ಮಳೆ ಹಾನಿಗೆ ಸರ್ಕಾರದಿಂದ ಪರಿಹಾರ ವಿತರಣೆ
Team Udayavani, May 24, 2022, 12:32 PM IST
ಲಿಂಗಸುಗೂರು: ಇತ್ತೀಚಿಗೆ ಸುರಿದ ಮಳೆಗೆ ಹಾನಿಯಾಗಿರುವ ಬಗ್ಗೆ ಸಮೀಕ್ಷೆ ನಡೆಸಲಾಗುತ್ತಿದೆ. ಮಳೆ ಹಾನಿಗೆ ಸರ್ಕಾರದಿಂದ ಪರಿಹಾರ ವಿತರಣೆ ಮಾಡಲಾಗುವುದು ಎಂದು ಸಕ್ಕರೆ, ಜವಳಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ ತಿಳಿಸಿದರು.
ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಸೋಮವಾರ ಮಳೆ ಹಾನಿ ಪರಿಹಾರ ವಿತರಿಸಿ ಅವರು ಮಾತನಾಡಿದರು. ಈಗಾಗಲೇ ಮುಂಗಾರು ಪೂರ್ವ ಮಳೆಗೆ ಕೆಲವೆಡೆ ಜಾನುವಾರುಗಳು ಸಿಡಿಲು ಬಡಿದು ಜೀವಹಾನಿಯಾಗಿದೆ. ಜಾನುವಾರುಗಳ ಮಾಲೀಕರಿಗೆ ಸರ್ಕಾರದಿಂದ ಪ್ರಕೃತಿ ವಿಕೋಪ ನಿಧಿಯಡಿ ಪರಿಹಾರ ವಿತರಿಸಲಾಗುತ್ತಿದೆ. ಮಳೆಯಿಂದ ಮನೆಗಳಿಗೆ ಹಾನಿಯಾದ ಕುರಿತು 3 ಹಂತಗಳಲ್ಲಿ ವರ್ಗೀಕರಣ ಮಾಡಿ ಪರಿಹಾರ ವಿತರಿಸಲಾಗುವುದು. ಈಗಾಗಲೇ ಮನೆಗಳ ಹಾನಿ ಸಮೀಕ್ಷೆ ಕಾರ್ಯ ನಡೆದಿದೆ ಎಂದರು.
ಜಿಲ್ಲೆಯಲ್ಲಿ ಮಳೆಯಾಗಿದ್ದರಿಂದ ಕೃಷಿ ಚಟುವಟಿಕೆ ಚುರುಕುಗೊಂಡಿವೆ. ರೈತರೂ ಮುಂಗಾರು ಬಿತ್ತನೆಗೆ ಭೂಮಿ ಹಸನು ಮಾಡುತ್ತಿದ್ದಾರೆ. ಈಗಾಗಲೇ ಬಿತ್ತನೆ ಅಗತ್ಯದ ರಸಗೊಬ್ಬರ, ಬಿತ್ತನೆಗಳ ಬೀಜ ಕೂಡಲೇ ಸಂಗ್ರಹಿಸಲ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅದರಂತೆ ರೈತರಿಗೆ ಅಗತ್ಯ ಬೀಜಗಳ ಪೂರೈಕೆ ಮಾಡಲಾಗುವುದು. ಕೊರತೆಯಾಗದಂತೆ ಸೂಕ್ತ ಎಚ್ಚರಿಕೆ ವಹಿಸಲಾಗುವುದು ಎಂದರು.
ಈ ವೇಳೆ ಸಂಸದ ರಾಜಾ ಅಮರೇಶ್ವರ ನಾಯಕ, ಶಾಸಕರಾದ ಡಿ.ಎಸ್. ಹೂಲಗೇರಿ, ಬಸನಗೌಡ ತುರವಿಹಾಳ, ಜಿಲ್ಲಾಧಿಕಾರಿ ಚಂದ್ರಶೇಖರ ನಾಯ್ಕ, ಸಹಾಯಕ ಆಯುಕ್ತ ರಾಹುಲ್ ಸಂಕನೂರು, ತಹಶೀಲ್ದಾರರಾದ ಬಲರಾಮ ಕಟ್ಟಿಮನಿ, ಆರ್. ಕವಿತಾ, ಕಂದಾಯ ನಿರೀಕ್ಷಕ ರಾಮಕೃಷ್ಣ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಡಾ| ಶಿವಬಸಪ್ಪ, ಪಾಮಯ್ಯ ಮುರಾರಿ, ಗಜೇಂದ್ರ ನಾಯಕ ಸೇರಿದಂತೆ ಇತರರಿದ್ದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.