ಕಾರ್ಮಿಕರ ಮನೆ ಬಾಗಿಲಿಗೆ ಸೌಲಭ್ಯ ತಲುಪಿಸಿ
165 ಕೋಟಿ ರೂ. ಅನುದಾನ ಬಿಡುಗಡೆ; ಅರ್ಜಿ ಸಲ್ಲಿಕೆ ಅವಧಿ ಆ.15ರವರೆಗೆ ವಿಸ್ತರಣೆ: ಶಿವರಾಮ್ ಹೆಬ್ಟಾರ್
Team Udayavani, Jul 31, 2020, 7:15 AM IST
ರಾಯಚೂರು: ನಗರದ ಇಎಸ್‌ಐ ಆಸ್ಪತ್ರೆಗೆ ಕಾರ್ಮಿಕ ಸಚಿವ ಶಿವರಾಮ್ ಹೆಬ್ಟಾರ್ ಭೇಟಿ ನೀಡಿದರು.
ರಾಯಚೂರು: ಕೋವಿಡ್ ಸಂಕಷ್ಟದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಜಾರಿಗೊಳಿಸಿದ ಯೋಜನೆಗಳನ್ನು ಕಾರ್ಮಿಕರ ಮನೆ ಬಾಗಿಲಿಗೆ ತಲುಪಿಸಲು ಇಲಾಖೆ ಅಧಿಕಾರಿಗಳು ಒತ್ತು ನೀಡಬೇಕು ಎಂದು ಕಾರ್ಮಿಕ ಹಾಗೂ ಸಕ್ಕರೆ ಸಚಿವ ಶಿವರಾಮ್ ಹೆಬ್ಟಾರ್ ಸೂಚಿಸಿದರು. ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಕಾರ್ಮಿಕ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಲಾಕ್‌ಡೌನ್ ವೇಳೆ ಅಸಂಘಟಿತ ಕಾರ್ಮಿಕರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಗುರಿಯಾಗಿದ್ದರು. ಅಗಸರು, ಕ್ಷೌರಿಕರಿಗೆ ಒಂದು ಬಾರಿ ಐದು ಸಾವಿರ ರೂ.
ಪರಿಹಾರ ನೀಡಲು ನಿರ್ಧರಿಸಲಾಯಿತು. ಇದಕ್ಕಾಗಿ 165 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದು, ಈಗಾಗಲೇ ರಾಜ್ಯದಲ್ಲಿ 48,500 ಜನ ಫಲಾನುಭವಿಗಳಿಗೆ ಕೋಟ್ಯಂತರ ರೂ. ಪ್ರೋತ್ಸಾಹಧನ ನೀಡಲಾಗಿದೆ. 2.25 ಲಕ್ಷ ಕ್ಷೌರಿಕರು ಹಾಗೂ 70 ಸಾವಿರ ಅಗಸರಿಗೆ ಪರಿಹಾರ ನೀಡುವ ಉದ್ದೇಶ ಹೊಂದಲಾಗಿದೆ ಎಂದರು.
ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕ್ಷೌರಿಕ ಕೆಲಸ ಮಾಡುತ್ತಿರುವವರನ್ನು ಗುರುತಿಸಿ ಆಯಾ ಪಿಡಿಒ ಅಧಿ ಕಾರಿಗಳು ದೃಢೀಕರಣ ಪತ್ರ ನೀಡಬೇಕು. ತಂತ್ರಾಂಶದಲ್ಲಿ ಅರ್ಜಿಗಳು ಬೇಗನೇ ಅಪ್‌ಲೋಡ್ ಆಗದ ಕಾರಣ ಅರ್ಜಿ ಸಲ್ಲಿಕೆ ಅವಧಿ ಆ.15ರವರೆಗೆ ವಿಸ್ತರಿಸಲಾಗಿದೆ ಎಂದರು.
