ನೀರು ಪೂರೈಸಲು ಆಗ್ರಹಿಸಿ ಧರಣಿ
Team Udayavani, Dec 31, 2017, 12:55 PM IST
ಹಟ್ಟಿ ಚಿನ್ನದ ಗಣಿ: ಕುಡಿಯುವ ನೀರು ಪೂರೈಸಲು ಆಗ್ರಹಿಸಿ ಕರವೇ ಶಿವರಾಮೇಗೌಡ ಬಣ ಕಾರ್ಯಕರ್ತರು ಶನಿವಾರ ಹಟ್ಟಿ ಗ್ರಾಮದ ಬಸ್ ನಿಲ್ದಾಣದ ಬಳಿ ಸಾಂಕೇತಿಕ ಧರಣಿ ನಡೆಸಿದರು.
ಈ ವೇಳೆ ಮಾತನಾಡಿದ ಕರವೇ ಜಿಲ್ಲಾಧ್ಯಕ್ಷ ಅಶೋಕ ಜೈನ, ಸ್ತಳೀಯ ಗ್ರಾಮ ಪಂಚಾಯತಿ, ತಾಲೂಕು ಮತ್ತು ಜಿಲ್ಲಾ ಪಂಚಾಯತಿ ನಿರ್ಲಕ್ಷ್ಯದಿಂದ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಸಾರ್ವಜನಿಕರು ಕುಡಿಯುವ ನೀರಿಗಾಗಿ ಹಾಹಾಕಾರ ಪಡುವಂತಾಗಿದೆ. ಜಿಲ್ಲಾ ಪಂಚಾಯ್ತಿ ವತಿಯಿಂದ ನೀಡುತಿರುವ ಒಂದು ಟ್ಯಾಂಕರ್ ನೀರಿನಿಂದ ದಿನಕ್ಕೆ ಒಂದು ವಾರ್ಡ್‌ಗೆ ಸಾಕಾಗುವುದಿಲ್ಲ.
ಇದರಿಂದ ಕುಡಿಯುವ ನೀರಿನ ತೊಂದರೆ ಉಂಟಾಗಿದ್ದು, ರಾತ್ರಿ ವೇಳೆಯಲ್ಲಿ ಹಟ್ಟಿ ಕ್ಯಾಂಪಿನಿಂದ ಮಹಿಳೆಯರು, ಮಕ್ಕಳು, ಸೈಕಲ್ ಮೂಲಕ ನೀರು ತಂದು ಕುಡಿಯುವ ಪರಿಸ್ಥಿತಿ ಎದುರಾಗಿದೆ ಎಂದು ದೂರಿದರು. ಮನವಿ ಸ್ವೀಕರಿಸಿದ ಕಾ.ನಿ. ಅಧಿಕಾರಿ ಅಮರೇಶ ಮೇಲಧಿಕಾರಿಗಳ ಗಮನಕ್ಕೆ ತಂದು ಸಮಸ್ಯೆ ಬಗೆಹರಿಸುವುದಾಗಿ ಹೇಳಿದರು.
ಶ್ರೀನಿವಾಸ್ (ಮಧುಶ್ರೀ), ಬಸವರಾಜ ಕಳ್ಳಿಮಠ, ಮೌನೇಶ ಕಾಕಾನಗರ, ಎನ್.ಸ್ವಾಮಿ, ನರಸಪ್ಪ ಯಾದವ, ರಾಮಾಂಜನೇಯ, ಸೂರಿ, ರಾಜು, ನಿಂಗರಾಜು, ಮಲ್ಲಿಕಾರ್ಜುನ ಚಿತ್ರನಾಳ, ನಾಗಪ್ಪ ವಂದಲಿ, ಆನಂದಯ್ಯಸ್ವಾಮಿ ಕಳ್ಳಿಮಠ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ
Raichuru: ಆರ್‌ಟಿಪಿಎಸ್ ಬೂದಿ ಹೊಂಡದ ನೀರು ಕೃಷ್ಣಾ ನದಿಗೆ; ಜನರಲ್ಲಿ ಆತಂಕ
Dhananjay: ಸಿಕ್ಕ ಸಿಕ್ಕಲೆಲ್ಲ ಕೇಳ್ತಿದ್ರಲ್ಲ; ಅದಕ್ಕೆ ಅನೌನ್ಸ್ ಮಾಡಿದೆ: ಡಾಲಿ
MUST WATCH
ಹೊಸ ಸೇರ್ಪಡೆ
Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
BBK11: ಅಸಲಿ ಆಟ ಶುರು ಮಾಡಿದ ಧನರಾಜ್: ಮೋಕ್ಷಿತಾಳಿಗೆ ಅಹಂಕಾರ ಇದೆ ಎಂದ ಸೈಲೆಂಟ್ ಕಿಲಾಡಿ
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Zebra: ಡಾಲಿ ಜೀಬ್ರಾಗೆ ಮೆಗಾಸ್ಟಾರ್ ಸಾಥ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.