ನೀರಿನ ಸಮಸ್ಯೆ ಸಮರ್ಪಕ ಎದುರಿಸಿ

ಗುಳೆಯಿಂದ ಮರಳಿ ಬಂದ ಜನರಿಗೆ ಉದ್ಯೋಗ ಚೀಟಿ ಒದಗಿಸಿ

Team Udayavani, Apr 24, 2020, 11:54 AM IST

24-April-07

ದೇವದುರ್ಗ: ಪ್ರವಾಸಿ ಮಂದಿರ ಹೊರಾಂಗಣದಲ್ಲಿ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಯಿತು.

ದೇವದುರ್ಗ: ದೇವದುರ್ಗ ವಿಧಾನಸಭಾ ಕ್ಷೇತ್ರವನ್ನು ಬರಗಾಲ ಪ್ರದೇಶ ಪಟ್ಟಿಯಿಂದ ಕೈಬಿಡಲಾಗಿದೆ. ಎಲ್ಲ ಗ್ರಾಪಂಗಳ ಅನುದಾನ ಮತ್ತು ಇತರೆ ಅನುದಾನಗಳಿಂದ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಅನಿವಾರ್ಯತೆ ಇದೆ. ಅಧಿಕಾರಿಗಳು ಮುಂಜಗ್ರತಾ ಕ್ರಮ ಕೈಗೊಂಡು ನೀರಿನ ಭವಣೆ ಬರದಂತೆ ನಿಗಾ ವಹಿಸಬೇಕು ಎಂದು ಶಾಸಕ ಕೆ. ಶಿವನಗೌಡನಾಯಕ ಸೂಚಿಸಿದರು.

ಪಟ್ಟಣದ ಪ್ರವಾಸಿ ಮಂದಿರ ಹೊರಾಂಗಣದಲ್ಲಿ ಗುರುವಾರ ನಡೆದ ಕುಡಿಯುವ ನೀರು ಮತ್ತು ವಿವಿಧ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಕೋವಿಡ್ ಭೀತಿಯಿಂದ ಪುಣೆ, ಮುಂಬೈ, ಬೆಂಗಳೂರು, ಗೋವಾದಿಂದ ಕೂಲಿ ಕಾರ್ಮಿಕರು ತಾಲೂಕಿಗೆ ಮರಳಿ ಬಂದಿದ್ದಾರೆ. ಅವರಿಗೆ ಕೂಡಲೇ ಉದ್ಯೋಗ ಒದಗಿಸಿ ಕೂಲಿ ಮತ್ತು ಕೆಲಸ ನೀಡಬೇಕು. ಪ್ರತಿ ಗ್ರಾಪಂ ಮಟ್ಟದಲ್ಲಿ 1000ದಿಂದ 1500 ಜಾಬ್‌ ಕಾರ್ಡ್‌ ಹೆಚ್ಚಿಸಿ ಮೇ 7ರೊಳಗೆ ಹೊಸ ಕೂಲಿಕಾರ್ಮಿಕರ ಪಟ್ಟಿ ನೀಡಬೇಕು. ಗ್ರಾಮದಲ್ಲಿ ಜನರ ಬೇಡಿಕೆ ಪರಿಗಣಿಸಿ ಉದ್ಯೋಗ ಖಾತ್ರಿ ಯೋಜನೆ ಕ್ರಿಯಾಯೋಜನೆಗೆ ಸೇರಿಸಬೇಕು. ಎಲ್ಲ 33 ಗ್ರಾಪಂಗಳ ಕ್ರಿಯಾಯೋಜನೆಗೆ ರೂಪಿಸಿ ಗಮನಕ್ಕೆ ತಂದರೆ ಅನುಮೋದನೆ ಕೊಡಿಸಲಾಗುವದು ಎಂದು ತಾಪಂ ಪ್ರಭಾರಿ ಇಒ ವೆಂಕಟೇಶ ಗಲಗ ಅವರಿಗೆ ಸೂಚಿಸಿದರು.

ಎಲ್ಲ ಪಿಡಿಒಗಳು ಕಡ್ಡಾಯವಾಗಿ ಕೇಂದ್ರ ಸ್ಥಳದಲ್ಲಿ ವಾಸಿಸಬೇಕು. ಗ್ರಾಪಂ ವ್ಯಾಪ್ತಿಯಲ್ಲಿ ಕೈಗೊಂಡಿರುವ ಕಾಮಗಾರಿಗಳ ಗುಣಮಟ್ಟದ ಕುರಿತು ಗಮನ ನೀಡಬೇಕು ಎಂದು ಹೇಳಿದರು. ತಾಲೂಕು ಆರೋಗ್ಯ ಅಧಿಕಾರಿ ಡಾ| ಬನದೇಶ ಕೈಗೊಂಡಿರುವ ಕ್ರಮಗಳು ಮತ್ತು ಕಾರ್ಯಾಚರಣೆ ಮಾಡಿರುವ ಕುರಿತು ಸಭೆಗೆ ಮಾಹಿತಿ ನೀಡಿದರು.

