![Kanadka-Dooja](https://www.udayavani.com/wp-content/uploads/2025/02/Kanadka-Dooja-415x249.jpg)
![Kanadka-Dooja](https://www.udayavani.com/wp-content/uploads/2025/02/Kanadka-Dooja-415x249.jpg)
Team Udayavani, Dec 28, 2019, 1:43 PM IST
ದೇವದುರ್ಗ: ಮುಂಬರುವ ಎಸ್ ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ತಾಲೂಕಿನ ಫಲಿತಾಂಶ ಸುಧಾರಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಈಗಿನಿಂದಲೇ ಪ್ರಯತ್ನ ನಡೆಸಿದ್ದಾರೆ.
ಕಳೆದ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶದಲ್ಲಿ ತಾಲೂಕು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದೆ. ಆದರೀಗ ರಾಜ್ಯದಲ್ಲಿ 10ನೇ ಸ್ಥಾನಕ್ಕೆ ಪಡೆಯುವ ನಿಟ್ಟಿನಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ವಿಷಯವಾರು ನುರಿತ ಶಿಕ್ಷಕರಿಂದ ವಿಶೇಷ ಬೋಧನೆ ಆರಂಭಿಸಲಾಗಿದೆ. ವಾರದಲ್ಲಿ ನಾಲ್ಕು ದಿನಗಳ ಕಾಲ ವಿಶೇಷ ಬೋಧನಾ ತರಗತಿ ಪರೀಕ್ಷೆಗಳು ಆರಂಭವಾಗಿದ್ದು, ಫಲಿತಾಂಶ ಸುಧಾರಣೆಗೆ ಶಿಕ್ಷಣ ಇಲಾಖೆ ಅಧಿಕಾರಿಗಳು ಹಗಲಿರಳು ಶ್ರಮಿಸುತ್ತಿದ್ದಾರೆ.
ರಾಜ್ಯಕ್ಕೆ 10ನೇ ಸ್ಥಾನ ಗುರಿ: ಪ್ರಸಕ್ತ ವರ್ಷದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ತಾಲೂಕು ಪ್ರಥಮ ಸ್ಥಾನ ಪಡೆದಿದೆ. ಈ ಬಾರಿ ರಾಜ್ಯಕ್ಕೆ 10ನೇ ಸ್ಥಾನ ಪಡೆಯುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಒಂದು ಹೆಜ್ಜೆ ಮುಂದಿಟ್ಟಿದೆ. ಕಳೆದ ನವೆಂಬರ್ 25ರಿಂದ ಸರಕಾರಿ
ಪ್ರೌಢಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ವಿಷಯವಾರು ನುರಿತ ಶಿಕ್ಷಕರಿಂದ ಇಂಗ್ಲಿಷ್, ವಿಜ್ಞಾನ, ಸಮಾಜ ವಿಜ್ಞಾನ ವಿಶೇಷ ಭೋಧನೆ ನಡೆಸಲಾಗುತ್ತಿದೆ.
31 ಪ್ರೌಢಶಾಲೆ 3240 ವಿದ್ಯಾರ್ಥಿಗಳು: ಪಟ್ಟಣ ಸೇರಿ ತಾಲೂಕಿನಾದ್ಯಂತ 31 ಸರಕಾರಿ ಪ್ರೌಢಶಾಲೆಗಳ 3240 ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ತರಗತಿ ಪ್ರವೇಶ ಪಡೆದಿದ್ದಾರೆ. ಆದರೀಗ ಫಲಿತಾಂಶ ಸುಧಾರಣೆಗಾಗಿ ವಿಶೇಷ ತರಗತಿಗಳು ನಡೆಸುವ ಮೂಲಕ ಫಲಿತಾಂಶಕ್ಕೆ ಹೆಚ್ಚಿನ ಒತ್ತು ನೀಡಿದ್ದಾರೆ.
ಇಂಗ್ಲಿಷ, ಗಣಿತ. ವಿಜ್ಞಾನ, ಸಮಾಜ ವಿಜ್ಞಾನ ವಿಶೇಷ ಬೋಧನೆಗಾಗಿ 90ರಿಂದ 100 ಜನ ಶಿಕ್ಷಕರನ್ನು ನಿಯೋಜಿಸಲಾಗಿದೆ. ಪಟ್ಟಣ, ಅರಕೇರಾ, ಗಲಗ, ಜಾಲಹಳ್ಳಿ, ಕೊಪ್ಪರು, ಗಬ್ಬೂರು ಸೇರಿ ಇತರೆ ಸರಕಾರಿ ಪ್ರೌಢಶಾಲೆಯಲ್ಲಿ ಎಸ್‌ಎಸ್ ಎಲ್‌ಸಿ ವಿದ್ಯಾರ್ಥಿಗಳಿಗೆ ತರಬೇತಿ ಘಟಕ ಪರೀಕ್ಷೆಗಳು ಆರಂಭಿಸಿದ್ದಾರೆ.
