ಕರ ವಸೂಲಿ ನಿರ್ಲಕ್ಷಿಸಬೇಡಿ
Team Udayavani, Nov 26, 2019, 1:42 PM IST
ಲಿಂಗಸುಗೂರು: ಗ್ರಾಮೀಣ ಭಾಗದ ಅಭಿವೃದ್ಧಿಗೆ ಕರ ವಸೂಲಿ ಅಗತ್ಯವಾಗಿದೆ. ಹೀಗಾಗಿ ಕರ ವಸೂಲಿಯಲ್ಲಿ ನಿರ್ಲಕ್ಷ್ಯ ಮಾಡುವುದು ಬೇಡ ಎಂದು ಶಾಸಕ ಡಿ.ಎಸ್.ಹೂಲಗೇರಿ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರು.
ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಅವರು, ಪ್ರತಿ ಗ್ರಾಮ ಪಂಚಾಯಿತಿಗೆ ಕರ ವಸೂಲಿಗಾಗಿ ಗುರಿ ನೀಡಲಾಗಿದೆ. ಆದರೆ ಕರ ವಸೂಲಿಗೆ ಪಿಡಿಒಗಳು ಆಸಕ್ತಿ ತೋರುತ್ತಿಲ್ಲ, ಕರ ವಸೂಲಿಯಾಗದಿದ್ದರೆ ಗ್ರಾಮಗಳ ಅಭಿವೃದ್ಧಿ ಹೇಗೆ ಸಾಧ್ಯ. ಗ್ರಾಮದ ಅಭಿವೃದ್ಧಿಯಲ್ಲಿ ಪಕ್ಷಪಾತ ಮಾಡಬಾರದು. ಸಾರ್ವಜನಿಕರ ಹಿತಕ್ಕಾಗಿ ಕೆಲಸ ಮಾಡಬೇಕು. ನಿಮ್ಮ ಬಗ್ಗೆ ಸಾಕಷ್ಟು ದೂರುಗಳು ಬಂದಿವೆ. ತಪ್ಪುಗಳನ್ನು ಸರಿಪಡಿಸಿಕೊಂಡು ಕರ್ತವ್ಯ ನಿಭಾಯಿಸಿ ಎಂದು ಆನ್ವರಿ ಪಿಡಿಒಗೆ ಸೂಚನೆ ನೀಡಿದರು.
ತೆರಿಗೆ ಸಂಗ್ರಹ ನಿರೀಕ್ಷೆಗಿಂತ ಕಡಿಮೆಯಾಗುತ್ತಿದೆ. ತೆರಿಗೆ ಸಂಗ್ರಹದಲ್ಲಿ ನಿರ್ಲಕ್ಷ್ಯ ತೋರಿದರೆ ನಿಮ್ಮ ವಿರುದ್ಧ ಕ್ರಮ ಅನಿವಾರ್ಯವಾಗುತ್ತದೆ. ಯಾವುದೇ ಕಾಮಗಾರಿ ಬಗ್ಗೆ ಕೇಳಿದರೆ ಮಾಡಬೇಕು ಅಂತ ಹೇಳ್ತಿರಿ ಹಾಗಾದರೆ ಎಷ್ಟು ಕಾಮಗಾರಿ ಮುಗಿದಿವೆ. ನೀವು ಹೇಳಿದ್ದನ್ನು ಕೇಳಿಕೊಂಡು ಹೋಗಲು ನಾವು ಇಲ್ಲಿಗೆ ಬಂದಿಲ್ಲ, ಪ್ರಗತಿ ವರದಿ ಬೇಕು. ಸಭೆಗೆ ಬರುವಾಗ ಸಮಗ್ರ ಮಾಹಿತಿ ತರಬೇಕೆಂದು ಜಿಪಂ ಅಧ್ಯಕ್ಷೆ ಆದಿಮನಿ ವೀರಲಕ್ಷ್ಮೀ ಪಿಡಿಒಗಳಿಗೆ ಸೂಚಿಸಿದರು.
ಕೆಲವು ಗ್ರಾಮ ಪಂಚಾಯಿತಿಗಳಲ್ಲಿ 2018ರ ಅನುದಾನ ಇನ್ನೂ ಖರ್ಚು ಮಾಡಿಲ್ಲ, ತಾತ್ಸಾರ ಮಾಡುವುದು ಸರಿಯಲ್ಲ ಡಿಸೆಂಬರ್ ಅಂತ್ಯದೊಳಗೆ ಹಳೆಯ ಅನುದಾನ ಖರ್ಚು ಮಾಡಿ ವರದಿ ಸಲ್ಲಿಸಬೇಕು. 2019-20ನೇ ಸಾಲಿನ ಅನುದಾನವನ್ನು ಮಾರ್ಚ್ ಅಂತ್ಯದೊಳಗೆ ಖರ್ಚು ಮಾಡುವಂತೆ ಜಿಪಂ ಸಿಇಒ ಲಕ್ಷ್ಮೀ ಕಾಂತರೆಡ್ಡಿ ಅಧಿಕಾರಿಗಳಿಗೆ ಸೂಚಿಸಿದರು. ತಾಪಂ ಅಧ್ಯಕ್ಷೆ ಶ್ವೇತಾ ಪಾಟೀಲ, ಜಿಪಂ ಸದಸ್ಯರಾದ ಬಸನಗೌಡ ಕಂಬಳಿ, ಸಂಗಣ್ಣ ದೇಸಾಯಿ, ರೇವತಿ ಚಂದ್ರಶೇಖರ, ತಾಪಂ ಇಒ ಪವನಕುಮಾರ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.