ಮಾದರಿ ಶಾಲೆ ನಿರ್ಮಾಣಕ್ಕೆ ಸಂಕಲ್ಪ


Team Udayavani, Dec 20, 2020, 4:18 PM IST

ಮಾದರಿ ಶಾಲೆ ನಿರ್ಮಾಣಕ್ಕೆ  ಸಂಕಲ್ಪ

ದೇವದುರ್ಗ: ರಾಜ್ಯ ಸರಕಾರ ಆರಂಭಿಸಿದ ಶಾಲೆಗಳ ದತ್ತು ಯೋಜನೆಯಲ್ಲಿ ಶಾಸಕ ಕೆ.ಶಿವನಗೌಡ ನಾಯಕ ಮೂರು ಶಾಲೆಗಳು ದತ್ತು ಪಡೆದು ಕೋಟ್ಯಂತರ ರೂ. ವೆಚ್ಚದ ಕಾಮಗಾರಿ ಪ್ರಗತಿಯಲ್ಲಿವೆ.

ತಾಲೂಕಿನ ಮಸರಕಲ್‌ ಸರಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲೆ ಉದ್ಘಾಟನೆಗೊಂಡ ನೋಡಗರಗಮನ ಸೆಳೆಯುತ್ತಿದೆ. ಈ ಹಿಂದೆ ಅವ್ಯವಸ್ಥೆಯಲ್ಲಿರುವ ಶಾಲೆ ಮಳೆ ಬಂದಾಗ ಅಘೋಷಿತ ರಜೆ ನೀಡಲಾಗುತ್ತಿತು. ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು. ವಿದ್ಯಾಕಾಶಿಮಾಡಬೇಕು ಎನ್ನುವ ಸಂಕಲ್ಪ ಹೊಂದಿಗೆ ಶಾಸಕರು ಹೆಚ್ಚಿನ ಆಸಕ್ತಿ ವಹಿಸುವ ಜತೆ ಅವರ ಅನುದಾನದಲ್ಲಿ ಕೋಟ್ಯಂತರ ರೂ. ವೆಚ್ಚದಲ್ಲಿ 16 ಕೋಣೆಗಳ ನಿರ್ಮಾಣಕ್ಕೆ ಮುಂದಾದರೂ. ಗ್ರಂಥಾಲಯ, ನಲಿ ಕಲಿ, ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೋಣೆ ಶೌಚಾಲಯ ಕುಡಿಯುವ ನೀರು ಸೇರಿ ಅಗತ್ಯ ಮೂಲ ಸೌಲಭ್ಯ ಕಲ್ಪಿಸಲಾಗಿದೆ. ಉತ್ತಮ ಪರಿಸರ ವಾತಾವರಣ ಹೊಂದುವ ಹಿನ್ನೆಲೆ ಆವರಣದಲ್ಲಿ 50 ಸಸಿಗಳು ಹಾಕಲಾಗಿದೆ. ಶಾಲಾ ಮುಂಭಾಗದ ಕೋಣೆಗಳಿಗೆ ಗೋಡೆ ಬರಹ ಬರೆಸಲಾಗಿದೆ.

ಕೋವಿಡ್ ಸಂದರ್ಭ ಶಾಲೆಗಳು ರಜೆ ಹಿನ್ನೆಲೆ ಚಿತ್ರಕಲೆ ಶಿಕ್ಷಕರಿಂದಲೇ ವಿವಿಧ ಬಗ್ಗೆಯ ಚಿತ್ರಗಳು ಬಿಡಿಸಲಾಗಿದೆ. ಮಕ್ಕಳ ಕಲಿಕೆಗೆ ಇಲ್ಲಿನ ಚಿತ್ರಗಳು ಪೇರಣೆಯಾಗಿವೆ. ನಿರ್ವಹಣೆಗೆ ಶಿಕ್ಷಕರ ಮೇಲೆ ಹೆಚ್ಚಿನ ಜವಾಬ್ದಾರಿ ವಹಿಸಿದಂತಾಗಿದೆ.

