ಸಮರ್ಪಕ ಬಿತ್ತನೆ ಬೀಜ-ರಸಗೊಬ್ಬರ ವಿತರಣೆಗೆ ಆಗ್ರಹ
Team Udayavani, Jun 7, 2022, 1:19 PM IST
ರಾಯಚೂರು: ರೈತರಿಗೆ ಸಮರ್ಪಕ ಬಿತ್ತನೆ ಬೀಜ ಹಾಗೂ ರಸಗೊಬ್ಬರ ವಿತರಣೆ ಮೂಲಕ ಕೃಷಿ ಚಟುವಟಿಕೆಗಳಿಗೆ ಅನುಕೂಲ ಮಾಡಿಕೊಡಬೇಕು ಎಂದು ಒತ್ತಾಯಿಸಿ ಅಖೀಲ ಭಾರತ ಕಿಸಾನ್ ಸಭಾದ ಜಿಲ್ಲಾ ಘಟಕದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಈ ಬಗ್ಗೆ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಪ್ರಸಕ್ತ ಮುಂಗಾರು ಹಂಗಾಮು ಆರಂಭಗೊಂಡಿದ್ದು, ಸರ್ಕಾರ ರೈತರಿಗೆ ಕೃಷಿ ಚಟುವಟಿಕೆ ನಡೆಸಲು ಬಿತ್ತನೆ ಬೀಜ ಹಾಗೂ ರಸಗೊಬ್ಬರ ಸೇರಿದಂತೆ ಇನ್ನಿತರ ಅವಶ್ಯಕತೆಗಳನ್ನು ಕಲ್ಪಿಸುದೇ ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪಿಸಿದರು.
ಪ್ರತಿ ಮಳೆಗಾಲದಲ್ಲಿ ರೈತರ ಬೇಡಿಕೆಗೆ ಸ್ಪಂದಿಸಬೇಕಾದ ಸರ್ಕಾರ ಬೇಜವಾಬ್ದಾರಿಯಿಂದ ವರ್ತಿಸುತ್ತಿದೆ. ಕೃಷಿ ಮತ್ತು ಕೃಷಿಕರನ್ನು ಸಂಪೂರ್ಣವಾಗಿ ಸರ್ಕಾರ ಕಡೆಗಣಿಸುತ್ತಿರುವುದಕ್ಕೆ ಸಾಕ್ಷಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರ ಜಾರಿಗೊಳಿಸಿದ್ದ ಕೃಷಿ ವಿರೋಧಿ ಮೂರು ಕಾಯ್ದೆಗಳ ವಿರುದ್ಧ ದೆಹಲಿಯಲ್ಲಿ ನಡೆದ ಐತಿಹಾಸಿಕ ರೈತ ಹೋರಾಟಕ್ಕೆ ಮಣಿದು ಕರಾಳ ಕಾನೂನುಗಳನ್ನು ಹಿಂಪಡೆದು ಸಂದರ್ಭದಲ್ಲಿ ರೈತ ಸಂಘಟನೆಗಳಿಗೆ ಮೋದಿ ಸರ್ಕಾರ ನೀಡಿದ ಎಲ್ಲ ಭರವಸೆಗಳನ್ನು ಕೂಡಲೇ ಈಡೇರಿಸಬೇಕು ಎಂದು ಆಗ್ರಹಿಸಿದರು.
ರಾಜ್ಯ ಸರ್ಕಾರವು ಕರಾಳ ಕೃಷಿ ಕಾನೂನು ಮತ್ತು ಸಂಬಂಧಿತ ತಿದ್ದುಪಡಿಗಳನ್ನು ಕೂಡಲೇ ರದ್ದುಪಡಿಸಬೇಕು ಹಾಗೂ ಕನಿಷ್ಠ ಬೆಂಬಲ ಬೆಲೆ ನಿಗದಿಗೆ ಸ್ಪಷ್ಟ ಕಾನೂನು ರೂಪಿಸಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.
ಪ್ರತಿ ಕ್ವಿಂಟಲ್ ತೊಗರಿಗೆ 10 ಸಾವಿರ ರೂ. ಬೆಲೆ ನಿಗದಿಪಡಿಸಬೇಕು ಹಾಗೂ ಪ್ರತಿಟನ್ ಕಬ್ಬಿಗೆ 3500 ರೂ.ಗಳ ಬೆಲೆ ನಿಗದಿಪಡಿಸಬೇಕು, ಜಲಾನಯನ ಅಭಿವೃದ್ಧಿ ಕಾಮಗಾರಿ ಹೆಚ್ಚಿಸಿ ವೈಜ್ಞಾನಿಕ ನೀರಾವರಿ ಪದ್ಧತಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.
ಬಗರ್ ಹುಕುಂ ಸಾಗುವಳಿದಾರ ರೈತರ ಸಮಸ್ಯೆಗಳನ್ನು ಪರಿಹರಿಸಲು ಅಕ್ರಮ-ಸಕ್ರಮ ಸಮಿತಿಗಳ ಕಾರ್ಯಚುರುಕುಗೊಳಿಸಿ ಅರ್ಹ ಫಲಾನುಭ ರೈತರಿಗೆ ಹಕ್ಕು ಪತ್ರ ನೀಡಬೇಕು ಎಂಬುವುದು ಸೇರಿದಂತೆ ಇನ್ನೂ ಅನೇಕ ಬೇಡಿಕೆ ಈಡೇರಿಸಬೇಕು ಎಂದು ಒತ್ತಾಯಿಸಿದರು.
ಸಭಾದ ಪದಾಧಿಕಾರಿಗಳಾದ ವೆಂಕಟನಗೌಡ ಗದ್ರಟಗಿ, ಸಂಗಯ್ಯಸ್ವಾಮಿ, ಡಿ.ಎಚ್ ಕಂಬಳಿ, ಚಂದ್ರಶೇಖರ ಕ್ಯಾತ್ನಟ್ಟಿ, ಆನಂದಪ್ಪ, ಶಿವಪುತ್ರಯ್ಯ, ಅಳ್ಳಯ್ಯ, ಬಸನಗೌಡ, ದುರಗಪ್ಪ, ಪ್ರಕಾಶ, ಜಗದೀಶ, ಚನ್ನಪ್ಪ ಪ್ರತಿಭಟನೆಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Tollywood: ‘ಗೇಮ್ ಚೇಂಜರ್ʼಗೆ ರಾಮ್‌ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.