ಸಾಕಷ್ಟು ಔಷಧ ಲಭ್ಯವಿದೆ. ವರ್ಷಕ್ಕೆ ಐದೂವರೆ ಕೋಟಿ ರೂ. ಔಷಧವನ್ನು ದಾಸ್ತಾನು ಮಾಡ ಲಾಗುತ್ತಿದೆ. ಜಿಲ್ಲೆ ಹಿಂದುಳಿದ ಪ್ರದೇಶವಾಗಿದ್ದು, ಇಎಸ್‌ಐ ಆಸ್ಪತ್ರೆಯ ಎಲ್ಲ ವೈದ್ಯರನ್ನು ಭರ್ತಿ ಮಾಡಲಾಗಿದೆ. ಆದರೆ, ದಿನಕ್ಕೆ 25 ರಿಂದ 30 ರೋಗಿಗಳು ಮಾತ್ರ ಚಿಕಿತ್ಸೆಗೆ ಬರುತ್ತಿದ್ದಾರೆ. ಇಎಸ್‌ಐ ಕಾರ್ಡ್ ಪಡೆದವರೊಂದಿಗೆ ಬಡ ರೋಗಿಗಳು ಅಲ್ಲಿ ಚಿಕಿತ್ಸೆ ಪಡೆಯಬಹುದು. ಈ ಬಗ್ಗೆ ಅಲ್ಲಿಯ ವೈದ್ಯರಿಗೆ ಕಟ್ಟುನಿಟ್ಟಿನ ಸೂಚನೆ ನೀಡುವಂತೆ ಜಿಲ್ಲಾ ಧಿಕಾರಿಗೆ ನಿರ್ದೇಶನ ನೀಡಿದರು.
ಬಾಯ್ಲರ್ ಹಾಗೂ ಕಾರ್ಖಾನೆಗಳಲ್ಲಿ ಕೆಲವೊಮ್ಮೆ ಅವಘಡಗಳು ಸಂಭವಿಸದಾಗ ಮಾನವೀಯ ದೃಷ್ಟಿಯಿಂದ ಕೂಡಲೇ ನೆರವು ಕಲ್ಪಿಸುವಂತೆ ಸೂಚಿಸಿದರು. ಕೋವಿಡ್ ಹಿನ್ನೆಲೆಯಲ್ಲಿ ಕಾರ್ಖಾನೆಗಳನ್ನು ಕಡ್ಡಾಯವಾಗಿ ತೆರೆಯಲೇಬೇಕು ಎನ್ನುವ ಒತ್ತಡ ಹಾಕಬಾರದು. ಕಾರ್ಮಿಕ ಇಲಾಖೆ ಹಾಗೂ ಕಾರ್ಖಾನೆಗಳ ಮಾಲೀಕರು ಕಾರ್ಮಿಕರಿಗೆ ಸೇತುವೆ ಇದ್ದಹಾಗೆ. ಅವರಿಗೆ
ಕಿರುಕುಳ ಆಗದಂತೆ ನೋಡಿಕೊಳ್ಳಿ ಎಂದರು.
ಈ ವೇಳೆ ಜಿಲ್ಲಾ ಮಟ್ಟದ ಅಧಿಕಾರಿಗಳಿದ್ದರು. ಅದಕ್ಕೂ ಮುನ್ನ ಸಚಿವರು ಇಎಸ್‌ಐ ಆಸ್ಪತ್ರೆಗೆ ಭೇಟಿ ನೀಡಿ ಅಲ್ಲಿನ ವಸ್ತುಸ್ಥಿತಿ ಪರಿಶೀಲಿಸಿದರು. ಸಭೆಯ ನಂತರದಲ್ಲಿ ವಿವಿಧ ಫಲಾನುಭವಿಗಳಿಗೆ ಕಾರ್ಮಿಕ ಇಲಾಖೆ ವತಿಯಿಂದ ಬಾಂಡ್‌ಗಳು ಹಾಗೂ ಚೆಕ್‌ಗಳನ್ನು ವಿತರಿಸಲಾಯಿತು.
