ಎಲ್ಲಿಯೂ ಪಾಲನೆಯಾಗುತ್ತಿಲ್ಲ ಸಾಮಾಜಿಕ ಅಂತರ!


Team Udayavani, May 8, 2020, 12:21 PM IST

08-May-08

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ದೇವದುರ್ಗ: ಕೋವಿಡ್ ವೈರಸ್‌ ಭೀತಿ ಹಿನ್ನೆಲೆಯಲು ದಾನಿಗಳು ಬಡವರಿಗೆ ಸಹಾಯದ ಹಸ್ತ ಚಾಚಿದ್ದಾರೆ. ಆದರೆ ಇಲ್ಲಿ ಸಾಮಾಜಿಕ ಅಂತರ ಮರೆಯಾಗಿರುವುದು ಕಂಡು ಬಂದಿದ್ದು, ತಾಲೂಕಾಡಳಿತಕ್ಕೆ ತಲೆನೋವಾಗಿ ಪರಿಣಮಿಸಿದೆ.

ಕಳೆದ ಒಂದೂವರೆ ತಿಂಗಳಿಂದ ಕೋವಿಡ್ ವೈರಸ್‌ ಒತ್ತಡಕ್ಕೆ ಲಾಕ್‌ಡೌನ್‌ ಘೋಷಣೆ ಹಿನ್ನೆಲೆ ದುಡಿಯುವ ಕೈಗಳಿಗೆ ಕೆಲಸವಿಲ್ಲದೇ ಹೊಟ್ಟೆ ತುಂಬ ಊಟವಿಲ್ಲದೇ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಸಂಘ ಸಂಸ್ಥೆ ರಾಜಕೀಯ ಪಕ್ಷದ ಮುಖಂಡರ ಆಹಾರ ಪದಾರ್ಥ ಅಗತ್ಯ ವಸ್ತುಗಳ ವಿತರಣೆ ವೇಳೆ ಸಾಮಾಜಿಕ ಅಂತರ ಪಾಲನೆ ಆಗದೇ ಸಮಸ್ಯೆಗೆ ಕಾರಣವಾಗುತ್ತಿದೆ.

ರಾಯಚೂರು ಜಿಲ್ಲೆ ಗ್ರೀನ್‌ ಝೋನ್‌ ಹಿನ್ನೆಲೆಯಲ್ಲಿ ಮೇ 4ರಂದು ಲಾಕ್‌ಡೌನ್‌ ಕೊಂಚ ಸಡಿಲಿಕೆ ಆಗುತ್ತಿದ್ದಂತೆ ಸಾಮಾಜಿಕ ಅಂತರ ಉಲ್ಲಂಘನೆ ಆಗುತ್ತಿದೆ. ಗುಂಪು ಗುಂಪಾಗಿ ಆಹಾರ ಪದಾರ್ಥಗಳು ಕೈಲಾದಷ್ಟು ಉಚಿತವಾಗಿ ವಿತರಿಸುವ ಕಾಯಕದಲ್ಲಿ ನಿರತರಾಗಿದ್ದಾರೆ. ಆರೋಗ್ಯ ರಕ್ಷಣೆಗಾಗಿ ಸರಕಾರ ರೂಪಿಸಿರುವ ಕೋವಿಡ್ ಮಾರ್ಗಸೂಚಿಗಳು ಮೂಲೆಗುಂಪಾಗಿರುವ ಆತಂಕ ಹೆಚ್ಚುವಂತೆ ಮಾಡಿದೆ. ಜಿಲ್ಲಾಡಳಿತ ಮತ್ತು ತಾಲೂಕಾಡಳಿತ ನಿಮಯಗಳು ಪಾಲನೆಯಲ್ಲಿ ಸಂಘ ಸಂಸ್ಥೆಗಳು ರಾಜಕೀಯ ಮುಖಂಡರು ಸಾಮಾಜಿಕ ಅಂತರ ಕಾಪಾಡದೇ ಆಹಾರ ಪದಾರ್ಥಗಳು ವಿತರಣೆ ವೇಳೆ ಅಪಾಯಕಾರಿ ಆಗುತ್ತಿದೆ ಎನ್ನಲಾಗುತ್ತಿದೆ.