ಜಾಲಹಳ್ಳಿ, ಮಸರಕಲ್‌ ಗ್ರಾಮಗಳ 110ಕೆವಿ ಮತ್ತು ದೇವದುರ್ಗ ಪಟ್ಟಣದಲ್ಲಿ 210ಕೆವಿ ವಿದ್ಯುತ್‌ ಘಟಕ ನಿರ್ಮಾಣ ಹಂತದಲ್ಲಿ ವಿಳಂಬವಾಗುತ್ತಿದೆ. ದೊಡ್ಡಿ, ತಾಂಡಾಗಳಲ್ಲಿ ಇನ್ನೂ ವಿದ್ಯುತ್‌ ಸೌಕರ್ಯ ಇಲ್ಲ ಎಂಬ ದೂರುಗಳು ಕೇಳಿಬರುತ್ತಿವೆ. ಸಾರ್ವಜನಿಕ ರಸ್ತೆಗಳನ್ನು ಅಗಲೀಕರಣ ಮಾಡಲು ಅನುದಾನ ನೀಡಲಾಗಿದೆ. ವಿದ್ಯುತ್‌ ಕಂಬ ಸ್ಥಳಾಂತರವಾಗುತ್ತಿಲ್ಲ. ಹೀಗೇಕೆ ಮಾಡುತ್ತಿರುವಿರಿ ಎಂದು ಜೆಸ್ಕಾಂ ಎಇಇ ಬಸವರಾಜ ಚವ್ಹಾಣ ಅವರನ್ನು ಶಾಸಕರು ಪ್ರಶ್ನಿಸಿದರು.

ಜೆಸ್ಕಾಂ ಎಂಡಿಯೊಂದರಿಗೆ ದೂರವಾಣಿಯಲ್ಲಿ ಮಾತನಾಡಿ,ಖಾಲಿ ಇರುವ ಹುದ್ದೆಗಳ ಭರ್ತಿಗೆ ಆದ್ಯತೆ ನೀಡಲು ಕೋರಿದರು. ತಹಶೀಲ್ದಾರ್‌ ಮಧುರಾಜ ಯಾಳಗಿ, ಸಿಪಿಐ ಆರ್‌.ಎಂ. ನದಾಫ್‌, ಬಿಇಒ ಆರ್‌. ಇಂದಿರಾ, ಸಹಾಯಕ ಕೃಷಿ ನಿರ್ದೇಶಕಿ ಡಾ| ಎಸ್‌. ಪ್ರಿಯಾಂಕಾ, ಲೋಕೋಪಯೋಗಿ ಇಲಾಖೆ ಇಇ ಬಿ.ಬಿ. ಪಾಟೀಲ, ಜಿಪಂ ಎಇಇ ಮಹಾದೇವಪ್ಪ ನಾಯಕ, ಪಶುಸಂಗೋಪನಾ ಇಲಾಖೆ ಸಹಾಯಕ ನಿರ್ದೇಶಕ ಎಸ್‌. ಬಸವರಾಜ ಸಿಡಿಪಿಒ ಮಹೇಶ ನಾಯಕ, ಪಿಎಸ್‌ಐ ಎಲ್‌.ಬಿ.ಅಗ್ನಿ ಇದ್ದರು.

ಟಾಪ್ ನ್ಯೂಸ್

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

MM-Singh-ACC-Pm

Accidental Prime Minister: ದ ಮೇಕಿಂಗ್‌ ಆ್ಯಂಡ್‌ ಅನ್‌ಮೇಕಿಂಗ್‌ ಆಫ್ ಡಾ.ಸಿಂಗ್‌

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

MM-Singh–Bush

Tribute Dr.Singh: ಡಾ.ಸಿಂಗ್‌ ಅವಧಿಯಲ್ಲಿ ಭಾರತ-ಅಮೆರಿಕ ನಡುವೆ ಅಣ್ವಸ್ತ್ರ ಒಪ್ಪಂದ

Supreme Court: ಕ್ರೆಡಿಟ್‌ ಕಾರ್ಡ್‌ ಬಾಕಿ ಮೇಲೆ 30% ಬಡ್ಡಿಗೆ ಸುಪ್ರೀಂ ಅಸ್ತು!

Supreme Court: ಕ್ರೆಡಿಟ್‌ ಕಾರ್ಡ್‌ ಬಾಕಿ ಮೇಲೆ 30% ಬಡ್ಡಿಗೆ ಸುಪ್ರೀಂ ಅಸ್ತು!

MM-Singh-Sonia

Tribute Dr.Singh: ಆರ್ಥಿಕ ಭಾಗ್ಯ ವಿಧಾತ…ಡಾ.ಮನಮೋಹನ್‌ ಸಿಂಗ್‌

BJP-BRS

Party Donation: ಬಿಜೆಪಿಗೆ 2,244 ಕೋ.ರೂ. ದೇಣಿಗೆ ಕಳೆದ ಬಾರಿಗಿಂತ ಶೇ. 212 ಏರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

Sindhanur: ಲಾರಿ ಪಲ್ಟಿ… ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

8-sirwar

Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

MM-Singh-ACC-Pm

Accidental Prime Minister: ದ ಮೇಕಿಂಗ್‌ ಆ್ಯಂಡ್‌ ಅನ್‌ಮೇಕಿಂಗ್‌ ಆಫ್ ಡಾ.ಸಿಂಗ್‌

5

Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ;‌ ಪ್ರಕರಣ ದಾಖಲು

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

MM-Singh–Bush

Tribute Dr.Singh: ಡಾ.ಸಿಂಗ್‌ ಅವಧಿಯಲ್ಲಿ ಭಾರತ-ಅಮೆರಿಕ ನಡುವೆ ಅಣ್ವಸ್ತ್ರ ಒಪ್ಪಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.