ಇನ್ನೂ ಮೂರು ವರ್ಷ ಸಿಎಂ ಬದಲಾವಣೆ ಇಲ್ಲ
ರಾಯಚೂರು: ಮುಖ್ಯಮಂತ್ರಿ ಬದಲಾವಣೆ ಕೇವಲ ಊಹಾಪೋಹ. ಮೂರು ವರ್ಷಗಳ ಕಾಲ ಸಿಎಂ ಬದಲಾವಣೆ ಇಲ್ಲವೇ ಇಲ್ಲ ಎಂದು ಕಾರ್ಮಿಕ ಸಚಿವ ಶಿವರಾಮ್ ಹೆಬ್ಟಾರ ಸ್ಪಷ್ಟಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಬದಲಾವಣೆ ಪ್ರಶ್ನೆ ಎಲ್ಲೂ ಉದ್ಭವವಾಗಿಲ್ಲ. ಸಚಿವ ಸಂಪುಟದ ವಿಸ್ತರಣೆ ಬಿಎಸ್‌ವೈ ಪರಮಾಧಿಕಾರ. ಯಾವಾಗ
ಮಾಡಬೇಕು ಎಂಬುದು ಕೂಡ ಅವರ ವಿವೇಚನೆಗೆ ಬಿಟ್ಟ ವಿಚಾರ. ಹೈಕಮಾಂಡ್ ಮತ್ತು ಸಿಎಂ ಈ ಕುರಿತು ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುತ್ತಾರೆ. ಪಕ್ಷ ಕೂಡ ಇದನ್ನು ನಿಭಾಯಿಸಲು ಸಮರ್ಥವಾಗಿದೆ. ಮುಖ್ಯಮಂತ್ರಿಗಳ ನಿರ್ಧಾರಕ್ಕೆ ಪಕ್ಷದ ಸಂಪೂರ್ಣ ಸಹಕಾರವಿದೆ. ಎಚ್.ವಿಶ್ವನಾಥ ಅವರಿಗೆ ಎಂಎಲ್‌ಸಿ ಸ್ಥಾನ ನೀಡುವ ವಿಚಾರದ ಬಗ್ಗೆ ಸಿಎಂಗೆ ಎಲ್ಲರೂ ಮನವಿ ಮಾಡಿದ್ದೇವು. ಅದರಂತೆ ಅವರು ಕೊಟ್ಟ ಮಾತಿನಂತೆ ನಡೆದುಕೊಂಡಿದ್ದಾರೆ. ಸಚಿವ ಸ್ಥಾನ ನೀಡುವುದು ಸಿಎಂಗೆ ಬಿಟ್ಟ ವಿಚಾರ. ಆದರೆ, ಸೂಕ್ತ ಸಂದರ್ಭದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳುವ ಶಕ್ತಿ ಮುಖ್ಯಮಂತ್ರಿಗಳಿಗಿದೆ ಎಂದರು.
ಡಿಸಿ ತರಾಟೆಗೆ
ಸಚಿವರು ಡಿಸಿ ಕಚೇರಿ ಸಭಾಂಗಣಕ್ಕೆ ಆಗಮಿಸಿದಾಗ ಅಲ್ಲಿ ಡಿಸಿ ಇಲ್ಲದ್ದನ್ನು ಗಮನಿಸಿದ ಸಚಿವ ಶಿವರಾಮ್ ಹೆಬ್ಟಾರ್ ಗರಂ ಆದರು. ನಾವು ನೂರಾರು ಕಿಮೀ ಯಾಕೆ ಬರಬೇಕು. ಎಲ್ಲಿ ಜಿಲ್ಲಾ ಧಿಕಾರಿ ಬರಲು ಹೇಳಿ ಎಂದು ಖಡಕ್ ಆಗಿಯೇ ಸೂಚಿಸಿದರು. ಇದರಿಂದ ಸಭೆಗೆ ಡಿಸಿ ಸೇರಿದಂತೆ ಇತರೆ ಅ ಧಿಕಾರಿಗಳು ದೌಡಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ
Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು
Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
MUST WATCH
ಹೊಸ ಸೇರ್ಪಡೆ
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.