ವಾರದಲ್ಲಿ ನಾಲ್ಕು ದಿನ: ಸರಕಾರಿ ಪ್ರೌಢಶಾಲೆ ಎಸ್‌ಎಸ್‌ಎಲ್‌ಸಿ
ವಿದ್ಯಾರ್ಥಿಗಳಿಗೆ ವಾರದಲ್ಲಿ ನಾಲ್ಕು ದಿನಗಳ ಕಾಲ ವಿಶೇಷ ಕೋಚಿಂಗ್, ತರಗತಿ ಹಾಗೂ ಘಟಕ ಪರೀಕ್ಷೆಗಳು ನಡೆಯುತ್ತಿವೆ. ನವೆಂಬರ್ 25ರಿಂದ ಆರಂಭವಾಗಿದ್ದು, ಫೆಬ್ರವರಿ 15ರ ವರೆಗೆ ಅಧ್ಯಾಯ ಪರೀಕ್ಷೆಗಳು ಮತ್ತು ಶಿಕ್ಷಕರಿಂದ ಕಲಿಕೆ ಕುರಿತು ಚರ್ಚೆ ನಡೆಸಲಾಗುತ್ತಿದೆ. ಶಿಕ್ಷಣ ಇಲಾಖೆ ಅಧಿಕಾರಿಗಳ ತಂಡ ರಚನೆ ಮಾಡಿದೆ. ತಂಡಗಳು ಶಿಕ್ಷಕರು ಬೋಧಿಸುವ ಕಾರ್ಯ ಪರಿಶೀಲಿವೆ ಎಂದು ಹೇಳಲಾಗುತ್ತಿದೆ.
ಜಿಪಂ ಸಿಇಒ ಆಸಕ್ತಿ: ರಾಜ್ಯಕ್ಕೆ ಉತ್ತಮ ಫಲಿತಾಂಶ ನೀಡುವ ಉದ್ದೇಶದ ಹಿನ್ನೆಲೆಯಲ್ಲಿ ಜಿಪಂ ಸಿಇಒ ಜಿ. ಲಕ್ಷ್ಮೀಕಾಂತರೆಡ್ಡಿ ತೀರಾ ಆಸಕ್ತಿ ವಹಿಸಿದ್ದಾರೆ. ಅದರಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಹೆಚ್ಚಿನ ಗಮನಹರಿಸಿದ್ದಾರೆ.
ಜಿಪಿಎಸ್ ಕಡ್ಡಾಯ: ಪಟ್ಟಣ ಸೇರಿ ತಾಲೂಕಿನಾದ್ಯಂತ 31 ಸರಕಾರಿ
ಪ್ರೌಢಶಾಲೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಆರಂಭಿಸಲಾದ ಕೋಚಿಂಗ್, ವಿಶೇಷ ಬೋಧನೆ ತರಗತಿಯನ್ನು ಕ್ಷೇತ್ರ ಶಿಕ್ಷಣಾಧಿಕಾರಿ, ಕ್ಷೇತ್ರ ಸಂಪನ್ಮೂಲ ಅಧಿಕಾರಿ, ಅಕ್ಷರ ದಾಸೋಹ ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. ಶಾಲೆ ಭೇಟಿ ನೀಡಿ ಪರಿಶೀಲಿಸಿದ ಛಾಯಾಚಿತ್ರವನ್ನು ಜಿಪಿಎಸ್ ಮೂಲಕ ಮೇಲಧಿಕಾರಿಗಳಿಗೆ ರವಾನೆ ಮಾಡುವುದು ಕಡ್ಡಾಯವಾಗಿದೆ. ಹೀಗಾಗಿ ಅಧಿಕಾರಿಗಳು ತೀರಾ ನಿಗಾವಹಿಸಿದ್ದು, ಈ ಬಾರಿ ಎಸ್
ಎಸ್‌ಎಲ್‌ಸಿ ಫಲಿತಾಂಶ ಗುರಿ ಮುಟ್ಟುವ ನಿರೀಕ್ಷೆಯಲ್ಲಿದೆ ಎಂಬ
ಆಶಾಭಾವನೆ ಇದೆ.
ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ರಾಜ್ಯದಲ್ಲಿ 10ನೇ ಸ್ಥಾನಕ್ಕೆ ಬರುವ ನಿಟ್ಟಿನಲ್ಲಿ ನವಂಬರ್ 25ರಂದು ವಿಶೇಷ ಬೋಧನೆ ಘಟಕ ಪರೀಕ್ಷೆ ಆರಂಭಿಸಲಾಗಿದೆ. ಪರೀಕ್ಷೆಗೆ ಸಂಬಂಧಿಸಿದಂತೆ ಕಲ್ಯಾಣ ಕರ್ನಾಕಟ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ ಅನುದಾನ ಪಡೆಯಲಾಗಿದೆ. 31 ಪ್ರೌಢಶಾಲೆಯಲ್ಲಿ 3240 ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದಾರೆ.
.ಡಾ| ಎಸ್.ಎಂ. ಹತ್ತಿ,
ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜ ತೇಲ್ಕರ್
Surathkal: ಆರು ಬಾರಿಯ ಚಾಂಪಿಯನ್, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ
Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್
Sulya: ಪೈಪ್‌ಲೈನ್ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್ ಜಾರಕಿಹೊಳಿ
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
You seem to have an Ad Blocker on.
To continue reading, please turn it off or whitelist Udayavani.