ಮರುಜೀವ: 60ರ ದಶಕದಲ್ಲಿ ನಿರ್ಮಾಣ ಗೊಂಡಿರುವ ಕೋತ್ತಿದೊಡ್ಡಿ, ಅರಕೇರಾ,ಗಾಣಧಾಳ ಶಾಲೆಗಳು ತೀರ ಶಿಥಿಲಗೊಂಡು ಅವ್ಯವಸ್ಥೆಯಲ್ಲಿರುವ ಶಾಲೆಗಳಿಗೆ ಶಾಸಕರು ದತ್ತುಪಡೆದು ಮರು ಜೀವ ನೀಡಿದಂತಾಗಿದೆ. 2 ಕೋಟಿಅಭಾವದಲ್ಲಿ ಕಟ್ಟಡಗಳು ನಿರ್ಮಿಸಲಾಗುತ್ತಿವೆ. ಶೇ.80ರಷ್ಟು ಕಾಮಗಾರಿ ಪೂರ್ಣಗೊಂಡಿದ್ದು,  ಇನ್ನೇನು ಎರಡ್ಮೂರು ತಿಂಗಳಲ್ಲಿ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗಲಿವೆ. ಬೇರೊಂದು ಜಿಲ್ಲೆಯ ಅಧಿಕಾರಿಗಳು ಮತ್ತು ಶಿಕ್ಷಕರು ಇಲ್ಲಿನ ಮಾದರಿ ಶಾಲೆಗಳು ನೋಡುವಂತ ವ್ಯವಸ್ಥೆಯಲ್ಲಿ ಶಾಲೆಗಳನಿರ್ಮಾಣಕ್ಕೆ ಶಾಸಕರೇ ಹೆಚ್ಚಿನ ಆಸಕ್ತಿ ವಹಿಸಿದ್ದಾರೆ.ವಾರದಲ್ಲಿ ಮೂರು ಬಾರಿ ಕಟ್ಟಡ ಕಾಮಗಾರಿ ವೀಕ್ಷಣೆ ನಡೆಸಿದ್ದಾರೆ.

ಏನೇನು ಸೌಲಭ್ಯ?: ಶಾಸಕ ಕೆ.ಶಿವನಗೌಡ ಅವರ ಅನುದಾನದಲ್ಲಿ ಮೂರು ಶಾಲೆಗಳು ದತ್ತು ಪಡೆದುಶಾಲೆಗಳ ನಿರ್ಮಾಣಕ್ಕೆ ಮುಂದಾಗಿದ್ದು, ಸುಸ್ವಜಿತಕಟ್ಟಡಗಳ ಅಭಿವೃದ್ಧಿಗೆ ಪಣ ತೊಟ್ಟಿದ್ದಾರೆ. ನಲಿ ಕಲಿ ಕೋಣೆ, ಗ್ರಂಥಾಲಯ, ವಿದ್ಯಾರ್ಥಿಗಳಿಗೆ ಪ್ರತ್ಯೇಕಕೋಣೆ, ಶಿಕ್ಷಕ ಮತ್ತು ಶಿಕ್ಷಕಿಯರಿಗೆ ಶೌಚಾಲಯ, ಬಿಸಿಯೂಟ ಕೋಣೆ ವ್ಯವಸ್ಥೆ ಕಲ್ಪಿಸಲಾಗಿದೆ. ಶಾಲಾ ಆವರಣದಲ್ಲಿ ವಿವಿಧ ಸಸಿಗಳು ಹಾಕಲಾಗಿದೆ. ಗೋಡೆ ಬರಹ ಮಕ್ಕಳಿಗೆ ಕಲಿಕೆಗೆ ಪೇರಣೆ ಎಂಬಂತಾಗಿದೆ.

ಶೈಕ್ಷಣಿಕವಾಗಿ ಶಿಕ್ಷಣ ಕ್ಷೇತ್ರದಲ್ಲಿ ಹಿಂದುಳಿದ ತಾಲೂಕು ಎಂಬ ಹಣೆ ಪಟ್ಟಿ ತೊಲಗಿಸಲು ವಿದ್ಯಾಕಾಶಿ ಶಿಕ್ಷಣ ಮಾದರಿಯಲ್ಲೇ ಶಿಕ್ಷಣಕ್ಕೆ ಹೆಚ್ಚಿನ ಗಮನಹರಿಸಿದ್ದಾರೆ.

