ವಸತಿ ನಿಲಯಗಳಲ್ಲಿ ಸೌಲಭ್ಯ ಕಲ್ಪಿಸಲು ಆಗ್ರಹ
Team Udayavani, Jan 25, 2019, 10:47 AM IST
ರಾಯಚೂರು: ರಾಜ್ಯದ ಸರ್ಕಾರಿ ವಸತಿ ನಿಲಯಗಳಲ್ಲಿ ಕನಿಷ್ಠ ಸೌಲಭ್ಯಗಳನ್ನು ಕಲ್ಪಿಸುವ ಮೂಲಕ ವಿದ್ಯಾರ್ಥಿಗಳಿಗೆ ಉತ್ತಮ ವಾತಾವರಣ ಒದಗಿಸಲು ಆಗ್ರಹಿಸಿ ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ವಿವಿಧ ಶಾಲಾ-ಕಾಲೇಜು ವಿದ್ಯಾರ್ಥಿಗಳು ಗುರುವಾರ ಪ್ರತಿಭಟನೆ ನಡೆಸಿದರು. ನಗರದ ಪ್ರಥಮ ದರ್ಜೆ ಕಾಲೇಜಿನಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ನಂತರ ಜಿಲ್ಲಾಧಿಕಾರಿ ಮೂಲಕ ಸಿಎಂಗೆ ಮನವಿ ಸಲ್ಲಿಸಿದರು.
ರಾಜ್ಯದ ಬಹುತೇಕ ಸರ್ಕಾರಿ ಹಾಸ್ಟೆಲ್‌ಗಳು ಸೌಲಭ್ಯ ವಂಚಿತಗೊಂಡಿವೆ. ಕನಿಷ್ಠ ಸೌಲಭ್ಯಗಳಾದ ಕುಡಿಯುವ ನೀರು, ಸ್ನಾನಗೃಹ, ಶೌಚಾಲಯಗಳಿಗೂ ಸಮಸ್ಯೆ ಇದೆ. ತೀರ ಶೋಚನೀಯ ಸ್ಥಿತಿಯಲ್ಲಿ ವಿದ್ಯಾರ್ಥಿಗಳು ಕಾಲದೂಡುವಂತಾಗಿದೆ. ವಸತಿ ನಿಲಯಗಳಿಗೆ ಬರುವವರು ಬಹುತೇಕರು ಬಡ ವಿದ್ಯಾರ್ಥಿಗಳೇ ಆಗಿದ್ದು, ಅಂಥವರಿಗೆ ಸೌಲಭ್ಯ ಕಲ್ಪಿಸದೆ ಸರ್ಕಾರ ಶೋಷಿಸುತ್ತಿದೆ ಎಂದು ದೂರಿದರು.
ಪರಿಶಿಷ್ಟ ಜಾತಿ, ಪಂಗಡ, ಒಬಿಸಿ ಹಾಗೂ ಅಲ್ಪಸಂಖ್ಯಾತ ವಿದ್ಯಾರ್ಥಿ ವಸತಿ ನಿಲಯಗಳಿಗೆ ಸ್ವಂತ ಕಟ್ಟಡಗಳೇ ಇಲ್ಲದ್ದರಿಂದ ಬಾಡಿಗೆ ಕಟ್ಟಡಗಳಲ್ಲಿ ನಡೆಸಲಾಗುತ್ತಿದೆ. ದುಬಾರಿ ಹಣ ನೀಡಿದರೂ ಸೂಕ್ತ ಕಟ್ಟಡಗಳಿರುವುದಿಲ್ಲ ಎಂದು ದೂರಿದರು.
ಕೂಡಲೇ ವಸತಿ ನಿಲಯಗಳಿಗೆ ಸ್ವಂತ ಕಟ್ಟಡಗಳನ್ನು ನಿರ್ಮಿಸಬೇಕು. ವಿದ್ಯಾರ್ಥಿಗಳ ಆಹಾರ ವೆಚ್ಚವನ್ನು 1400 ರೂ.ದಿಂದ 2000 ರೂ.ಗೆ ಹೆಚ್ಚಿಸಬೇಕು. ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಪ್ರಸಕ್ತ ವರ್ಷದಿಂದಲೇ ವಸತಿ ನಿಲಯಗಳ ಸಂಖ್ಯೆ ಹೆಚ್ಚಿಸಬೇಕು. ನಿಲಯ ಪಾಲಕರು ಹಾಗೂ ಸಿಬ್ಬಂದಿ ಕೊರತೆ ನಿವಾರಣೆಗೆ ಕೂಡಲೇ ನೇಮಕಾತಿಗೆ ಮುಂದಾಗಬೇಕು ಎಂದು ಆಗ್ರಹಿಸಿದರು.
ವಸತಿ ನಿಲಯಗಳಿಗೆ ಶುದ್ಧ ಕುಡಿಯುವ ನೀರು, ಪೌಷ್ಟಿಕ ಆಹಾರ ಹಾಗೂ ವಸತಿ ನಿಲಯ ಸುತ್ತಲಿನ ಪರಿಸರ ಸ್ವಚ್ಛವಾಗಿಡಲು ಕ್ರಮ ಕೈಗೊಳ್ಳಬೇಕು. ವಿದ್ಯಾರ್ಥಿಗಳಿಗೆ ಹಾಸಿಗೆ, ಹೊದಿಕೆ ಮತ್ತು ದಿಂಬುಗಳ ವ್ಯವಸ್ಥೆ ಮಾಡಬೇಕು. ನಿಲಯದಲ್ಲಿರುವ ಗ್ರಂಥಾಲಯಗಳಿಗೆ ಪುಸ್ತಕಗಳನ್ನು ಸರಬರಾಜು ಮಾಡಬೇಕು ಎಂದು ಒತ್ತಾಯಿಸಿದರು.
ವಿದ್ಯಾರ್ಥಿನಿಯರ ವಸತಿ ನಿಲಯಗಳಿಗೆ ಸಿಸಿ ಕ್ಯಾಮೆರಾ ಅಳವಡಿಸಬೇಕು. ವಸತಿ ನಿಲಯಗಳಿಗೆ ವಿದ್ಯಾರ್ಥಿಗಳ ಆಯ್ಕೆ ಪಾರದರ್ಶಕವಾಗಿರಬೇಕು. ಸ್ವಂತ ಕಟ್ಟಡ ಹೊಂದಿದ ನಿಲಯಗಳಿಗೆ ಶೌಚಾಲಯ ಹಾಗೂ ಸ್ನಾನಗೃಹಗಳ ವ್ಯವಸ್ಥೆ ಮಾಡಬೇಕು ಎಂಬುದು ಸೇರಿ ಇತರ ಬೇಡಿಕೆ ಈಡೇರಿಸಲು ಆಗ್ರಹಿಸಿದರು.
ಎಬಿವಿಪಿ ನಗರ ಸಂಘಟನಾ ಕಾರ್ಯದರ್ಶಿ ವಿಜಯ ಬೀಳಗಿ, ಸದಸ್ಯರಾದ ಸಾಗರ, ಹರಿಕೃಷ್ಣ, ವೀರೇಶ, ಮಹಾಂತೇಶ, ವಿವಿಧ ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.