ಪರೀಕ್ಷೆ ಪೂರ್ವ ಸಿದ್ಧತೆ ಸಭೆ

ಯಾವುದೇ ತಪ್ಪು ನಡೆಯದಂತೆ ಎಚ್ಚರ ವಹಿಸುವಂತೆ ಸೂಚನೆ

Team Udayavani, Jun 21, 2020, 5:17 PM IST

21-June-24

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ದೇವದುರ್ಗ: ಪಟ್ಟಣದ ಮಿನಿ ವಿಧಾನಸೌಧ ಸಭಾಂಗಣದಲ್ಲಿ ತಹಶೀಲ್ದಾರ್‌ ಮಧುರಾಜ ಯಾಳಗಿ ಅಧ್ಯಕ್ಷತೆಯಲ್ಲಿ ಎಸ್‌ಎಸ್‌ ಎಲ್‌ಸಿ ಪರೀಕ್ಷೆ ಪೂರ್ವ ಸಿದ್ದತೆ ಸಭೆ ನಡೆಯಿತು.

ಈ ಸಂದರ್ಭದಲ್ಲಿ ಮಾತನಾಡಿದ ತಹಶೀಲ್ದಾರ್‌ ಯಾಳಗಿ, ಎಸ್‌ಎಸ್‌ಎಲ್‌ಸಿ ಪರೀಕ್ಷೆ ಕೇಂದ್ರಗಳ ಸುತ್ತಲೂ 200 ಮೀಟರ್‌ ವ್ಯಾಪ್ತಿಯಲ್ಲಿ ಬ್ಯಾರಿಕೇಡ್‌ ಹಾಕಬೇಕು. ಪರೀಕ್ಷಾ ಕೇಂದ್ರಕ್ಕೆ ನಿಯೋಜನೆಯಾದ ಅಧಿಕಾರಿಗಳು ಮತ್ತು ಸಿಬ್ಬಂದಿ ಬಿಟ್ಟರೇ ಬೇರೆಯವರಿಗೆ ಅವಕಾಶ ನೀಡಬಾರದು. ಪರೀಕ್ಷಾ ನಡೆಯುವ ಕೇಂದ್ರ ಸುತ್ತಲೂ 144 ಸೆಕ್ಷನ್‌ ಜಾರಿ ಮಾಡಲಾಗುತ್ತದೆ. ಕೇಂದ್ರದ ಒಳಗಡೆ ಮೊಬೈಲ್‌ ಫೋನ್‌ ನಿಷೇಧಿಸಲಾಗಿದೆ. ಥರ್ಮಲ್‌ ಸ್ಕ್ರೀನಿಂಗ್‌, ಸ್ಯಾನಿಟೈಸರ್‌, ಮಾಸ್ಕ್ ಕಡ್ಡಾಯವಾಗಿ ಬಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಪರೀಕ್ಷಾ ಕೇಂದ್ರಕ್ಕೆ ನಿಯೋಜನೆಯಾದ ಅಧಿಕಾರಿಗಳು ಮತ್ತು ಸಿಬ್ಬಂದಿ ಬೆಳಗ್ಗೆ 7:00ಕ್ಕೆ ಕಡ್ಡಾಯವಾಗಿ ಕೇಂದ್ರದಲ್ಲಿ ಹಾಜರಾಗಬೇಕು. ಗ್ರಾಮೀಣ ಭಾಗದ ವಿದ್ಯಾರ್ಥಿಗಳನ್ನು ಪರೀಕ್ಷಾ ಕೇಂದ್ರಕ್ಕೆ ಕರೆದುಕೊಂಡು ಬರಲು ಶಾಲೆ ಮುಖ್ಯಶಿಕ್ಷಕರು ಮತ್ತು ಮಾರ್ಗಧಿಕಾರಿಗಳನ್ನು ನೇಮಿಸಬೇಕು ಎಂದು ಸೂಚಿಸಿದರು. ಈಗಾಗಲೇ ಪಿಯು ಇಂಗ್ಲಿಷ್‌ ವಿಷಯ ಪರೀಕ್ಷೆ ಯಾವುದೇ ತೊಂದರೆ ಇಲ್ಲದಂತೆ ಮುಕ್ತಾಯವಾಗಿದೆ. ಅದರಂತೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯೂ ನಡೆಯಬೇಕು. ಈ ಬಗ್ಗೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹೆಚ್ಚಿನ ನಿಗಾವಹಿಸಬೇಕು ಎಂದು ಹೇಳಿದರು.

