ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಿ
Team Udayavani, Oct 6, 2018, 2:27 PM IST
ರಾಯಚೂರು: ಶಿಕ್ಷಕರು ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಬೇಕು. ಅಂದಾಗ ಅವರಲ್ಲಿಯೂ ವಿಜ್ಞಾನ ಕ್ಷೇತ್ರದ ಬಗ್ಗೆ ಆಸಕ್ತಿ ಮೂಡಲು ಸಾಧ್ಯ ಎಂದು ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಡಾ| ಕುಂಟೆಪ್ಪ ಗೌರಿಪುರ ಹೇಳಿದರು.
ರಾಜ್ಯ ವಿಜ್ಞಾನ ಪರಿಷತ್, ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ ಸಹಯೋಗದಲ್ಲಿ ನಗರದ ನವಯುಗ
ಪದವಿ ಪೂರ್ವ ಕಾಲೇಜ್‌ನಲ್ಲಿ ನಡೆದ 26ನೇ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶ-2018ರ ಜಿಲ್ಲಾ ಮಾರ್ಗದರ್ಶಿ
ಅಧ್ಯಾಪಕರ ತರಬೇತಿ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ಮಕ್ಕಳ ವಿಜ್ಞಾನ ಸಮಾವೇಶಕ್ಕೆ ವಿದ್ಯಾರ್ಥಿಗಳನ್ನು ಸಿದ್ಧಗೊಳಿಸಿ ಅವರನ್ನು ಜಿಲ್ಲಾ ಮತ್ತು ರಾಜ್ಯಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸುವಂತೆ ಮಾಡಬೇಕು. ಅವರಿಗೆ ಸ್ಪರ್ಧೆಯ ಸಂಪೂರ್ಣ ಮಾಹಿತಿ ನೀಡಿ ಅವರನ್ನು ಸಜ್ಜುಗೊಳಿಸುವ ಜವಾಬ್ದಾರಿ ಮಾರ್ಗದರ್ಶಿ ಅಧ್ಯಾಪಕರ ಮೇಲಿದೆ. ವಿದ್ಯಾರ್ಥಿಗಳಿಗೆ ವಿಜ್ಞಾನ ಮಾದರಿ ತಯಾರಿಸಲು ಪ್ರೇರೇಪಿಸಬೇಕಿದೆ ಎಂದರು.
ವಿಜ್ಞಾನ ಶಿಕ್ಷಕರ ಶ್ರಮ ಎಂದಿಗೂ ವ್ಯರ್ಥವಾಗುವುದಿಲ್ಲ. ಶಾಲೆಗಳಲ್ಲಿ ಕಲಿತ ವಿಜ್ಞಾನ ಚಿಂತನೆಗಳು ವಿದ್ಯಾರ್ಥಿಗಳ
ಮನಸ್ಸಿನ ಮೇಲೆ ಭಾರೀ ಪರಿಣಾಮ ಬೀರುತ್ತವೆ. ಮುಂದೆ ಅವರು ವಿಜ್ಞಾನ ಕ್ಷೇತ್ರಕ್ಕೆ ದೊಡ್ಡ ಕೊಡುಗೆ ನೀಡಬಲ್ಲರು ಎಂದರು. ನವಯುಗ ಶಿಕ್ಷಣ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ವಿಜ್ಞೆಶ್ವರನ್ ಮಾತನಾಡಿ, ವಿಶ್ವವಿದ್ಯಾಲಯಗಳಲ್ಲಿನ ಪ್ರಾಧ್ಯಾಪಕರು ಸಂಶೋಧನಾ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುತ್ತಾರೆ. ಆದರೆ, ಶಾಲಾ ಹಂತದಲ್ಲಿಯೇ ಶಿಕ್ಷಕರು ಮಾರ್ಗದರ್ಶನ ನೀಡುತ್ತಿರುವುದು ಸಂತಸದ ವಿಚಾರ ಎಂದರು.
ವಿಜ್ಞಾನ ಮತ್ತು ತಂತ್ರಜ್ಞಾನ ಜೀವನದ ಅವಿಭಾಜ್ಯ ಅಂಗಳಾಗಿವೆ. ಒಂದು ಕ್ಷಣ ಕೂಡ ಅವುಗಳನ್ನು ಬಿಟ್ಟಿರಲಾರದ ಸ್ಥಿತಿಗೆ ತಲುಪಿದ್ದೇವೆ. ಹೀಗಾಗಿ ವಿಜ್ಞಾನ ಬೆಳದರೆ ನಾವೂ ಬದಲಾಗುತ್ತೇವೆ ಎಂದರು.
ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶದ ಸಮನ್ವಯಾಧಿಕಾರಿ ಸಂತೋಷ ಪ್ರಾಸ್ತಾವಿಕ ಮಾತನಾಡಿದರು. ರಾಯಚೂರು ಕೃಷಿ ವಿವಿ ಪ್ರಾಧ್ಯಾಪಕ ಡಾ| ಪ್ರಕಾಶ, ಡಾ| ರಾಮಪ್ಪ ಮತ್ತು ರವೀಶ ಇದ್ದರು. ಪರಿಷತ್
ಜಿಲ್ಲಾ ಸದಸ್ಯ ವೆಂಕಟೇಶ ಬೇವಿನಬೆಂಚಿ ಸ್ವಾಗತಿಸಿದರು. ಛಾಯಾ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ
Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು
Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್: ಫೋಟೋ ಸಾಕ್ಷ್ಯ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.