ರೈತರಿಗೆ ಹೆಚ್ಚಿನ ಶುಲ್ಕ ವಿಧಿಸಬೇಡಿ
Team Udayavani, Mar 6, 2018, 4:11 PM IST
ಲಿಂಗಸುಗೂರು: ಪಟ್ಟಣದ ಎಪಿಎಂಸಿ ಆವರಣದಲ್ಲಿ ಕಡಲೆ ಖರೀದಿ ಕೇಂದ್ರಕ್ಕೆ ಕರಡಕಲ್ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಗಿರಿಮಲ್ಲನಗೌಡ ಪಾಟೀಲ್ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು ಸರ್ಕಾರ ಕಡಲೆ ಖರೀದಿ ಕೇಂದ್ರ ಆರಂಭಿಸಿರುವುದು ಸಂತಸದ ವಿಷಯವಾಗಿದೆ. ಕೇಂದ್ರದ ಅಧಿಕಾರಿಗಳು ರೈತರಿಗೆ ಯಾವುದೇ ತೊಂದರೆಯಾಗದಂತೆ ಕಡಲೆ ಖರೀದಿ ಮಾಡಿ, ತೂಕದಲ್ಲಿ ವ್ಯತ್ಯಾಸ ಕಂಡುಬರದಂತೆ ಹಾಗೂ ಹೆಚ್ಚಿನ ಶುಲ್ಕ ವಿಧಿಸದೇ ನ್ಯಾಯಯುತವಾಗಿ ಖರೀದಿ ಮಾಡಬೇಕು ಎಂದರು.
ಪ್ರತಿ ಎಕರೆಗೆ 5 ಕ್ವಿಂಟಲ್ ಕಡಲೆ ಖರೀದಿ ಮಾಡಲಾಗುವುದು. ಒಬ್ಬ ರೈತರಿಂದ 15 ಕ್ವಿಂಟಲ್ ಮಾತ್ರ ಕಡಲೆ ಖರೀಸಲಾಗುವುದು. ಆನ್‌ಲೈನ್‌ನಲ್ಲಿ ನೋಂದಾಯಿಸಲಾಗಿದೆ. ಇಲ್ಲಿವರಿಗೂ 926 ರೈತರು ಹೆಸರು ನೋಂದಾಯಿಸಿದ್ದಾರೆ. ಮಾ.6ರಂದು ನೋಂದಣಿಗೆ ಕೊನೆ ದಿನವಾಗಿದೆ. ಪ್ರತಿ ಕ್ವಿಂಟಲ್ ಕಡಲೆಗೆ 4,400 ರೂ.ಬೆಂಬಲ ಬೆಲೆ ನೀಡಿ ಖರೀದಿಸಲಾಗುವುದು ಎಂದು ವಿಎಸ್‌ಎನ್‌ಎನ್
ಕಾರ್ಯದರ್ಶಿ ಸಿದ್ದಲಿಂಗಪ್ಪ ಕುಂಬಾರ ತಿಳಿಸಿದ್ದಾರೆ.
ಸಹಕಾರಿ ಅಭಿವೃದ್ಧಿ ಅಧಿಕಾರಿ ಶೇಖ್ ಹುಸೇನ್, ಮುಖಂಡರಾದ ಸಿದ್ಧಲಿಂಗಪ್ಪ, ಈಶ್ವರಪ್ಪ ಸಾಲ್ಮನಿ, ವೆಂಕನಗೌಡ ಐದನಾಳ, ಬಸವರಾಜ ಸೇರಿದಂತೆ ವಿವಿಧ ಗ್ರಾಮಗಳ ರೈತರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Yellapura: ಬಸ್- ಬೈಕ್ ಡಿಕ್ಕಿ; ಟಯರ್ ತಲೆ ಮೇಲೆ ಹರಿದು ಇಬ್ಬರು ಸ್ಥಳದಲ್ಲೇ ಮೃತ್ಯು
Delhi; ಸೋಲಿನ ಭಯದಿಂದ ಬಿಜೆಪಿ ಆಪರೇಶನ್ ಕಮಲ ಆರಂಭಿಸಿದೆ: ಅರವಿಂದ ಕೇಜ್ರಿವಾಲ್
Mandya: ಅಪ್ರಾಪ್ತರ ಪ್ರೇಮ ಪ್ರಕರಣ; ಜಿಲೆಟಿನ್ ಸ್ಪೋಟಿಸಿ ಯುವಕ ಆತ್ಮಹತ್ಯೆ
Punjalkatte: ಘನತ್ಯಾಜ್ಯ ಘಟಕ ಆರಂಭಕ್ಕೆ ಇನ್ನೂ ಮೀನ ಮೇಷ ಎಣಿಕೆ
Hubli; ಹಂದಿ ಸಾಕಾಣಿಕೆದಾರ ಕೊಲೆ ಪ್ರಕರಣ; ಮೃತನ ಅಕ್ಕನ ಗಂಡ ಸೇರಿ ನಾಲ್ವರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.