ಸಂಘ ಸಂಸ್ಥೆ ರಾಜಕೀಯ ಪಕ್ಷದವರು ಜನರ ಮನೆ ಮನೆಗೆ ಆಹಾರ ಧಾನ್ಯಗಳು ಕಿಟ್‌ ವಿತರಿಸುತ್ತಿದ್ದಾರೆ. ಪಟ್ಟಣದಲ್ಲಿರುವ ಬಹುತೇಕ ಬ್ಯಾಂಕ್‌ ಗಳಲ್ಲಿ ಹಣ ಪಡೆಯಲು ಬ್ಯಾಂಕ್‌ ಮುಂದೆ ಮುಗಿಬಿದ್ದ ದೃಶ್ಯಗಳು ಸಾಮಾನ್ಯ ಎಂಬಂತಾಗಿದೆ. ತಾಲೂಕು ಆಡಳಿತ ಪೊಲೀಸ್‌ ಇಲಾಖೆ ಹಲವು ಬಾರಿ ಸಾಮಾಜಿಕ ಅಂತರ ಕಾಪಾಡುವಂತೆ ಜಾಗೃತಿ ಮೂಡಿಸಿದೆ.

ಕೋವಿಡ್ ಲಾಕ್‌ಡೌನ್‌ಗೆ ಸಿಲುಕಿರುವ ಬಡವರಿಗೆ ಉಚಿತ ಆಹಾರ ಧಾನ್ಯ ಮಾಸ್ಕ್, ಸ್ಯಾನಿಟೈಸರ್‌ ಸೇರಿ ಅಗತ್ಯ ವಸ್ತುಗಳನ್ನು ವಿತರಿಸುವ ಜನರ ಸಾಮಾಜಿಕ ಕಳಕಳಿಯೇ ಈಗ ತಾಲೂಕಾಡಳಿತಕ್ಕೆ ತಲೆನೋವಾಗಿ ಪರಿಣಮಿಸಿದೆ. ಗೃಹ ಬಳಕೆ ದಿನ ವಸ್ತು ತರಕಾರಿ, ಕಿರಾಣಿ ಅಂಗಡಿ ವಸ್ತುಗಳ ಖರೀದಿಯಲ್ಲಿ ಸಾಮಾಜಿಕ ಅಂತರ ಪಾಲನೆ ಆಗುತ್ತಿಲ್ಲ. ತಿಳಿವಳಿಕೆ ಕೊರತೆ ಮಧ್ಯೆ ಬುದ್ಧಿವಂತ ನಾಗರಿಕರು ಅಗತ್ಯ ವಸ್ತುಗಳ ವಿತರಣೆ ವೇಳೆ ಸಾಮಾಜಿಕ ಅಂತರ ಕಾಪಾಡದೇ ಮೈಮರೆತ್ತಿದ್ದಾರೆ. ಎಲ್ಲೆಂದರಲ್ಲಿ ಗುಂಪು ಗುಂಪಾಗಿ ಕುಳಿತುಕೊಂಡು, ಒಬ್ಬರಿಗೊಬ್ಬರು ಅಂತರ ಕಾಪಾಡದೇ ಕೊರೊನಾ ವೈರಸ್‌ ಸೋಂಕಿತರು ಇಲ್ಲದ ಜಿಲ್ಲೆಯಲ್ಲಿ ಆಹಾರ ಪದಾರ್ಥಗಳು ವಿತರಣೆಯಲ್ಲಿ ನಿರ್ಲಕ್ಷ್ಯ ತೋರುವುದು ಸರಿಯಲ್ಲ.

ನಾಗರಾಜ ತೇಲ್ಕರ್‌

ಟಾಪ್ ನ್ಯೂಸ್

ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

1-reee

Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್

baby 2

Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ

Nirmala 2 a

Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ

arrested

Big Boss ಸ್ಪರ್ಧಿಯಾಗಿದ್ದ ನಟ-ಗಾಯಕ ಮಾದಕ ವಸ್ತು ಸಹಿತ ಬಂಧನ

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

ಮಂತ್ರಾಲಯ ಶ್ರೀಗಳಿಂದ ತುಂಗಭದ್ರ ನದಿಯಲ್ಲಿ ದಂಡೋದಕ ಸ್ನಾನ

Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ

5-raichur

Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು

Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ

Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ

Raichruru-RTPS

Raichuru: ಆರ್‌ಟಿಪಿಎಸ್ ಬೂದಿ ಹೊಂಡದ ನೀರು ಕೃಷ್ಣಾ ನದಿಗೆ; ಜನರಲ್ಲಿ ಆತಂಕ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

1-reee

Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್

byndoor

Karkala: ಕೀಟ ನಾಶಕ ಸೇವಿಸಿ ವ್ಯಕ್ತಿ ಸಾವು

baby 2

Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ

Nirmala 2 a

Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.