ಕೆರೆಗಳ ಡಿನೋಟಿಫೈ ತಡೆಗೆ ಆಗ್ರಹ


Team Udayavani, Aug 3, 2017, 9:22 AM IST

03-BJP-1.jpg

ರಾಯಚೂರು: ಕಂದಾಯ ಇಲಾಖೆ ಮೂಲಕ ರಾಜ್ಯ ಸರ್ಕಾರ ಕೆರೆಗಳ ಡಿನೋಟಿಫೈ ಮಾಡಲು ಮುಂದಾಗಿರುವ ಕ್ರಮ ಖಂಡಿಸಿ ವಿಶ್ವ ಕರ್ನಾಟಕ ವೇದಿಕೆ ಕಾರ್ಯಕರ್ತರು ಬುಧವಾರ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

ಕಳೆದ ಮೂರು ವರ್ಷದಿಂದ ರಾಜ್ಯ ಬರಕ್ಕೆ ತುತ್ತಾಗಿದ್ದು, ಸಾವಿರಾರು ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೃಷಿಗೆ ಪೂರಕವಾದ ಜಲ ಮೂಲಗಳ ಸಂರಕ್ಷಣೆಗೆ ಮುಂದಾಗುವುದು ರಾಜ್ಯ ಸರ್ಕಾರದ ಆದ್ಯ ಕರ್ತವ್ಯ. ಆದರೆ, ರಾಜ್ಯದ 15 ನೂರು ಕೆರೆಗಳ ಡಿನೋಟಿಫೈ ಮಾಡುವ ಮೂಲಕ ರಾಜ್ಯ ಸರ್ಕಾರ ಭೂಗಳ್ಳರ ಪಾಲು ಮಾಡಲು ಮುಂದಾಗಿದೆ. ಅಕ್ರಮ ಭೂ ದಂಧೆಕೋರರ ಲಾಬಿಗೆ ಮಣಿದು ಕೆರೆಗಳ ಡಿನೋಟಿಫೈ ಮಾಡುವುದು ಸರಿಯಲ್ಲ ಎಂದು ದೂರಿದರು. ಇಂದು ನೀರಿನ ಸಂಕ್ಷರಣೆ ಅನಿವಾರ್ಯವಾಗಿದೆ. ಈಗ ಎಚ್ಚೆತ್ತುಕೊಳ್ಳದಿದ್ದಲ್ಲಿ ಮುಂದೆ ಕೃಷಿ ಭೂಮಿಯೆಲ್ಲ ಬಂಜರಾಗಲಿದೆ. ಎಲ್ಲೆಡೆ ಕುಡಿಯುವ ನೀರಿಗೆ ಹಾಹಾಕಾರವಿದ್ದು, ಅಂತರ್ಜಲ ಪಾತಾಳ ಕಂಡಿದೆ. ರೈತ ಸಮುದಾಯ ಆತಂಕದ ಸ್ಥಿತಿಯಲ್ಲಿರುವ ವೇಳೆ ಕೆರೆಗಳನ್ನು ಡಿನೋಟಿಫೈ ಮಾಡಲು ಸರ್ಕಾರ ಹವಣಿಸುತ್ತಿರುವುದು ಯಾವ ಪುರುಷಾರ್ಥಕ್ಕೆ ಎಂದು ಪ್ರಶ್ನಿಸಿದರು.

ಈಗಾಗಲೇ ಬೇರೆ ರಾಜ್ಯಗಳಲ್ಲಿ ನೀರಿನ ಮೂಲಗಳ ಸಂಕ್ಷರಣೆ ಬಗ್ಗೆ ದೊಡ್ಡ ಮಟ್ಟದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅಂತರ್ಜಲ ವೃದ್ಧಿ, ಜಲ ಮೂಲಗಳ ಸಂರಕ್ಷಣೆ, ಮಳೆ ನೀರನ್ನು ಹಿಡಿದಿಡಲು ಸಾವಿರಾರು ಕೆರೆಗಳನ್ನು ನಿರ್ಮಿಸುತ್ತಿದ್ದಾರೆ. ಇಂಥ ವೇಳೆ ರಾಜ್ಯದ 1500 ಕೆರೆಗಳನ್ನು ಡಿನೋಟಿಫೈ ಮಾಡುತ್ತಿರುವುದು ಖಂಡನೀಯ ಎಂದು ದೂರಿದರು.