ಶಿಥಿಲ ಶಾಲೆ ಅಭಿವೃದ್ಧಿಗೆ ಆಗ್ರಹ: ದತ್ತು ಪಡೆದ ಶಾಲೆಗಳ ಅಭಿವೃದ್ಧಿ ಮಾದರಿಯಲ್ಲೇಶಿಥಿಲಗೊಂಡಿರುವ ತಾಲೂಕಿನ ಸರಕಾರಿ ಶಾಲೆಗಳ ಅಭಿವೃದ್ಧಿಗೆ ಶಾಸಕರು ಹೆಚ್ಚಿನ ಆಸಕ್ತಿ ವಹಿಸುವಜತೆ ಮಕ್ಕಳಿಗೆ ಅನುಕೂಲ ಕಲ್ಪಿಸಬೇಕು ಎಂಬ ಮಾತುಗಳು ಕೇಳಿ ಬರುತ್ತಿವೆ. ತರಗತಿಯ ಶಾಲೆಗಳ ಅಭಿವೃದ್ಧಿ ಬಲಪಡಿಸಲು ಮುಂದಾಗಬೇಕು ಎನ್ನುವ ಮಾತು ಶಿಕ್ಷಣ ಪ್ರೇಮಿಗಳಿಂದ ಕೇಳಿಬರುತ್ತಿದೆ. ಕ.ಕ ಅಭಿವೃದ್ಧಿ ಮಂಡಳಿ ಯೋಜನೆ ಅನುದಾನದಲ್ಲಿ ಶಿಥಿಲ ಗೊಂಡಿರುವ ಶಾಲೆಗಳ ಅಭಿವೃದ್ಧಿಗೆ ಶಾಸಕರು ಗಮನ ನೀಡಬೇಕು ಎಂದು ಎಸ್‌ಎಫ್‌ಐ ಮುಖಂಡ ಲಿಂಗಣ್ಣ ಆಗ್ರಹಿಸಿದರು.

ಕ್ಷೇತ್ರದಲ್ಲಿ ಮೂರು ಶಾಲೆಗಳು ದತ್ತು ಪಡೆದಿದ್ದೇನೆ. ಗಾಣಧಾಳ, ವಂದಲಿ, ಕೊಪ್ಪರ ಶಾಲೆಗಳು ನೂತನ ಕಟ್ಟಡ ನಿರ್ಮಿಸಲಾಗುತ್ತಿದೆ.ಶಿಕ್ಷಣ ಅಭಿವೃದ್ಧಿಗೆಬೇಕಾಗುವ ಅಗತ್ಯ ಸೌಲಭ್ಯ ಒದಗಿಸಲಾಗುತ್ತದೆ.-ಕೆ.ಶಿವನಗೌಡ ನಾಯಕ, ಶಾಸಕರು, ದೇವದುರ್ಗ.

 

-ನಾಗರಾಜ ತೇಲ್ಕರ್‌

ಟಾಪ್ ನ್ಯೂಸ್

Shimoga; Deport Zameer Ahmed: ​​MLA Channabasappa

Shimoga; ಜಮೀರ್‌ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂತ್ರಾಲಯ ಶ್ರೀಗಳಿಂದ ತುಂಗಭದ್ರ ನದಿಯಲ್ಲಿ ದಂಡೋದಕ ಸ್ನಾನ

Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ

5-raichur

Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು

Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ

Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ

Raichruru-RTPS

Raichuru: ಆರ್‌ಟಿಪಿಎಸ್ ಬೂದಿ ಹೊಂಡದ ನೀರು ಕೃಷ್ಣಾ ನದಿಗೆ; ಜನರಲ್ಲಿ ಆತಂಕ

11-dolly

Dhananjay: ಸಿಕ್ಕ ಸಿಕ್ಕಲೆಲ್ಲ ಕೇಳ್ತಿದ್ರಲ್ಲ; ಅದಕ್ಕೆ ಅನೌನ್ಸ್ ಮಾಡಿದೆ: ಡಾಲಿ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

4-editorial

Editorial: ಪಾಕ್‌ ಪ್ರೇರಿತ ಉಗ್ರರ ತಂತ್ರಕ್ಕೆ ಸೂಕ್ತ ಪ್ರತಿತಂತ್ರ ಈಗಿನ ತುರ್ತು

3-kananda-1

Kannada: ಕನ್ನಡನಾಡಲ್ಲಿ ಕನ್ನಡ ಕಲಿಕೆಯ ಹಾಡು-ಪಾಡು

Shimoga; Deport Zameer Ahmed: ​​MLA Channabasappa

Shimoga; ಜಮೀರ್‌ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.