ಸರಕಾರ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಬಹಳ ಗಂಭೀರವಾಗಿ ಪರಿಗಣಿಸಿದೆ. ಹೀಗಾಗಿ ತಾಲೂಕು ಮಟ್ಟದ ಅಧಿಕಾರಿಗಳು ಯಾವುದೇ ತಪ್ಪು ನಡೆಯದಂತೆ ಎಚ್ಚರದಿಂದ ಹೆಜ್ಜೆ ಇಡಬೇಕು. ತಾಲೂಕಿನಲ್ಲಿ ಅತಿ ಹೆಚ್ಚು ಕೊರೊನಾ ಪಾಸಿಟಿವ್‌ ಪ್ರಕರಣಗಳು ಪತ್ತೆಯಾದ್ದರಿಂದ ವಿದ್ಯಾರ್ಥಿಗಳು ಮತ್ತು ಪಾಲಕರಲ್ಲಿ ವಿದ್ಯಾರ್ಥಿಗಳಲ್ಲಿ ಆತಂಕ ಇರುತ್ತದೆ. ಶಿಕ್ಷಣ ಇಲಾಖೆ ಸೂಚನೆಯಂತೆ ಸುರಕ್ಷಿತವಾಗಿ ಪರೀಕ್ಷೆ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಸೂಚಿಸಿದರು.

ಪರೀಕ್ಷಾ ಕೇಂದ್ರಗಳ ಸುತ್ತಲೂ ಒಬ್ಬರೂ ಬಾರದಂತೆ ಬಿಗಿ ಪೊಲೀಸ್‌ ಬಂದೋಬಸ್ತ್ ಮಾಡಬೇಕು ಎಂದು ಸಿಪಿಐ ಆರ್‌.ಎಂ. ನದಾಫ್‌ ಅವರಿಗೆ ಸೂಚನೆ ನೀಡಿದರು. ಪರೀಕ್ಷೆ ಬರೆಯುವ ವೇಳೆ ವಿದ್ಯಾರ್ಥಿಗಳ ಆರೋಗ್ಯದಲ್ಲಿ ಸಮಸ್ಯೆ ಕಂಡು ಬಂದಲ್ಲಿ ಪ್ರತ್ಯೇಕ ಕೋಣೆಯಲ್ಲಿ ಪರೀಕ್ಷೆ ಬರಿಸಲು ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ತಾಲೂಕು ಆರೋಗ್ಯಾಧಿಕಾರಿ ಡಾ| ಬನದೇಶ್ವರ, ಕ್ಷೇತ್ರ ಶಿಕ್ಷಣಾಧಿಕಾರಿ ಆರ್‌. ಇಂದಿರಾ, ಸಮನ್ವಯ ಅಧಿಕಾರಿ ಶಿವರಾಜ ಬಿರಾದಾರ, ಸಾರಿಗೆ ಘಟಕ ವ್ಯವಸ್ಥಾಪಕ ಹಸನ್‌ ಅಲಿ, ಶಿಕ್ಷಣ ಸಂಯೋಜಕ ಸುರೇಶ ಪಾಟೀಲ ಇದ್ದರು

ಟಾಪ್ ನ್ಯೂಸ್

K L RAhul

KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

1-wewrewre

The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

ಮಂತ್ರಾಲಯ ಶ್ರೀಗಳಿಂದ ತುಂಗಭದ್ರ ನದಿಯಲ್ಲಿ ದಂಡೋದಕ ಸ್ನಾನ

Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ

5-raichur

Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು

Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ

Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ

Raichruru-RTPS

Raichuru: ಆರ್‌ಟಿಪಿಎಸ್ ಬೂದಿ ಹೊಂಡದ ನೀರು ಕೃಷ್ಣಾ ನದಿಗೆ; ಜನರಲ್ಲಿ ಆತಂಕ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

K L RAhul

KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

1-wewrewre

The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.