ಕೂಡಲೇ ರಾಜ್ಯ ಸರ್ಕಾರ ತನ್ನ ನಿರ್ಧಾರ ಹಿಂಪಡೆಯಬೇಕು. ಕೆರೆ, ಕುಂಟೆ, ಕಾಲುವೆ, ರಾಜಕಾಲುವೆಗಳ ಒತ್ತುವರಿ ತೆರವುಗೊಳಿಸಬೇಕು. ಈಗಿರುವ ಕೆರೆಗಳ ಹೂಳು ಎತ್ತಿಸುವ ಮೂಲಕ ನೀರು ಸಂಗ್ರಹಣೆಗೆ ಮುಂದಾಗಬೇಕು ಎಂದು ಒತ್ತಾಯಿಸಿದರು. ಜಿಲ್ಲಾಧ್ಯಕ್ಷ ಎಸ್‌.ನರಸಿಂಗಪ್ಪ ತಲಕಾಯಿ,
ಕಿಶನ್‌ಸಿಂಗ್‌ ಠಾಕೂರ್‌, ಮಾನಸಿಂಗ್‌ ಠಾಕೂರ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. 

ಟಾಪ್ ನ್ಯೂಸ್

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

Bangla-immigrtnst

ಆಪರೇಷನ್‌ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

HDK–Siddu

Percentage War: ಮತ್ತೆ 60 ಪರ್ಸೆಂಟ್‌ ಕಮಿಷನ್‌ ಯುದ್ಧ ; ಆರೋಪ – ಪ್ರತ್ಯಾರೋಪ

DKS–Delhi

Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್‌

siddaramaih-Meeting

State Budget Meeting: ಇಂದಿನಿಂದ ಸಿಎಂ ಬಜೆಟ್‌ ಪೂರ್ವಭಾವಿ ಸರಣಿ ಸಭೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichuru-Rims

Raichuru: ರಿಮ್ಸ್‌ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವು; 3 ತಿಂಗಳಿನಲ್ಲಿ 12 ಮಂದಿ ಬಲಿ

ಮುಂದಿನ ಅವಧಿಗೆ ನಾನೇ ಸಿಎಂ ಅಭ್ಯರ್ಥಿ: ಸತೀಶ್ ಜಾರಕಿಹೊಳಿ

Karnataka Politics: ಮುಂದಿನ ಅವಧಿಗೆ ‘ನಾನೇ ಸಿಎಂ ಅಭ್ಯರ್ಥಿ’: ಸತೀಶ್ ಜಾರಕಿಹೊಳಿ

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

Raichur: ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಬರಿಮಲೆಗೆ ಹೊರಟ ಮುಸ್ಲಿಂ ವ್ಯಕ್ತಿ

Raichur: ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಬರಿಮಲೆಗೆ ಹೊರಟ ಮುಸ್ಲಿಂ ವ್ಯಕ್ತಿ

Raichuru-hospi

ರಾಯಚೂರಲ್ಲಿ ಮತ್ತೋರ್ವ ಬಾಣಂತಿ, ಹಸುಗೂಸು ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

Bangla-immigrtnst

ಆಪರೇಷನ್‌ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

HDK–Siddu

Percentage War: ಮತ್ತೆ 60 ಪರ್ಸೆಂಟ್‌ ಕಮಿಷನ್‌ ಯುದ್ಧ ; ಆರೋಪ – ಪ್ರತ್ಯಾರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.