ಕ್ವಾರಂಟೈನ್‌ನಲ್ಲಿದ್ದವರಿಗೆ ಹೆಚ್ಚಿದ ಭಯ
Team Udayavani, May 22, 2020, 12:13 PM IST
ಸಾಂದರ್ಭಿಕ ಚಿತ್ರ
ದೇವದುರ್ಗ: ತಾಲೂಕಿನಲ್ಲಿ ಒಟ್ಟು ಮೂರು ಕೋವಿಡ್-19 ಪ್ರಕರಣಗಳು ಪತ್ತೆಯಾಗಿದ್ದು, ಇಡೀ ತಾಲೂಕಿನ ಜನರನ್ನು ತಲ್ಲಣಗೊಳಿವೆ.
ಸಾರಿಗೆ ಸಂಸ್ಥೆ ಬಸ್ ಸೇರಿ ಖಾಸಗಿ ವಾಹನಗಳಲ್ಲಿ ಪ್ರತಿದಿನ ಸರಾಸರಿ 200 ಜನ ಕೂಲಿಕಾರರು ಬರುತ್ತಿದ್ದು, ಎಲ್ಲರನ್ನೂ ವಿವಿಧ ಇಲಾಖೆ ಹಾಸ್ಟೆಲ್ ಗಳಲ್ಲಿ ಕ್ವಾರಂಟೈನ್ ಮಾಡಲಾಗುತ್ತಿದೆ. ಮಸರಕಲ್ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 2 ಹಾಗೂ ಕೊತ್ತದೊಡ್ಡಿ ಗ್ರಾಮದ ಕಿತ್ತೂರು ರಾಣಿ ಚನ್ನಮ್ಮ ಶಾಲೆಯಲ್ಲಿ 1 ಸೇರಿ ಮೂವರಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದ್ದು, ಉಳಿದ ಹಾಸ್ಟೆಲ್‌ಗಳಲ್ಲಿ ಇರುವ ಸುಮಾರು ಎರಡು ಸಾವಿರ ಜನರಿಗೆ ಭಯ ಶುರುವಾಗಿದ್ದು, ಇಲ್ಲಿನ ಕೂಲಿಕಾರರಿಗೆ ಕ್ವಾರಂಟೈನ್ ಮಾಡಲಾಗಿದೆ.
ಅದರಂತೆ ನಿತ್ಯ ಪ್ರತಿಯೊಬ್ಬರ ಆರೋಗ್ಯ ತಪಾಸಣೆ ಮಾಡಲಾಗುತ್ತಿದೆ. ಈವರೆಗೆ ಯಾರೂ ಕೂಡ ಕ್ವಾರಂಟೈನ್‌ನಿಂದ ಬಿಡುಗಡೆಯಾಗಿಲ್ಲ. ಪಾಸಿಟಿವ್ ಕಂಡುಬಂದ ತಾಲೂಕಿನ ಎರಡು ಹಾಸ್ಟೆಲ್‌ಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದ್ದು, ಕಂಟೇನ್ಮೆಂಟ್ ಝೋನ್ ಎಂದು ಗುರುತಿಸಲಾಗಿದೆ. ಎರಡು ಪ್ರಕರಣ ಕಂಡು ಬಂದ ಮೊರಾರ್ಜಿ ದೇಸಾಯಿ ಹಾಸ್ಟೆಲ್‌ನಲ್ಲಿ 242 ಹಾಗೂ ಒಂದು ಪ್ರಕರಣ ಕಂಡು ಬಂದ ಕೊತ್ತದೊಡ್ಡಿ ಏಕಲವ್ಯ ವಸತಿ ಶಾಲೆಯಲ್ಲಿ 238 ಜನರ ಮೇಲೆ ತೀವ್ರ ನಿಗಾವಹಿಸಲಾಗಿದೆ. ಪಾಸಿಟಿವ್ ಪ್ರಕರಣ ಕಂಡುಬಂದ ಮೂವರಿಗೆ ಪ್ರಥಮ ಹಾಗೂ ದ್ವಿತೀಯ ಸಂಪರ್ಕದಲ್ಲಿದ್ದ ನೂರಾರು ಜನರನ್ನು ಪ್ರತ್ಯೇಕವಾಗಿ ಇರಿಸಲಾಗಿದೆ ಎಂದು ತಹಶೀಲ್ದಾರ್ ಮಧುರಾಜ್ ಯಾಳಗಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್‌ಮೇಕಿಂಗ್ ಆಫ್ ಡಾ.ಸಿಂಗ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.