ವೈದ್ಯರ ನೇಮಕಾತಿಗೆ ಆರೋಗ್ಯ ಸಚಿವರೊಂದಿಗೆ ಚರ್ಚಿಸಿ ಕ್ರಮ
ಚಿಕನ್ ಗುನ್ಯಾ ರೋಗ ನಿಯಂತ್ರಣಕ್ಕೆ ಬೇಕಾದ ಚಿಕಿತ್ಸೆಗೆ ಹೆಚ್ಚುವರಿ 120 ಹಾಸಿಗೆಗಳ ಘಟಕ ನಿರ್ಮಿಸಲಾಗಿದೆ.
Team Udayavani, Sep 28, 2021, 6:24 PM IST
ರಾಯಚೂರು: ಜಿಲ್ಲೆಯಲ್ಲಿ ಡೆಂಘೀ, ಚಿಕನ್ ಗುನ್ಯಾ ನಿಯಂತ್ರಣಕ್ಕೆ ರಿಮ್ಸ್ ಹಾಗೂ ಓಪೆಕ್ ಆಸ್ಪತ್ರೆಯಲ್ಲಿ ಮಕ್ಕಳ ತುರ್ತು ನಿಗಾ ಘಟಕ ಆರಂಭಿಸಲಾಗಿದೆ. ಹೆಚ್ಚುವರಿಯಾಗಿ ವೈದ್ಯರು ಮತ್ತು ಸಿಬ್ಬಂದಿ ನೇಮಕಾತಿಗೆ ಶೀಘ್ರದಲ್ಲೇ ವೈದ್ಯಕೀಯ ಸಚಿವರೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್ ತಿಳಿಸಿದರು.
ನಗರದ ರಿಮ್ಸ್ ಆಸ್ಪತ್ರೆಯ 3ನೇ ಮಹಡಿಯಲ್ಲಿ ಶಿಲ್ಪಾ ಫೌಂಡೇಶನ್ ಸಹಯೋಗದಲ್ಲಿ ನಿರ್ಮಿಸಿದ ಮಕ್ಕಳ ತುರ್ತು ಚಿಕಿತ್ಸಾ ಘಟಕಕ್ಕೆ ಸೋಮವಾರ ಚಾಲನೆ ನೀಡಿ ಮಾತನಾಡಿದರು. ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣದಲ್ಲಿದ್ದು, ಡೆಂಘೀ ಮತ್ತು ಚಿಕನ್ ಗುನ್ಯಾ ರೋಗ ನಿಯಂತ್ರಣಕ್ಕೆ ಬೇಕಾದ ಚಿಕಿತ್ಸೆಗೆ ಹೆಚ್ಚುವರಿ 120 ಹಾಸಿಗೆಗಳ ಘಟಕ ನಿರ್ಮಿಸಲಾಗಿದೆ.
ಸರ್ಕಾರದೊಂದಿಗೆ ಶಿಲ್ಪಾ ಫೌಂಡೇಶನ್ ಕೈಜೋಡಿಸಿ ಉತ್ತಮ ಮಕ್ಕಳ ಚಿಕಿತ್ಸಾ ಘಟಕ ಆರಂಭಿಸಿರುವುದು ಉತ್ತಮ ಕಾರ್ಯ ಎಂದರು. ಸಂಸದ ರಾಜಾ ಅಮರೇಶ್ವರ ನಾಯಕ, ರಾಯಚೂರು ನಗರ ಕ್ಷೇತ್ರದ ಶಾಸಕ ಡಾ| ಶಿವರಾಜ ಪಾಟೀಲ್, ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್, ಜಿಲ್ಲಾಧಿಕಾರಿ ಡಾ| ಬಿ.ಸಿ.ಸತೀಶ್, ಜಿಪಂ ಸಿಇಒ ಶೇಖ್ ತನ್ವೀರ್ ಆಸೀಫ್, ಎಡಿಸಿ ಕೆ.ಆರ್.ದುರುಗೇಶ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅ ಧಿಕಾರಿ ಡಾ| ಕೆ.ನಾಗರಾಜ್, ರಿಮ್ಸ್ ನಿರ್ದೇಶಕ ಡಾ| ಬಸವರಾಜ ಪೀರಾಪೂರ, ತಹಶೀಲ್ದಾರ್ ಡಾ| ಹಂಪಣ್ಣ ಸಜ್ಜನ್, ಶಿಲ್ಪಾ ಮೆಡಿಕೇರ್ ಸಂಸ್ಥೆಯ ಮುಖ್ಯಸ್ಥ ವಿಷ್ಣುಕಾಂತ ಬೂತಡ ಇದ್ದರು.
ಸುಸಜ್ಜಿತ ವ್ಯವಸ್ಥೆಯುಳ್ಳ ವಿಭಾಗ
ಅತ್ಯಾಧುನಿಕ ಸೌಲಭ್ಯಗಳನ್ನು ಒಳಗೊಂಡ ಸುಮಾರು 20 ಮಕ್ಕಳ ಬೆಡ್‌ಗಳನ್ನು ನಿರ್ಮಿಸುವ ಮೂಲಕ ಶಿಲ್ಪಾ ಫೌಂಡೇಶನ್ ರಿಮ್ಸ್ ಕಾರ್ಯಕ್ಷಮತೆ ಹೆಚ್ಚಳಕ್ಕೆ ಸಹಕರಿಸಿದೆ. ಕೊರೊನಾ ಮೂರನೇ ಅಲೆ ಜತೆಗೆ ಮಕ್ಕಳ ಚಿಕಿತ್ಸೆಗೆ ಬೇಕಾದ ಎಲ್ಲ ರೀತಿಯಾದ ಸಲಕರಣೆಗಳನ್ನು ಇಲ್ಲಿ ನೀಡಲಾಗಿದೆ. ಸುಮಾರು 55 ಲಕ್ಷ ರೂ. ವೆಚ್ಚದಲ್ಲಿ ಈ ಕೊಠಡಿ ನಿರ್ಮಿಸಲಾಗಿದೆ. ವೆಂಟಿಲೇಟರ್, ಎಕ್ಸರೇ ಮಶಿನ್ ಕೂಡ ಅಳವಡಿಸಲಾಗಿದೆ. ಮಕ್ಕಳನ್ನು ಬೇರೆ ಬೇರೆ ಕಡೆ ಅಲೆಸದಂತೆ ಎಲ್ಲ
ರೀತಿಯಲ್ಲೂ ಒಂದೇ ಕಡೆ ಚಿಕಿತ್ಸೆ ನೀಡುವ ವ್ಯವಸ್ಥೆ ಮಾಡಲಾಗಿದೆ. ಅಲ್ಲದೇ, ಗೋಡೆಗಳಿಗೆ ಕಾಟೂìನ್‌ಗಳನ್ನು ಬಿಡಿಸುವ ಮೂಲಕ ಆಕರ್ಷಕವಾಗಿ ನಿರ್ಮಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
National Education Policy: ಎನ್‌ಇಪಿ ಜಾರಿ ಗೊಂದಲ ಮಧ್ಯೆ ಶಿಕ್ಷಕರಿಗೆ ತರಬೇತಿ
Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mysuru: ಇನ್ಫೋಸಿಸ್ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್ ಫ್ರಂ ಹೋಂ
Professional Life: ಚಿತ್ರರಂಗಕ್ಕೆ ನಟ ದರ್ಶನ್ ಮರುಪ್ರವೇಶ!
Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ
Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ
Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್.ಷಡಾಕ್ಷರಿ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.