ಲವಾದರೆ. ಅಂತವರ ಮೇಲೆ ನಗರಸಭೆ ಹಾಗೂ ಪೊಲೀಸ್ ಇಲಾಖೆಯಿಂದ ದಂಡ ವಿಧಸಬೇಕಾಗುತ್ತದೆ. ಹಾಗಾಗಿ ಸಾರ್ವಜನಿಕರು ಎಚ್ಚರಿಕೆಯಿಂದ ಜೀವನ ನಡೆಸಬೇಕು ಎಂದು ಹೇಳಿದರು.
ಹೋಂ ಕ್ವಾರಂಟೈನ್‌ಲ್ಲಿದ್ದವರು ಯಾರು ಹೊರಗಡೆ ತಿರುಗಾಡ ಬಾರದು. ಅಂತವರ ಮೇಲೆ ನಿಗಾ ವಹಿಸಲು ತಾಲೂಕು ಮಟ್ಟದಲ್ಲಿ ಒಂದು ತಂಡ ರಚಿಸಲಾಗಿದೆ. ಇನ್ನು ಮುಂದೆ ಯಾರಾದರೂ ಹೊರಗಡೆ ಬಂದರೆ ಅಂತವರ ಮೇಲೆ ಪ್ರಕರಣ ದಾಖಲಿಸಲು ಸೂಚಿಸಲಾಗಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.