![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Mar 26, 2022, 5:54 PM IST
ಸಿಂಧನೂರು: ತಾಲೂಕಿನ ಚನ್ನಳ್ಳಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ವೆಂಕಟರಾವ್ ನಾಡಗೌಡ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ಚನ್ನಳ್ಳಿ ಗ್ರಾಮದಲ್ಲಿ 30 ಲಕ್ಷ ರೂ. ಅಂದಾಜು ವೆಚ್ಚದಲ್ಲಿ ಎಸ್‌ಸಿಪಿ, ಟಿಎಸ್‌ಪಿ ಯೋಜನೆಯಡಿ ಸಿಸಿ ರಸ್ತೆ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಲಾಗಿದೆ ಎಂದರು.
ಮಾವಿನಮಡುಗು ಗ್ರಾಮದಲ್ಲಿ 30 ಲಕ್ಷ ರೂ. ವೆಚ್ಚದಲ್ಲಿ ಸಿಸಿ ರಸ್ತೆ ಕಾಮಗಾರಿ, ಸಿಂಗಾಪುರ ಗ್ರಾಮದಲ್ಲಿ 25 ಲಕ್ಷ ರೂ. ವೆಚ್ಚದಲ್ಲಿ ಸಿಸಿ ರಸ್ತೆ, ಮುಕ್ಕುಂದಾ ಗ್ರಾಮದಲ್ಲಿ 5 ಕೋಟಿ ರೂ. ವೆಚ್ಚದಲ್ಲಿ ಮುಕ್ಕುಂದಾದಿಂದ ಹುಡಾದವರೆಗೆ ರಸ್ತೆ ಡಾಂಬರೀಕರಣ, ಗೊಬ್ಬರಕಲ್ ಮತ್ತು ರೌಡಕುಂದಾ ಗ್ರಾಮದ ರೈತರ ಜಮೀನುಗಳಿಗೆ ನೀರು ಒದಗಿಸಲು 9.50 ಕೋಟಿ ರೂ. ವೆಚ್ಚದಲ್ಲಿ ಏತ ನೀರಾವರಿ ಯೋಜನೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಲಾಗಿದೆ. ಗುಣಮಟ್ಟದಲ್ಲಿ ಕಾಮಗಾರಿ ನಿರ್ವಹಿಸುವಂತೆ ಈಗಾಗಲೇ ಅಧಿ ಕಾರಿಗಳಿಗೆ ಸೂಚಿಸಲಾಗಿದೆ. ಸ್ಥಳೀಯರು ಕೂಡ ಮುಂದೆ ನಿಂತು ಕೆಲಸಗಳನ್ನು ತೆಗೆದುಕೊಳ್ಳಬೇಕು ಎಂದರು.
ಆಯಾ ಗ್ರಾಮದ ಮುಖಂಡರು, ಗ್ರಾಪಂ ಅಧ್ಯಕ್ಷರು, ಸದಸ್ಯರು ಸೇರಿದಂತೆ ಇತರರು ಇದ್ದರು
You seem to have an Ad Blocker on.
To continue reading, please turn it off or whitelist Udayavani.